October 5, 2024

ಪೋಷಕರ ದಿನ ನಿತ್ಯದ ತ್ಯಾಗದ ಪರವಾಗಿ ಮಕ್ಕಳ ಬದುಕು ರೂಪುಗೊಳ್ಳುತ್ತದೆ. ಪೋಷಕರ ತ್ಯಾಗಕ್ಕೆ ಪ್ರತಿಫಲವಾಗಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಉತ್ತಮ ಪ್ರಜೆಗಳಾಗಿ ನಮ್ಮ ಗುರಿ ತಲುಪಬೇಕೆಂದು ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ಅವರು ಶುಕ್ರವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಆವರಣದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರದ ಪೋಷಣ್ ಯೋಜನೆಯಡಿ 9ಮತ್ತು 10ನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರ ಮಕ್ಕಳ ಆರೋಗ್ಯ ಹಾಗೂ ಬೆಳವಣಿಗೆ ದೃಷ್ಟಿಯಿಂದ ಬಿಸಿಯೂಟ ನೀಡುತ್ತಿದೆ. ಅದರ ಗುಣಮಟ್ಟವನ್ನು ಪರೀಕ್ಷಿಸಿ ವಿದ್ಯಾರ್ಥಿಗಳಿಗೆ ನೀಡಬೇಕು. ಸರಕಾರಿ ಶಾಲೆಯಲ್ಲಿಯೇ ವ್ಯಾಸಾಂಗ ಮಾಡಿರುವವರೇ ಹೆಚ್ಚಾಗಿ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಹಾಗಾಗಿ ಸರಕಾರಿ ಶಾಲೆ ಎಂಬ ತಾತ್ಸಾರ ಬೇಡ ಎಂದು ಹೇಳಿದರು.

ಎಸ್‍ಎಸ್‍ಎಲ್‍ಸಿ ಎಂಬುವುದು ವಿದ್ಯಾರ್ಥಿ ಜೀವನದಲ್ಲಿ ಒಂದು ಗಟ್ಟವಾಗಿದೆ. ಹಾಗಾಗಿ ಆತ್ಮ ವಿಶ್ವಾಸದಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕು. ಮೊಬೈಲ್ ಬಳಕೆ ಕಡಿಮೆ ಮಾಡಿ ಪಠ್ಯದೊಂದಿಗೆ ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಯಲ್ಲಿ ಆಸಕ್ತಿ ಹೊಂದಬೇಕು. ಸರಕಾರ ನೀಡುವ ಯೋಜನೆಯನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬಿಇಒ ಹೇಮಂತರಾಜ್, ಉಪ ಪ್ರಾಂಶುಪಾಲ ಭಾಗ್ಯ, ಎಸ್‍ಡಿಎಂಸಿ ಉಪಾಧ್ಯಕ್ಷ ಸೋಮಶೇಖರ್, ಸದಸ್ಯ ಚಂದ್ರು, ಶಿಕ್ಷಕರಾದ ರುಕ್ಸಾನ, ಫ್ರೀಟಾ, ಜ್ಯೋತಿ ಮತ್ತಿತರರಿದ್ದರು.

ಕಾಣೆಯಾಗಿದ್ದ ಕಾಫಿ ಎಸ್ಟೇಟ್ ಮ್ಯಾನೆಜರ್ ಕೆರೆಯಲ್ಲಿ ಶವವಾಗಿ ಪತ್ತೆ : ಎರಡು ದಿನದ ಹಿಂದೆ ಕಾಣೆಯಾಗಿದ್ದ ಕಾಶಿ ಬೋಪಯ್ಯ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ