October 5, 2024

ಸ್ವಾರ್ಥ ಜೀವನವನ್ನು ಬಿಟ್ಟು ಮುಂದಿನ ಪೀಳಿಗೆಗೆ ಅನುಕೂಲ ಮಾಡಿಕೊಡುವ ದೂರದೃಷ್ಟಿ ಹೊಂದಿದ್ದ ನಾಡ ಪ್ರಭು ಕೆಂಪೇಗೌಡರ ಆದರ್ಶ ಬದುಕು ಎಲ್ಲರೂ ಅಳವಡಿಸಿಕೊಂಡರೆ ಈ ಸಮಾಜದಲ್ಲಿ ಉತ್ತಮ ವಾತಾವರಣ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ಅವರು ಮಂಗಳವಾರ ಮೂಡಿಗೆರೆ ಪಟ್ಟಣದ ತಾ.ಪಂ.ಯ ಪಂಡಿತ್ ದೀನ್ ದಯಾಳ್ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರು ಮಹಾನಗರವನ್ನು ಇಡೀ ಜಗತ್ತೇ ತಿರುಗಿ ನೋಡುವಂತೆ ಮಾಡಿದ ಕೆಂಪೇಗೌಡರ ಸಾಧನೆ ಹಾಗೂ ಅವರ ಜೀವನ ಚರಿತ್ರೆ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ. ಕೆಂಪೇಗೌಡ ಸೇರಿದಂತೆ ಈ ನಾಡಿನ ಹಾಗೂ ಸಮಾಜದ ಒಳಿತಿಗಾಗಿ ಶ್ರಮಿಸಿದ ಎಲ್ಲಾ ಮಹನೀಯರ ಜಯಂತಿಯನ್ನು ತಾಲೂಕು ಆಡಳಿತ ಅದ್ದೂರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಒಳ್ಳೆಯ ವಿಚಾರ ನೀಡಿದಾಗ ಮಾತ್ರ ಮಹನೀಯರ ಜಯಂತಿಗೆ ಅರ್ಥ ಸಿಗುತ್ತದೆ ಎಂದು ಹೇಳಿದರು.

ಯಾವುದೇ ಮಹನೀಯರ ಜಯಂತಿ ನಡೆದರೂ ಎಲ್ಲಾ ಅಧಿಕಾರಿಗಳು ಹಾಗೂ ಸಂಘದ ಸಂಸ್ಥಗಳ ಪದಾಧಿಕಾರಿಗಳನ್ನು ಸೇರಿಸಿಕೊಂಡು ಅಚ್ಚುಕಟ್ಟಾಗಿ ಮಾಡಬೇಕೆಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಪ.ಪಂ. ಸದಸ್ಯರಾದ ಆಶಾ ಮೋಹನ್, ಕಮಲಾಕ್ಷಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ, ಕೆ.ಜಿ.ಎಫ. ಮಾಜಿ ಅಧ್ಯಕ್ಷ ಬಿ.ಎಸ್.ಜಯರಾಂಗೌಡ ಬೆಳೆಗಾರ ಸಂಘದ ಅಧ್ಯಕ್ಷ ಭಾಲಕೃಷ್ಣ, ಕೆಂಪೇಗೌಡ ಒಕ್ಕಲಿಗರ ವೇದಿಕೆ ಅಧ್ಯಕ್ಷ ಬ್ರಿಜೇಶ್ ಕಡಿದಾಳು, ಕಾಫಿನಾಡು ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಕಲಾವತಿ ರಾಜಣ್ಣ, ತಾ.ಪಂ. ಮಾಜಿ ಅಧ್ಯಕ್ಷ ಕೆ.ಸಿ.ರತನ್, ಒಕ್ಕಲಿಗರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಡಿ.ಕೆ.ಲಕ್ಷ್ಮಣ್‍ಗೌಡ, ತಹಸೀಲ್ದಾರ್ ತಿಪ್ಪೇಸ್ವಾಮಿ, ತಾ.ಪಂ. ಇಒ ಹರ್ಷಕುಮಾರ್, ನೌಕರರ ಸಂಘದ ಅಧ್ಯಕ್ಷ ಕೃಷ್ಣಕುಮಾರ್, ಶಿರಸ್ತೆದಾರ್ ಕುಮಾರ್ ಮತ್ತಿತರರಿದ್ದರು.

ಕಾರ್ಯಕ್ರಮದಲ್ಲಿ ಸುಚಿತ್ರ ಪ್ರಸನ್ನ ಪ್ರಾರ್ಥನೆ ಮಾಡಿದರು, ಕ.ಸಾ.ಪ. ಬಣಕಲ್ ಹೋಬಳಿ ಅಧ್ಯಕ್ಷ ಆದರ್ಶ ತರುವೆ ಪ್ರಾಸ್ತಾವಿಕವಾಗಿ ಮಾತನಾಡಿದರು, ಕೆಂಪೇಗೌಡ ಒಕ್ಕಲಿಗರ ವೇದಿಕೆ ಪ್ರಧಾನ ಕಾರ್ಯದರ್ಶಿ ಬಿ.ಪಿ. ಪ್ರಸಾದ್ ಬಕ್ಕಿ ಕೆಂಪೇಗೌಡರ ಜೀವನ ಚರಿತ್ರೆ, ಸಾಧನೆಯ ಬಗ್ಗೆ ಮಾಹಿತಿ ನೀಡಿದರು. ಗುರುರಾಜ ಹಾಲ್ಮಟ್ ಕಾರ್ಯಕ್ರಮ ನಿರೂಪಿಸಿದರು, ತಾ.ಪಂ. ಅಧಿಕಾರಿ ಪ್ರಕಾಶ್ ಸ್ವಾಗತಿಸಿ, ತಾಲ್ಲೂಕು ಕ್ರೀಡಾಧಿಕಾರಿ ಶ್ರೀನಿವಾಸ್ ವಂದಿಸಿದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ