October 5, 2024

ಮೂಡಿಗೆರೆ ಲಯನ್ಸ್ ಸಂಸ್ಥೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನೆರವೇರಿತು. ಮೂಡಿಗೆರೆ ಜೇಸಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ  ಸಂಸ್ಥೆಯ ನೂತನ ಅಧ್ಯಕ್ಷರಾಗಿ

ಕೆ.ಟಿ. ದೇವಪ್ಪ ಅಧಿಕಾರ ವಹಿಸಿಕೊಂಡರು. ನೂತನ ಕಾರ್ಯದರ್ಶಿಯಾಗಿ ಹೆಚ್.ಬಿ. ಸತ್ಯನಾರಾಯಣ ಹಾಗೂ ಇತರೆ ಕಾರ್ಯಕಾರಿ ಮಂಡಳಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ದ್ವಿತೀಯ ಉಪ ಜಿಲ್ಲಾ ಗವರ್ನರ್ ಕುಡುಪಿ ಅರವಿಂದ್ ಶೆಣೈ ; ಲಯನ್ಸ್ ಸಂಸ್ಥೆ ರೂಪಿಸುವ ಜನಪರವಾದ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯ ವ್ಯಕ್ತವಾದಾಗ ಮಾತ್ರ ನಾವು ಮಾಡುವ ಕಾರ್ಯಕ್ಕೆ ಯಶಸ್ಸು ದೊರಕುತ್ತದೆ ಎಂದು ಹೇಳಿದರು. ಸಂಸ್ಥೆಯಲ್ಲಿ ಯಾರೇ ಅಧ್ಯಕ್ಷರಾದರೂ ಅವರು ಕೈಗೊಳ್ಳುವ ಜನಪರವಾದ ಕಾರ್ಯಕ್ರಮಗಳು ಯಶಸ್ಸಿಗೆ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಕೈ ಜೋಡಿಸಬೇಕು. ನೂತನ ಅಧ್ಯಕ್ಷರು ಸಮಾಜಕ್ಕೆ ಅನುಕೂಲವಾಗುವಂತಹ ಅರ್ಥಪೂರ್ಣವಾದ ಯೋಜನೆ ಯೋಪಿಸಿಕೊಂಡು ಸಂಸ್ಥೆ ಪ್ರಗತಿಗೆ ಶ್ರಮಿಸಬೇಕೆಂದು ಸಲಹೆ ನೀಡಿದರು.

ನೂತನ ಅಧ್ಯಕ್ಷ ಕೆ.ಟಿ.ದೇವಪ್ಪ ಅಧಿಕಾರ ಸ್ವೀಕರಿಸಿ ಮಾತನಾಡಿ, ಒಂದು ಸಂಸ್ಥೆ ಮುನ್ನಡೆಸಬೇಕಾದರೆ ಕೇವಲ ಅಧ್ಯಕ್ಷರಿಂದ ಸಾಧ್ಯವಾಗುವುದಿಲ್ಲ. ಅದಕ್ಕೆ ಎಲ್ಲಾ ಪದಾಧಿಕಾರಿಗಳು ಹಾಗೂ ಪೂರ್ವಾಧ್ಯಕ್ಷರ ಸಹಕಾರ ಅತ್ಯಗತ್ಯ. ಹಾಗಾಗಿ ತನಗೆ ದೊರಕಿರುವ ಈ ಅವಕಾಶದಲ್ಲಿ ಜನಪರವಾದ ಯೋಜನೆ ರೂಪಿಸಿ ಅದನ್ನು ಕಾರ್ಯಗತ ಮಾಡುವ ಆಕಾಂಕ್ಷೆ ಇಟ್ಟುಕೊಂಡಿದ್ದೇನೆ. ಅದಕ್ಕೆ ಎಲ್ಲರ ಸಲಹೆ, ಸಹಕಾರ ಹಾಗೂ ಮಾರ್ಗದರ್ಶನ ಪಡದು ಸಂಸ್ಥೆಯ ಏಳಿಗೆಗೆ ಶ್ರಮಿಸುತ್ತೇನೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಜಿ.ಎಂ.ಲಕ್ಷ್ಮಣಗೌಡ ವಹಿಸಿದ್ದರು. ನೂತನ ಕಾರ್ಯದರ್ಶಿ ಎಚ್.ಬಿ.ಸತ್ಯನಾರಾಯಣ, ಖಜಾಂಚಿ ಜಿ.ಎಸ್.ತಮ್ಮಣ್ಣಗೌಡ, ಲಯನ್ಸ್ ಮಾಜಿ ಜಿಲ್ಲಾ ರಾಜ್ಯಪಾಲ ಎನ್.ಎಲ್.ಸುಂದರೇಶ್ವರ್, ಎಂ.ಇ.ಜಯಕುಮಾರ್, ಯು.ಇ.ಪ್ರಭಾಕರ್, ಹಳೆಕೋಟೆ ರಮೇಶ್, ಬಿ.ಕೆ.ಜಗಮೋಹನ್, ಎಂ.ಬಿ.ಗೋಪಾಲಗೌಡ, ಎಂ.ಎನ್.ಅಶ್ವಥ್ ಮತ್ತಿತರರಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ