October 5, 2024

ಗುಂಪು ಘರ್ಷಣೆಯಲ್ಲಿ ತೊಡಗಿದ್ದ ಯುವಕರಿಗೆ ಬುದ್ಧಿ ಮಾತು ಹೇಳಿದ ಕಾನ್ಸ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ನಾಲ್ವರು ಯುವಕರನ್ನು  ಬಂಧಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಳೆಹೊನ್ನೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೆಬಲ್ ಮಂಜೇಗೌಡ ಎಂಬುವವರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿರುವ ಬಾಳೆಹೊನ್ನೂರು ಪೊಲೀಸರು ಆರೋಪಿಗಳನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನೇಮನಹಳ್ಳಿಯ ಮನೋರಂಜನ್, ಕಿಚ್ಚಬ್ಬಿ ಪ್ರದೀಪ್, ದೇವಗೋಡಿನ ಸತ್ಯನಾರಾಯಣ ಹಾಗೂ ಬಸರೀಕಟ್ಟೆ ಕೈಮರದ ರಕ್ಷಿತ್ ಬಂಧಿತ ಆರೋಪಿಗಳು.

ಗುರುವಾರ ಸಂಜೆ ಪೊಲೀಸ್ ಠಾಣೆಯ ಎದುರು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಯುವಕರು ಮಾತಿನ ಚಕಮಕಿಯಲ್ಲಿ ತೊಡಗಿದ್ದರು. ಆ ವೇಳೆ ಸ್ಥಳದಲ್ಲಿದ್ದ ಪೊಲೀಸ್ ಕಾನ್ಸ್ ಸ್ಟೇಬಲ್ ಮಂಜೇಗೌಡ ಅವರು ಎರಡೂ ಕಡೆಯವರಿಗೆ ಬುದ್ಧಿವಾದ ಹೇಳಿದ್ದರು.

ಇದರಿಂದ ಆಕ್ರೋಶಗೊಂಡ ಯುವಕರು ಮಂಜೇಗೌಡ ಅವರನ್ನು ದೂಡಿ, ಹಲ್ಲೆ ನಡೆಸಿದರು ಎನ್ನಲಾಗಿದೆ. ತಕ್ಷಣ ಠಾಣೆಯಲ್ಲಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಿ ಮಂಜೇಗೌಡ ಅವರು ನಾಲ್ವರು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ನೂರಾರು ಕಾರ್ಯಕರ್ತರು ಸೇರಿದ್ದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿರುವುದನ್ನು ಮನಗಂಡು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ