October 5, 2024

ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಹಳೆ ತಡೆಗೋಡೆಯನ್ನು ಕೆಡವಿ ಹೊಸ ತಡೆಗೋಡೆ ನಿರ್ಮಿಸಲು ಮಣ್ಣು ಕೊರೆದಿದ್ದು, ಮಳೆಯಿಂದ ಪ್ರತಿ ದಿನ ಮಣ್ಣು ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ದುರಸ್ತಿ ಕಾರ್ಯ ಅಗತ್ಯವಿತ್ತೇ ಎಂದು ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಚನ್ನಾಗಿದ್ದ ತಡೆಗೋಡೆಯನ್ನು ತೆರವುಗೊಳಿಸಿ ನೂತನ ತಡೆಗೋಡೆ ನಿರ್ಮಿಸುವ ಅಗತ್ಯ ಇರಲಿಲ್ಲ. ಆದರೂ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ನೂತನ ತಡೆಗೋಡೆ ನಿರ್ಮಿಸುವ ಸಲುವಾಗಿ ಮಳೆಯಲ್ಲಿಯೇ ಹಳೆ ತಡೆಗೋಡೆಯನ್ನು ಜೆಸಿಬಿಯಿಂದ ನೆಲಸಮಗೊಳಿಸಿದ್ದಾರೆ. ಇದರಿಂದ ಮಣ್ಣು ಪ್ರತಿನಿತ್ಯ ಮಳೆಯಿಂದ ಜರಿಯುತ್ತಲೇ ಇದೆ. ಅಲ್ಲದೇ ರಸ್ತೆಯೆಲ್ಲಾ ಕೆಸರುಮಯವಾಗಿದೆ.

ಈ ಹಿಂದೆ ಇದ್ದ ತಡೆಗೋಡೆ ಬಿರುಕು ಬಿಟ್ಟಿರಲಿಲ್ಲ. ಸುಖಾ ಸುಮ್ಮನೇ ಸರಕಾರದ ಹಣ ಪೋಲು ಮಾಡುವ ಉದ್ದೇಶದಿಂದ ಇಂತಹ ಅವೈಜ್ಞಾನಿಕ ಕೆಲಸ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಹಾಗಾಗಿ ಈ ಬಗ್ಗೆ ಮೇಲಾಧಿಕಾರಿಗಳು ಗಮನಹರಿಸಿ, ಅವೈಜ್ಞಾನಿಕ ಕೆಲಸ ಮಾಡಲು ಹೊರಟಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ