October 5, 2024

ಆಸ್ತಿ ಮಾರಾಟ ಮಾಡಿದ ಹಣದ ವಿಚಾರದಲ್ಲಿ ನಡೆದ ಮಾತುಕತೆ ವಿಕೋಪಕ್ಕೆ ತಿರುಗಿ ತಂದೆ ಸೇರಿದಂತೆ ಇಬ್ಬರ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ‌ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.

ಮಧುಗುಂಡಿ ಗ್ರಾಮದ ವಾಸಿ ಸಂತೋಷ್ ಎಂಬಾತ ಆಸ್ತಿ ಮಾರಾಟ ಮಾಡಿದ ಹಣದ ವಿಚಾರದಲ್ಲಿ ಮಾತುಕತೆಗೆ ಬಂದಿದ್ದ ಅದೇ ಗ್ರಾಮದ ಕಾರ್ತಿಕ್ ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಿಡಿಸಿಕೊಳ್ಳಲು ಮಧ್ಯಪ್ರವೇಶಿಸಿದ ತನ್ನ ತಂದೆ ತಾಯಿಯ ಮೇಲೆಯೂ ಸಂತೋಷ್ ಮಚ್ಚು ಬೀಸಿದ್ದು, ಗಂಭೀರ ಗಾಯಗೊಂಡಿದ್ದ ತಂದೆಯೂ ಮಂಗಳೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಬಂದಿದೆ. ತಾಯಿಯ ಸ್ಥಿತಿಯೂ ಗಂಭೀರವಾಗಿದೆ ಎನ್ನಲಾಗಿದೆ.

ಕೃತ್ಯದ ಬಳಿಕ ಆರೋಪಿ ಸಂತೋಷ್ ನು ಬಾಳೂರು ಪೊಲೀಸ್ ಠಾಣೆಗೆ ತಾನಾಗಿಯೇ ಬಂದು ಶರಣಾಗಿದ್ದಾನೆ.

ಮೃತ ಕಾರ್ತಿಕ್  ಈತನು ಭಾಸ್ಕರ್ ಗೌಡ ರವರ ಜಮೀನನ್ನು ಬೆಂಗಳೂರು ಮೂಲದ ಉದ್ಯಮಿಗೆ ಮಾರಾಟ ಮಾಡಲು ಮಧ್ಯವರ್ತಿಯಾಗಿದ್ದರು ಎನ್ನಲಾಗಿದೆ. ಜಮೀನಿನ ವ್ಯಾಪಾರದ ಮುಂಗಡವಾಗಿ ಭಾಸ್ಕರಗೌಡರ ಕುಟುಂಬಕ್ಕೆ 12 ಲಕ್ಷ ಹಣ ಕೊಡಿಸಿದ್ದು, ಆ ಹಣವನ್ನು ಭಾಸ್ಕರ್ ಗೌಡ ರವರ ಮೊದಲ ಮಗ ಶಿವು ಕುಮಾರ್ ರವರು ತೆಗೆದುಕೊಂಡು ಹೋಗಿದ್ದು ಈ ವಿಚಾರದಲ್ಲಿ ಮನಸ್ತಾಪ ಗೊಂಡಿದ್ದ ಎರಡನೇ ಮಗ ಸಂತೋಷ್  ಕಾರ್ತಿಕ್ ನನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೊಲೆಗೀಡಾದ ಕಾರ್ತಿಕ್

ನಿನ್ನೆ ರಾತ್ರಿ ತನ್ನ ಮನೆಗೆ ಬಂದಿದ್ದ ಕಾರ್ತಿಕ್ ಗೌಡ ಅವರೊಂದಿಗೆ ಹಣಕಾಸಿನ ವಿಚಾರವಾಗಿ ಮಾತಿಗೆ ಮಾತು ಬೆಳೆಸಿದ ಸಂತೋಷ್ ಏಕಾಏಕಿ ಮನೆಯೊಳಗಿನಿಂದ ಮಚ್ಚು ತಂದು ಕಾರ್ತಿಕ್ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಕಾರ್ತಿಕ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ.

ಕಾರ್ತಿಕ್ ಮಧುಗುಂಡಿ ಗ್ರಾಮದ ಉಪೇಂದ್ರಗೌಡ ಎಂಬುವವರ ಪುತ್ರ.  ಈ ಭಾಗದಲ್ಲಿ ಉತ್ತಮ ಜನಸಂಪರ್ಕ ಹೊಂದಿದ್ದರು.  ವಿವಾಹವಾಗಿ ಒಂದು ಮಗು ಇತ್ತು. ಅವರ ತಂದೆ ಇತ್ತೀಚೆಗಷ್ಟೇ ನಿಧನ ಹೊಂದಿದ್ದರು. ವಿವಾಹ ಮಾಡಿಕೊಟ್ಟಿದ್ದ ಸಹೋದರಿಯೂ ಈ ಹಿಂದೆ ಅಪಘಾತದಲ್ಲಿ ನಿಧನ ಹೊಂದಿದ್ದರು.

ಈ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದು, ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ