October 5, 2024

ಸಮಾಜ ನಮಗೇನು ಕೊಡುತ್ತೆ ಎನ್ನುವುದಕ್ಕಿಂತ ನಾವು ಸಮಾಜಕ್ಕೆ ಏನು ಕೊಡುತ್ತಿದ್ದೇವೆ ಎಂಬುದನ್ನು ಆರಿತುಕೊಳ್ಳಬೇಕು ಎಂದು ಶೌರ್ಯ ವಿಪತ್ತು ಘಟಕದ ಮಾಸ್ಟರ್ ಪ್ರವೀಣ್ ಪೂಜಾರಿ ತಿಳಿಸಿದರು.

ಮೂಡಿಗೆರೆ ಪಟ್ಟಣದ ಛತ್ರ ಮೈದಾನ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿ ಮೂಡಿಗೆರೆ ಹಾಗೂ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ನೀರು ಉಳಿಸಿ, ಸ್ವಚ್ಛತೆಯನ್ನು ಕಾಪಾಡಿ, ನೈರ್ಮಲ್ಯತೆ ಬಗ್ಗೆ ಜಾಗೃತಿ ಮೂಡಿಸುವ ಬೀದಿ ನಾಟಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು. ನಾವೆಲ್ಲರೂ ನಮ್ಮ ನಮ್ಮ ಪರಿಸರವನ್ನು ಸ್ವಚ್ಛತೆಯಾಗಿಟ್ಟುಕೊಂಡರೆ ನಮ್ಮ ದೇಶವೇ ಸ್ವಚ್ಛತೆ ಮಾಡಿದಂತೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಮಾರಿ ಸುಶೀಲ ನಮ್ಮ ಊರನ್ನು ನಮ್ಮ ಪರಿಸರವನ್ನು ನಾವು ಸ್ವಚ್ಛವಾಗಿ ಇಟ್ಟುಕೊಂಡರೆ ರೋಗರುಜಿನಗಳು ದೂರಾಗುತ್ತದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯಿತಿನ ಸದಸ್ಯ ಮನೋಜ್ ಮಾತನಾಡುತ್ತಾ. ಬೀದಿ ನಾಟಕದ ಮೂಲಕ ಜನರಿಗೆ ನೀರು ನೈರ್ಮಲ್ಯ ಸ್ವಚ್ಛತೆಯ ಬಗ್ಗೆ ನಾವು ಈ ಹಿಂದೆ ಸೇವೆ ಮಾಡಿರುತ್ತೇವೆ ,ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತ್ ನವರು ಸ್ವಚ್ಛತೆಯನ್ನು ಮಾಡಬೇಕೆಂದು ಹೇಳಬಾರದು ನಮ್ಮ ನಮ್ಮ ಪರಿಸರವನ್ನು ನಾವೇ ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಬಿವೃದ್ದಿ ಯೋಜನಾಧಿಕಾರಿಗಳಾದ ಶಿವಾನಂದ ಪಿ ಉದ್ಘಾಟಿಸಿ ಚಾಲನೇ ನೀಡಿದರು.

ದಾವಣಗೆರೆಯ ಶೃತಿಕಲ ತಂಡದವರಿಂದ ನೀರು ಉಳಿಸಬೇಕು ಸ್ವಚ್ಛತೆಯನ್ನು ಕಾಪಾಡಬೇಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಜನರಿಗೆ ಸಿಗುವಂತ ಎಲ್ಲಾ ಸೌಲಭ್ಯಗಳ ಬಗ್ಗೆ ಬೀದಿ ನಾಟಕದ ಮೂಲಕ ಜನರಿಗೆ ಮನವರಿಕೆ ಮಾಡಿಕೊಟ್ಟರು.

ಕಾರ್ಯಕ್ರಮದ ನಿರೂಪಣೆಯನ್ನು ವಲಯದ ಮೇಲ್ವಿಚಾರಕರಾದ ಕೆ.ಎಸ್. ದಾಮೋದರ ಆಚಾರ್ಯ ನಿರೂಪಿಸಿ ಜ್ಞಾನವಿಕಾಸ ಸಮನ್ವಯಾಧಿಕಾರಿ ಕುಮಾರಿ ಚೈತ್ರ ಸ್ವಾಗತಿಸಿದರು ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿ ಶ್ರೀಮತಿ ಪಾರ್ವತಿ ಒಕ್ಕೂಟದ ಪದಾಧಿಕಾರಿಗಳು ಮಾನವಿಕಾಸ ಸದಸ್ಯರುಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ