October 5, 2024

ಸಾರ್ವಜನಿಕರು, ಯುವ ಜನತೆ ಸೋಷಿಯಲ್ ಮೀಡಿಯಾಗಳನ್ನು ಬಳಕೆ ಮಾಡಿ ಪೋಸ್ಟ್ ಗಳನ್ನು ಹಾಕುವಾಗ ಎಚ್ಚರಿಕೆಯಿಂದ ವರ್ತಿಸಬೇಕು. ಯಾವುದೇ ರೀತಿ ಅವಹೇಳನಕಾರಿ, ಕೋಮು ಭಾವನೆ ಕೆರಳಿಸುವ, ದ್ವೇಷ, ಜಾತಿಯ ಬಗ್ಗೆ ಪೋಸ್ಟ್ ಗಳನ್ನು ಮಾಡಿದರೆ ಅಂತಹವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ. ಸಾಮಾಜಿಕ ಜಾಲತಾಣಗಳ ಬಳಕೆ ಬಗ್ಗೆ ಪೊಲೀಸ್ ಇಲಾಖೆ ನಿಗಾ ವಹಿಸುತ್ತಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.

ಬಾಳೆಹೊನ್ನೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬುಧವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸೋಷಿಯಲ್ ಮೀಡಿಯಾ ಬಳಕೆ ಮಾಡಿ ಪೋಸ್ಟ್ ಗಳನ್ನು ಹಾಕುವಾಗ ಅವಹೇಳನ, ಅಪರಾಧ ಕೃತ್ಯಗಳ ಬಗ್ಗೆ ಪೋಸ್ಟ್ ಹಂಚಿಕೊಂಡರೆ ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸ್ ದಾಖಲಿಸಿಕೊಳ್ಳಬಹುದು. ಅಂತಹ ವ್ಯಕ್ತಿಗಳ ವಿರುದ್ಧ ಬಂಧನದಂತಹ ಕಠಿಣಕ್ರಮ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಪೋಸ್ಟ್ ಗಳನ್ನು ಹಾಕಿದ ಕುರಿತು 12 ಪ್ರಕರಣಗಳು ದಾಖಲಾಗಿವೆ.

ಯುವಜನರು ಹೆಚ್ಚು ಪೋಸ್ಟ್ ಗಳನ್ನು ಮಾಡುವಾಗ, ಪ್ರಚೋಧನಾಕಾರಿ ಪೋಸ್ಟ್ ಗಳನ್ನು ಫಾರ್ವರ್ಡ್ ಮಾಡುವಾಗ ಎಡವುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವಜನರಲ್ಲಿ ಸೋಷಿಯಲ್ ಮೀಡಿಯಾ ಬಳಕೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪೊಲೀಸ್ ಇಲಾಖೆಯಿಂದ ಸೋಷಿಯಲ್ ಮೀಡಿಯಾ ಸೆಲ್ ಕೂಡ ಆರಂಭಗೊಂಡಿದ್ದು, ಸಾಮಾಜಿಕ ಜಾಲತಾಣಗಳ ಬಳಕೆ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಪ್ರತಿ ಠಾಣಾ ಮಟ್ಟದಲ್ಲೂ ಅಧಿಕಾರಿಗಳನ್ನು ನೇಮಿಸಿಕೊಂಡು ಈ ಬಗ್ಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಜಿಲ್ಲೆಯಲ್ಲಿರುವ ಅನಧಿಕೃತ ಹೋಮ್‍ ಸ್ಟೇ ಗಳಿಗೆ ಈಗಾಗಲೇ ಪೊಲೀಸ್ ಇಲಾಖೆಯಿಂದ ನೋಟೀಸ್ ನೀಡಲಾಗಿತ್ತು. ಆ ಬಳಿಕ 125ಕ್ಕೂ ಅಧಿಕ ಹೋಮ್‍ ಸ್ಟೇ ಗಳನ್ನು ನೋಂದಾಯಿಸಿಕೊಂಡಿದ್ದಾರೆ. ಹೋಮ್‍ ಸ್ಟೇಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿದ 3 ಕಡೆ ಲೈಸೆನ್ಸ್ ರದ್ದು ಸಹ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಒಂದು ವರ್ಷಗಳ ಕಾಲ ಕಾರ್ಯನಿರ್ವಹಿಸಿರುವುದು ತೃಪ್ತಿ ತಂದಿದೆ. ಜನರ ನಾಡಿಮಿಡಿತ ಅರಿತು ಕೆಲಸ ಮಾಡಲಾಗಿದೆ. ಜನರ ಜೊತೆ ಬೆರೆತು ಕೆಲಸ ಮಾಡಿದರೆ ನಮ್ಮ ಕೆಲಸಕ್ಕೆ ಅರ್ಥ ಬರಲಿದೆ. ಇಲಾಖೆಯನ್ನು ಜನಸ್ನೇಹಿಯಾಗಿ ಪರಿವರ್ತಿಸಬೇಕು ಎಂಬುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಣೆ ಮಾಡುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಡಿವೈಎಸ್‍ಪಿ ಕೆ.ಸತ್ಯನಾರಾಯಣ, ಪಿಎಸ್‍ಐ ವಿ.ಟಿ.ದಿಲೀಪ್ ಕುಮಾರ್ ಇದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ