October 5, 2024

ಮನೆಯ ಪಕ್ಕದ ಶೆಡ್ ಗೆ ಕಾಡಾನೆಯೊಂದು ನುಗ್ಗಿ ಶೆಡ್ ನಲ್ಲಿದ್ದ ಕಾರನ್ನು ಜಖಂಗೊಳಿಸಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಿಕೆ ಗ್ರಾಮದಲ್ಲಿ ಘಟನೆ ನಡೆದಿದೆ.

ಹೇರಿಕೆ ಗ್ರಾಮದ ಮಹೇಶ್ ಎಂಬುವವರ ಕಾರು ಜಖಂ ಗೊಳಿಸಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ.

ನಿನ್ನೆ ರಾತ್ರಿ ಸಮಯ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಆನೆ ಮನೆ ಬಳಿ ಬಂದು ಶೆಡ್ ಅನ್ನು ಪೂರ್ಣ ಬೀಳಿಸಿದೆ ಹಾಗೆಯೇ ಶೆಡ್ ನಲ್ಲಿ ನಿಲ್ಲಿಸಿದ್ದ ಮಾರುತಿ ಇಗ್ನಿಷ್ ಕಾರನ್ನು ಜಖಂಗೊಳಿಸಿದೆ. ಕಾರಿನ ಹಿಂಭಾಗದ ಗ್ಲಾಸ್ ಸಂಪೂರ್ಣ ಪುಡಿಯಾಗಿದೆ.

ಸ್ಥಳಕ್ಕೆ  ಮೂಡಿಗೆರೆಯ ಅರಣ್ಯ ಇಲಾಖೆ ಆನೆ ಕಾರ್ಯಪಡೆ ಸಿಬ್ಬಂದಿಗಳಿಂದ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಊರುಬಗೆ ಭಾಗದಲ್ಲಿ ಕಳೆದ ಅನೇಕ ದಿನಗಳಿಂದ ಮೂರ್ನಾಲ್ಕು ಕಾಡಾನೆಗಳು ಸತತವಾಗಿ ಗ್ರಾಮದೊಳಗೆ ದಾಳಿಯಿಡುತ್ತಿವೆ. ಹಗಲು ರಾತ್ರಿಯೆನ್ನದೇ ರಸ್ತೆಯಲ್ಲಿ, ಕಾಫಿ ತೋಟದಲ್ಲಿ ಓಡಾಡುತ್ತಿವೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಕಾರ್ಮಿಕರು ತೋಟದ ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಕಾಡಾನೆಗಳನ್ನು ನಿಯಂತ್ರಿಸುವಂತೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೆಡ್ ಮತ್ತು ಕಾರು ಜಖಂ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

ನಿರಂತರ ಸುದ್ದಿಗಳಿಗಾಗಿ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ

https://chat.whatsapp.com/DDXjmfQaBa0HJQqmKf7y89

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ