October 5, 2024

ಮೊನ್ನೆ ತಾನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಗ್ರಾಮದಲ್ಲಿ ಒಂದೇ ರಾತ್ರಿ ಮೂರು ಅಂಗಡಿಗಳಲ್ಲಿ ಸರಣಿ ಕಳ್ಳತನ ಮಾಡಿದ್ದ ಪ್ರಕರಣ ನಡೆದಿತ್ತು. ಅದಾಗಿ ಎರಡೇ ದಿನದಲ್ಲಿ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಹಾಡಹಗಲೇ ಮನೆದರೋಡೆ ಪ್ರಕರಣ ನಡೆದಿದೆ.  

ಮಂಗಳಾರ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ವೇದಾವತಿ ಎಂಬುವರ ಮನೆಯ ಹೆಂಚುಗಳನ್ನ ತೆಗೆದು ಕಳ್ಳತನ ಮಾಡಿದ್ದಾರೆ. 120 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ ಹಾಗೂ 25 ಸಾವಿರ ಹಣವನ್ನ ದೋಚಿದ್ದಾರೆ.

ಮನೆಯೊಡತಿ  ವೇದಾವತಿ ಇಂದು ಬೆಳಗ್ಗೆ ತಮ್ಮ ಕಾಫಿತೋಟಕ್ಕೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೆ ಮನೆಗೆ ಬರುವಷ್ಟರಲ್ಲಿ ಮನೆ ಹೆಂಚು ತೆಗೆದು ಕಳ್ಳತನ ಮಾಡಿದ್ದಾರೆ.

ವಿಷಯ ತಿಳಿದು ಮೂಡಿಗೆರೆ ಸರ್ಕಲ್ ಇನ್ಸ್ಪೆಕ್ಟರ್, ಗೋಣಿಬೀಡು ಪಿ.ಎಸ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಡಹಗಲೇ ಕಳ್ಳತನ ನಡೆದಿದ್ದು ಗ್ರಾಮದ ಜನರು ಆತಂಕಕ್ಕೀಡಾಗಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ