October 5, 2024

ಕಡೂರಿನ ಯುವ ನಾಯಕ ಹರ್ಷಿತ್ ಹಾಗೂ NSUI ನ ಮುಖಂಡರು ಬೆಂಗಳೂರಿನಲ್ಲಿ  ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ವಿದ್ಯಾರ್ಥಿಗಳ ಕೆಲವು ಸಮಸ್ಯೆ ಬಗ್ಗೆ ಚರ್ಚಿಸಿದರು. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಈ ಹಿಂದೆ ನೀಡುತ್ತಿದ್ದ ಮ್ಯಾನೇಜ್ಮೆಂಟ್ ವಿದ್ಯಾರ್ಥಿ ವೇತನವನ್ನು ರದ್ದುಪಡಿಸಿರುವುದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಸಚಿವರ ಗಮನ ಸೆಳೆದು, ಹಿಂದೆ ನೀಡುತ್ತಿದ್ದಂತೆ ಮ್ಯಾನೇಜ್ಮೆಂಟ್ ವಿದ್ಯಾರ್ಥಿ ವೇತನವನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.

ಈ ವಿಚಾರದ ಬಗ್ಗೆ ಸಚಿವರು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ಸೂಕ್ತ ಕ್ರಮ ವಹಿಸಲು ಪ್ರಯತ್ನಿಸುವ ಭರವಸೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕೆಗೆ ಮಾಹಿತಿ ನೀಡಿರುವ ಯುವ ಮುಖಂಡ ಹರ್ಷಿತ್ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಮ್ಯಾನೇಜ್ಮೆಂಟ್ ವಿದ್ಯಾರ್ಥಿ ವೇತನವನ್ನು ರದ್ದುಮಾಡಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಉನ್ನತ ವ್ಯಾಸಂಗದ ಕನಸು ಹೊತ್ತಿರುವ ಸಾಮಾನ್ಯ ಕುಟುಂಬದ ಮಕ್ಕಳು ಇದರಿಂದ ಸಂಕಷ್ಟಕ್ಕೆ ಸಿಲುಕುತ್ತಾರೆ.  ಈ ವಿಚಾರವನ್ನು ಮಾನ್ಯ ಶಿಕ್ಷಣ ಸಚಿವರ ಗಮನಕ್ಕೆ ತರಲಾಗಿದೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ ಎಂದಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ