October 5, 2024

ಮಾನವ ಮತ್ತು ಪ್ರಾಣಿ ಸಂಘರ್ಷ ಮಿತಿಮೀರಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಜನ ನೆಮ್ಮದಿ ಕಳೆದುಕೊಂಡಿದ್ದಾರೆ. ರೈತರ ಬೆಳೆ ನಷ್ಟವಾಗುತ್ತಿದೆ. ಇದನ್ನು ತಡೆಗಟ್ಟಲು ಅರಣ್ಯ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದೇವೆ ಎಂದು ಮೂಡಿಗೆರೆ ಠಾಣೆ ಸರ್ಕಲ್ ಇನ್ಸ್ ಫೆಕ್ಟರ್ ಸೋಮೇಗೌಡ ಹೇಳಿದರು.

ಅವರು ಬುಧವಾರ ಮೂಡಿಗೆರೆ ತಾಪಂ ದೀನದಯಾಳ್ ಉಪಾಧ್ಯಾಯ ಸಭಾಭವನದಲ್ಲಿ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿ, ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡಲು ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಠಾಣೆಗೆ ಭೇಟಿ ನೀಡುವ ಸಾರ್ವಜನಿಕರನ್ನು ನಗುಮುಖದಿಂದ ಸ್ವಾಗತಿಸುವಂತೆ ಎಲ್ಲಾ ಠಾಣೆಗಳಿಗೂ ಸೂಚನೆ ನೀಡಲಾಗಿದೆ. ದಾರಿ ತಪ್ಪುತ್ತಿರುವ ಯುವಕರನ್ನು ಸರಿದಾರಿಗೆ ತರಲು ಯುವಕರ ದಿನ ಆಚರಿಸಲು ಚಿಂತನೆ ನಡೆಸಲಾಗಿದೆ. ಜನರ ಸಮಸ್ಯೆಗಳಿಗೆ ಇಲಾಖೆ ಸದಾ ಸ್ಪಂದಿಸಲಿದೆ. ದಿನದ 24 ಗಂಟೆಯೂ ಜನ ಪೊಲೀಸರನ್ನು ಸಂಪರ್ಕಿಸಬಹುದು. ಇತ್ತೀಚಿಗೆ ತಾಲೂಕಿನಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ. ಜನವರಿಯಿಂದ ಈ ವರೆಗೆ ಅಪಘಾತದಲ್ಲಿ 15 ಮಂದಿ ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ನಡೆಯದಂತೆ ವಾಹನ ಚಾಲಕರು ಅತಿ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ಅಪಘಾತ ಹೆಚ್ಚಾಗಲು ಗುಂಡಿಬಿದ್ದ ರಸ್ತೆಗಳು ಕಾರಣ ಎಂದು ತಿಳಿಸಿದರು.

ಜಮೀನಿಗೆ ಸಂಬಂಧಿಸಿದ ವ್ಯಾಜ್ಯ ಅತಿರೇಕಕ್ಕೆ ಹೋಗಿ ಎರಡು ಗುಂಪುಗಳು ಪರಸ್ಪರ ಗಲಾಟೆ ಮಾಡಿಕೊಂಡು ಹಲವಾರು ಕೊಲೆಗಳು ನಡೆದಿದೆ. ಸಿವಿಲ್ ವ್ಯಾಜ್ಯಗಳನ್ನು ಸರಿಪಡಿಸಿಕೊಳ್ಳಲಾಗದೆ ಸಂಭವಿಸಿದ ಗಲಭೆಯಿಂದ ಕ್ರಿಮಿನಲ್ ಪ್ರಕರಣಗಳು ದಾಖಲಾಗುತ್ತಿದೆ. ಸಿವಿಲ್ ವ್ಯಾಜ್ಯಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಂಡಲ್ಲಿ ಸಮಯ ಮತ್ತು ಹಣ ಉಳಿತಾಯವಾಗುತ್ತದೆ ಪ್ರಾಣ ಹಾನಿ ಸಂಭವಿಸುವುದು ತಪ್ಪುತ್ತದೆ ಎಂದು ತಿಳಿಸಿದರು.

ಕೆಜಿಎಫ್ ಮಾಜಿ ಅಧ್ಯಕ್ಷ ಬಿ.ಎಸ್.ಜಯರಾಂ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗದೆ ಕಿರಿದಾದ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತವೆ. ಸಾಲುಮರದ ರೆಂಬೆಗಳು ಹಾಗೂ ರಸ್ತೆ ಬದಿಯಲ್ಲಿ ಬೆಳೆದಿರುವ ಗಿಡಗಂಟಿಗಳು ಹೆದ್ದಾರಿಗೆ ಚಾಚಿಕೊಂಡಿದೆ ಎದುರಿನಿಂದ ಬರುವ ವಾಹನಗಳು ಕಾಣುತ್ತಿಲ್ಲ. ರಸ್ತೆ ಬದಿಗೆ ವಾಹನ ಇಳಿಸಲಾರದಷ್ಟು ದೊಡ್ಡ ಹೊಂಡಗಳಿವೆ. ವಾಹನ ದಟ್ಟಣೆಯಿಂದ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಕಾಡಾನೆ ಮತ್ತು ಇತರೆ ಕಾಡುಪ್ರಾಣಿ ಹಾವಳಿಯಿಂದ ರೈತರು ತಮ್ಮ ಜಮೀನನ್ನು ಪಾಳು ಬಿಡುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಹೆದ್ದಾರಿ ವಿಭಾಗದ ಇಂಜಿನಿಯರ್ ಗಳು ಇಂತಹ ಸಭೆಗಳಲ್ಲಿ ಭಾಗವಹಿಸಿದರೆ ವಿವಿಧ ಸಮಸ್ಯೆಗಳನ್ನು ಚರ್ಚಿಸಬಹುದು ಎಂದು ತಿಳಿಸಿದರು.

ಹಳೆ ಮೂಡಿಗೆರೆ ಮಾಜಿ ಗ್ರಾಪಂ ಅಧ್ಯಕ್ಷ ಲೋಕವಳ್ಳಿ ರಮೇಶ್ ಮಾತನಾಡಿ, ತಾಲೂಕಿನಲ್ಲಿ ಅನಧಿಕೃತ ರೆಸಾರ್ಟ್ ಮತ್ತು ಹೋಂಸ್ಟೇಗಳು ಹೆಚ್ಚಾಗಿವೆ. ಅಲ್ಲಿ ಹಲವಾರು ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರು ಯಾರು ಗಮನಿಸುತ್ತಿಲ್ಲ. ಅಕ್ರಮ ಚಟುವಟಿಕೆ ನಡೆಸುವ ರೆಸಾರ್ಟ್ ಮತ್ತು ಹೋಂಸ್ಟೇಗಳ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಲ್ಲದೆ  ಸರ್ಕಾರಿ ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಉತ್ಸವ ನಡೆಸುತ್ತಿರುವುದರಿಂದ ಆ ಶಾಲೆಗಳ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಇದನ್ನು ತಡೆಗಟ್ಟಬೇಕು ಎಂದು ತಿಳಿಸಿದರು.

ಡಿಎಸ್ಎಸ್ ಮುಖಂಡ ಬಿ.ಎಂ.ಶಂಕರ್ ಅವರು ಮಾತನಾಡಿ ಕಳೆದ 30 ವರ್ಷದಿಂದ ಪಟ್ಟಣ ಸೇರಿದಂತೆ ಗ್ರಾಮೀಣ ರಸ್ತೆಗಳು ಅಭಿವೃದ್ಧಿಯಾಗದೆ ಗುಂಡಿಯಾಗಿದೆ. ವಾಹನ ದಟ್ಟಣೆ ಮಿತಿಮೀರಿದೆ. ಇದರಿಂದ ಅಪಘಾತ ಸಂಭವಿಸುತ್ತದೆ. ಗ್ರಾಮೀಣ ಭಾಗದ ದಿನಸಿ ಅಂಗಡಿಗಳಲ್ಲಿ ಅಕ್ರಮ ಮಧ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ದಾಳಿ ನಡೆಸಲು ಬರುತ್ತಿರುವುದಾಗಿ ಕೆಲ ಇಲಾಖೆಯ ಸಿಬ್ಬಂದಿಗಳು ಅಕ್ರಮ ಮಧ್ಯ ಮಾರಾಟಗಾರರಿಗೆ ಕರೆ ಮಾಡಿ ತಿಳಿಸುತ್ತಾರೆ ದಾಳಿಗಿಂತ ಮುಂಚಿತವಾಗಿ ಅಕ್ರಮ ಮಧ್ಯವನ್ನು ಬೇರೆ ಕಡೆಗೆ ಸಾಗಿಸಲು ಸಿಬ್ಬಂದಿಗಳೆ ನೆರವಾಗುತ್ತಿದ್ದಾರೆ.

ಸಭೆಯಲ್ಲಿ ಪಿಎಸ್ಐಗಳಾದ ಆದರ್ಶ, ಕಿಶೋರ್, ಮುಖಂಡರಾದ. ಫಿಶ್ ಮೋಣು, ಮನೋಜ್, ಅಬ್ದುಲ್ ರಹಿಮಾನ್, ಚಂದ್ರು ಒಡೆಯರ್, ಫ್ರಾನ್ಸಿಸ್, ಶಿವಕುಮಾರ್,  ಅರುಣ್, ಗಣೇಶ ಇತರರಿದ್ದರು,

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ