October 5, 2024

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ  ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೂರು ದಿನದ ಹಿಂದಷ್ಟೆ ಕುಟುಂಬದ ಜೊತೆ ಬ್ಯಾಂಕಾಕ್ ಗೆ ತೆರಳಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ಲೋ ಬಿ.ಪಿ.ಯಿಂದ ಹೃದಯಾಘಾತವಾಗಿತ್ತು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಸ್ಪಂದನಾ ಸಿನಿಮಾ ನಿರ್ಮಾಪಕಿಯೂ ಆಗಿದ್ದರು.

ನಿವೃತ್ತ ಪೊಲೀಸ್ ಅಧಿಕಾರಿಬಿ.ಕೆ. ಶಿವರಾಂ ಅವರ ಪುತ್ರಿ  ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ  ಪ್ರೀತಿಸಿ  ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ