October 5, 2024

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸಂಘಟನೆಯಿಂದ ಮಂಗಳವಾರ ಮೂಡಿಗೆರೆ ಪಟ್ಟಣದ ಸಿಡಿಪಿಒ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಳಿಕ ತಹಸೀಲ್ದಾರ್ ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಐಯುಟಿಸಿ ಅಧ್ಯಕ್ಷೆ ಕೆ.ಆರ್.ಶೈಲಾ ಮಾತನಾಡಿ, ಅಲ್ಪ ಗೌರವಧನಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕರ್ತವ್ಯ ನಿರ್ವಹಿಸುತ್ತಿದ್ದ ಅನೇಕ ವರ್ಷದಿಂದ ಗೌರವಧನ ಹೆಚ್ಚಳಕ್ಕೆ ಪ್ರತಿಭಟನೆ ಮಾಡಿಕೊಂಡು ಬಂದಿದ್ದರೂ ಇಲ್ಲಿಯವರೆಗೂ ಯಾವುದೇ ಸರಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ. ಇತ್ತೀಚೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಅಂಗನವಾಡಿ ಕಾರ್ಯದ ಜತೆಗೆ ಸರಕಾರದ ಅನೇಕ ಕೆಲಸಗಳಿಗೆ ನಮ್ಮನ್ನೇ ಬಳಸಿಕೊಳ್ಳುತ್ತಿದ್ದರಿಂದ ನಮಗೆ ಒತ್ತಡ ಹೆಚ್ಚಾಗುತ್ತಿದೆ. ಇದರಿಂದ ಮುಕ್ತಿ ಸಿಗಬೇಕೆಂದು ಆಗ್ರಹಿಸಿದರು.

ರಾಜ್ಯ ಸರಕಾರ ಅಂಗನವಾಡಿ ಕಾರ್ಯಕರ್ತೆಯರನ್ನು ಬೇರೆ ಇಲಾಖೆಯ ಕೆಲಸಕ್ಕೆ ಹಂಚಿಕೆ ಮಾಡಬಾರದು. ಗುಣಮಟ್ಟದ ಮೊಬೈಲ್ ಅಥವಾ ಮಿನಿ ಟ್ಯಾಬ್ ನೀಡಬೇಕು. ಮೊಟ್ಟೆ ಖರೀದಿ ಜವಾಬ್ದಾರಿಯನ್ನು ಬಾಲ ವಿಕಾಸ ಸಮಿತಿಗೆ ನೀಡಬೇಕು. ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರದ ಬಾಡಿಗೆ ಹಣ ಹಾಗೂ ಸ್ವಚ್ಛಗೊಳಿಸುವ ಸಲಕರಣೆಗಳಿಗೆ ಹಣ ಬಿಡುಗಡೆ ಮಾಡಬೇಕು. ಅಲ್ಲದೇ ಗ್ಯಾಸ್ ಮತ್ತು ವಿದ್ಯುತ್ ಬಿಲ್ ಪಾವತಿಸಬೇಕು. ಧೀರ್ಘಕಾಲ ಇಲಾಖೆಯಲ್ಲಿನ ಕರ್ತವ್ಯ ನಿರ್ವಹಿಸುತ್ತಿರುವ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗಾವಣೆ ಮಾಡಬೇಕು. ಈಗಿನ ಸರಕಾರ ಘೋಷಿಸಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕರಿಗೆ 10 ಸಾವಿರ, ನಿವೃತ್ತರಿಗೆ 3 ಲಕ್ಷ ಹಿಡಿಗಂಟು, ಮಾಸಿಕ 5 ಸಾವಿರ ಪೆನ್ಷನ್ ಒದಗಿಸಬೇಕೆಂದು ಒತ್ತಾಯಿಸಿದರು.

ಎಐಯುಟಿಸಿ ಉಪಾಧ್ಯಕ್ಷೆ ಎಂ.ಡಿ.ವನಜಾಕ್ಷಿ, ಎ.ಆರ್.ದೀಪಿಕ, ಗೌರಮ್ಮ, ಶೋಭಾ, ಮಹಾಲಕ್ಷ್ಮಿ, ಸುಮತಿ, ರಮ್ಯ ಮತ್ತಿತರರಿದ್ದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ