October 5, 2024

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನರ ಸಮಸ್ಯೆಗಳು ತೀವ್ರವಾಗುತ್ತಿವೆ . ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಕೇವಲ ಕಾರ್ಯಕ್ರಮ, ಸಭೆಗಳಿಗೆ ಸೀಮಿತವಾಗಿದ್ದಾರೆಯೇ ಹೊರತು ಜನಸಾಮಾನ್ಯರ ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಆರೋಪಿಸಿದರು.

ಸಚಿವರು ಜಿಲ್ಲೆಯ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಅರಿತು ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಕೆಡಿಪಿ ಸಭೆಗಳಿಗೆ ಸಿಮೀತವಾಗಿದ್ದಾರೆ. ಸಚಿವರು ಜಿಲ್ಲಾದ್ಯಂತ ಪ್ರವಾಸ ಮಾಡಿ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಪ್ರಯತ್ನ ಮಾಡಬೇಕು ಎಂದು ಶುಕ್ರವಾರ ದರ್ಪಣ ನ್ಯೂಸ್ ಜೊತೆ ಮಾತಾಡುತ್ತಾ ಒತ್ತಾಯಿಸಿದರು.

ಕಾಫಿ, ಅಡಕೆ, ಕಾಳುಮೆಣಸು ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದಾರೆ. ಬಯಲು ಸೀಮೆ ಭಾಗದಲ್ಲಿ ಬರ ಪರಿಸ್ಥಿತಿ ಎದುರಾಗುವ ಭೀತಿ ಇದೆ. ಜಿಲ್ಲೆಯ ಕಾಂಗ್ರೆಸ್ ಶಾಸಕರು ತಮ್ಮ ಕರ್ತವ್ಯ ಮರೆತ್ತಿದ್ದಾರೆ. ಅವರಿಗೆ ಜನರ ಹಿತಕ್ಕಿಂತ ಸ್ವಹಿತವೇ ಮುಖ್ಯವಾಗಿದೆಎಂದು ದೂರಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೇರೆ ಪಕ್ಷಗಳ ಶಾಸಕರನ್ನು ಕಾಂಗ್ರೆಸ್‍ಗೆ ಸೆಳೆಯುತ್ತಿದ್ದು, ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಈ ಬೆಳವಣಿಗೆಗಳನ್ನು ಗಮನಿಸುತ್ತಿದ್ದರೆ ಕಾಂಗ್ರೆಸ್‍ನಲ್ಲಿ ನಾಯಕತ್ವ ಬದಲಾವಣೆಗಳು ಗೋಚರಿಸುತ್ತಿವೆ, ರಾಜ್ಯದಲ್ಲಿ ಕಾಂಗ್ರೆಸ್‍ನವರು ರಾಜಕೀಯ ಅರಾಜಕತೆ ಸೃಷ್ಟಿ ಮಾಡುತ್ತಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಮಲೆಮನೆ ಮತ್ತು ಚೆನ್ನಡ್ಲು ಭಾಗದಲ್ಲಿ 2019ರಲ್ಲಿ ಮನೆಗಳನ್ನು ಕಳೆದುಕೊಂಡ ನಿರಾಶ್ರಿತರಿಗೆ ನಾಲ್ಕು ವರ್ಷ ಕಳೆದರೂ ಪುನರ್ವಸತಿ ಕಲ್ಪಿಸಲು ಸಾಧ್ಯವಾಗಿಲ್ಲ. ಸಚಿವರು ಮೂಡಿಗೆರೆಯಲ್ಲಿ ಕುಳಿತು ಸಭೆ ಮಾಡಿ ಹೋಗಿದ್ದಾರೆಯೇ ಹೊರತು, ನಿರಾಶ್ರಿತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಜಿಲ್ಲೆಯ ಸಮಸ್ಯೆಗಳ ಅರಿವಿದೆ ಎಂದು ಹಲವು ಬಾರಿ ಹೇಳಿದ್ದಾರೆ. ಈ ರೀತಿ ಅರಿವು ಇದೆ ಅಂದುಕೊಂಡಿರಲಿಲ್ಲ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ನೂತನ ಶಿಕ್ಷಣ ನೀತಿ ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಇದು ರಾಜಕೀಯ ದ್ವೇಷವನ್ನು ತೋರಿಸುತ್ತದೆ. ನೂರಾರು ಶಿಕ್ಷಣ ತಜ್ಞರ ಜತೆ ಚರ್ಚಿಸಿ, ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿಯೇ ಕೇಂದ್ರ ಸರ್ಕಾರ ಎನ್‍ಇಪಿ ಜಾರಿಗೆ ತಂದಿದೆ. ಶಾಲಾ ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಲು ಎಲ್ಲಾ ರೀತಿ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಕೂಡಲೇ ಸರ್ಕಾರ ನಿರ್ಧಾರ ಕೈ ಬಿಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಂಜುನಾಥ್, ದಿನೇಶ್ ಹಾಜರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ