October 5, 2024

ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಪಿಎಂಸಿಗಳಲ್ಲಿ ಕೃಷಿ ಉತ್ಪನ್ನಗಳ ಖರೀದಿ ಮತ್ತು ಮಾರಾಟದ ಮೇಲಿನ ನಿರ್ಬಂಧವನ್ನು ತೆಗೆದು ಹಾಕಿದ್ದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಕಾಯ್ದೆಯನ್ನು ಕೈ ಬಿಡುವ ಉದ್ದೇಶದ ಹೊಸ ಮಸೂದೆಯನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು.

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಮಸೂದೆ ಮಂಡಿಸಿದರು. ಇದರಿಂದಾಗಿ ಈ ಹಿಂದೆ ಇದ್ದ ವ್ಯವಸ್ಥೆಯೇ ಮತ್ತೆ ಅನುಷ್ಠಾನಕ್ಕೆ ಬರಲಿದೆ. ಅದರ ಪ್ರಕಾರ, ಮಾರುಕಟ್ಟೆ ಪ್ರಾಂಗಣ, ಮಾರುಕಟ್ಟೆ ಉಪ ಪ್ರಾಂಗಣ, ಉಪ ಮಾರುಕಟ್ಟೆ ಪ್ರಾಂಗಣ, ಖಾಸಗಿ ಮಾರುಕಟ್ಟೆ ಪ್ರಾಂಗಣ ಅಥವಾ ಸಂದರ್ಭಾನುಸಾರ ರೈತ-ಗ್ರಾಹಕ ಮಾರುಕಟ್ಟೆ ಪ್ರಾಂಗಣವನ್ನು ಬಿಟ್ಟು, ಬೇರೆ ಕಡೆ ಅಂದರೆ ರೈತನ ಹೊಲ, ಮನೆಗಳ ಅವರಣದಲ್ಲಿ ಕೃಷಿ ಉತ್ಪನ್ನಗಳ ಖರೀದಿ ಮತ್ತು ಮಾರಾಟ ಮಾಡುವಂತಿಲ್ಲ.

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸ್ಥಳ ಉಪಯೋಗಿಸಲು ಪರವಾನಗಿ ಪಡೆಯಬೇಕು. ಅಲ್ಲದೆ, ವ್ಯಾಪಾರ, ದಲ್ಲಾಳಿ, ಸಂಸ್ಕರಣಗಾರ, ದಾಸ್ತಾನುಗಾರ ಪರವಾನಗಿ ಪಡೆಯುವುದು ಕಡ್ಡಾಯ. ಇದರ ಉಲ್ಲಂಘನೆಯಾದರೆ ಶಿಕ್ಷೆಗೆ ಒಳಪಡಬೇಕಾಗುತ್ತದೆ. ಅಪರಾದ ಸಾಬೀತಾದರೆ ದಂಡ ಮತ್ತು ಆರು ತಿಂಗಳವರೆಗೆ ಕಾರಗೃಹವಾಸಕ್ಕೆ ಒಳಪಡಬೇಕಾಗುತ್ತದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ