October 5, 2024

ಮೂಡಿಗೆರೆ ತಾಲ್ಲೂಕಿನ ನಂದೀಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಜೆ.ಡಿ.ಎಸ್. ಬೆಂಬಲಿತ ಜಿ.ಎಂ. ಪ್ರಸನ್ನ ಕುಮಾರ್ ಗೌತಳ್ಳಿ ಆಯ್ಕೆಯಾಗಿದ್ದಾರೆ. ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ನಳಿನಿ ರಘುನಾಥ್ ನಂದಿಪುರ ಆಯ್ಕೆಯಾಗಿರುತ್ತಾರೆ.  ಅಧ್ಯಕ್ಷ ಸ್ಥಾನ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.

 

ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅತಿಹೆಚ್ಚು ಮತಗಳಿಸಿ ಆಯ್ಕೆಯಾಗಿದ್ದ ಪ್ರಸನ್ನ ಕುಮಾರ್ ಜೆ.ಡಿ.ಎಸ್. ಪಕ್ಷದ ಮುಖಂಡರಾಗಿ ಗುರುತಿಸಿಕೊಂಡಿದ್ದಾರೆ. ಅವರು ಇದೀಗ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ತಮ್ಮ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಆಡಳಿತವನ್ನು ಜನಸ್ನೇಹಿಯಾಗಿ ಮುನ್ನಡೆಸುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ  ಗಬ್ಬಳ್ಳಿ  ಚಂದ್ರೇಗೌಡ , ಮನು ಮಾಲಹಳ್ಳಿ, ಜಯರಾಮ್, ಈರೇಗೌಡ , ಕಿರಣ್ ಜಿ.ಎಂ., ಅಬ್ದುಲ್ ರೆಹ್ಮಾನ್  ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದು ನೂತನ ಅಧ್ಯಕ್ಷರು ಮತ್ತು ಸದಸ್ಯರಿಗೆ ಶುಭ ಹಾರೈಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ