October 5, 2024

ರಾಜ್ಯದ ಕಾಂಗ್ರೇಸ್ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯಿಂದ ಸ್ತ್ರೀಯರ ಸ್ವಾಭಿಮಾನ ಮತ್ತು ಸ್ವಾವಲಂಭನೆಗೆ ಮತ್ತಷ್ಟು ಶಕ್ತಿ ಬಂದಿದೆ ಎಂದು ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಅಭಿಪ್ರಾಯಿಸಿದ್ದಾರೆ.

ಬುಧವಾರ ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ನಡೆದ ರಾಜ್ಯ ಸರ್ಕಾರದ ಪಂಚ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ” ಯೋಜನೆಗೆ  ದೀಪ ಬೆಳಗಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದ ನಂತರ ಅವರು ಮಾತನಾಡುತ್ತಿದ್ದರು.

.  ಗೃಹಲಕ್ಷ್ಮೀ ಸ್ತ್ರೀಶಕ್ತಿಯ ಇನ್ನೊಂದು ರೂಪವಾಗಿದೆ. ಇದು ನಮ್ಮ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾಗಿದೆ.  ಗೃಹಲಕ್ಷ್ಮೀ ಯೋಜನೆಗೆ ಹಣ ಬಿಡುಗಡೆಯಾಗಿದ್ದು ಎಲ್ಲಾ ಪಡಿತರ ಚೀಟಿಯ ಕುಟುಂಬದ ಮಹಿಳಾ ಮುಖ್ಯಸ್ಥ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂದರು.

ಮೂಡಿಗೆರೆ ತಾಲ್ಲೂಕಿನಲ್ಲಿ ಸುಮಾರು 35 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, ಎಲ್ಲಾ ಫಲಾನುಭವಿಗಳ ಖಾತೆ ಜಮೆಯಾಗಲಿದೆ ಎಂದರು.

ರಾಜ್ಯದ ಕಾಂಗ್ರೇಸ್ ಸರ್ಕಾರವು ತಾನು ನುಡಿದಂತೆ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಯಾಗಿವೆ. ಅಧಿಕಾರಕ್ಕೆ ಬಂದು ಕೇವಲ 100 ದಿನಗಳಲ್ಲಿ ಸರ್ಕಾರ ತನ್ನ ಭರವಸೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಇದರಿಂದ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕವಾಗುತ್ತದೆ ಎಂದರು.

ಗೃಹಲಕ್ಷ್ಮೀ ಯೋಜನೆಯಲ್ಲಿ ಬರುವ ಹಣವನ್ನು ಮಹಿಳೆಯವರು ಸದುಪಯೋಗಪಡಿಕೊಳ್ಳಬೇಕು. ಹಣವನ್ನು ಸದ್ಬಳಕೆ ಮಾಡಿಕೊಂಡು ಆರ್ಥಿ ಸ್ವಾವಲಂಭನೆ ಸಾಧಿಸಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಹೊಸಕೆರೆ ರಮೇಶ್, ಹಂಝ, ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯಾಧಿಕಾರಿ ಚಂದ್ರಕಾAತ್, ಸಿ.ಡಿ.ಪಿ.ಒ. ಸುನಿತಾ ಡಿ.ಜಿ., ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಜಿ. ಸುರೇಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ