October 5, 2024

ಕಾಫಿ ತೋಟದ ಬೇಲಿ ದಾಟುವಾಗ ತಂತಿಗೆ ಸಿಲುಕಿ ಚಿರತೆಯೊಂದು ಒದ್ದಾಡುತ್ತಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಎಂಬಲ್ಲಿ ಈ  ಘಟನೆ ನಡೆದಿದೆ. ತಂತಿಬೇಲಿ ಚಿರತೆಯ ಹೊಟ್ಟಯನ್ನು ಸೀಳಿದೆ ಎನ್ನಲಾಗುತ್ತಿದೆ. ಚಿರತೆ ನಿನ್ನೆ ರಾತ್ರಿ ತಂತಿಬೇಲಿಗೆ ಸಿಲುಕಿಕೊಂಡಿದ್ದು, ಇಂದು ಬೆಳಿಗ್ಗೆ ಗ್ರಾಮಸ್ಥರ ಗಮನಕ್ಕೆ ಬಂದಿದೆ. ರಸ್ತೆಯಂಚಿನಲ್ಲಿಯೇ ಈ ಘಟನೆ ನಡೆದಿದೆ. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಸುದ್ದಿಮುಟ್ಟಿಸಿದ್ದಾರೆ. ಸುದ್ದಿತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಅಧಿಕಾರಿಗಳು, ಜನರನ್ನು ಕಂಡು ಚಿರತೆ ಮತ್ತಷ್ಟು ಉದ್ರೇಕಕಾರಿಯಾಗಿ ವರ್ತಿಸುತ್ತಿದೆ. ಚಿರತೆಯ ಸಮೀಪಕ್ಕೆ ತೆರಳಲು ಅರಣ್ಯ ಇಲಾಖೆ ಸಿಬ್ಬಂದಿ ಹಿಂದೇಟು ಹಾಕುತ್ತಿದ್ದಾರೆ. ಚಿರತೆಯನ್ನು ತಂತಿಯಿಂದ ಬಿಡಿಸಿ  ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ಶಿವಮೊಗ್ಗದಿಂದ ಅರವಳಿಕೆ ತಜ್ಞರನ್ನು ಶಿವಮೊಗ್ಗದಿಂದ ಕರೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ