October 5, 2024

ಪ್ರಜ್ವಲ್ ರೇವಣ್ಣ

ಮಹತ್ವದ ಬೆಳವಣಿಗೆಯೊಂದರಲ್ಲಿ ಹಾಸನ ಲೋಕಸಭಾ ಕ್ಷೇತ್ರದ   ಜೆ ಡಿ ಎಸ್.  ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ವಜಾ ಮಾಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

2019ರ ಲೋಕಸಭಾ ಚುನಾವಣೆಯ ಅಭ್ಯರ್ಥಿಯ ಚುನಾವಣಾ ಪ್ರಮಾಣ ಪತ್ರದಲ್ಲಿ ಆಗಿರುವ ಲೋಪದೋಷಗಳ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ.

ಸಂಸದ ಪ್ರಜ್ವಲ್‌ ರೇವಣ್ಣ‌ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂದು ವಕೀಲ ಹಾಗೂ ಕೆಡಿಪಿ ಮಾಜಿ ಸದಸ್ಯ ಜಿ.ದೇವರಾಜೇಗೌಡ ಆರೋಪಿಸಿ 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಪ್ರಜ್ವಲ್‌ ರೇವಣ್ಣ ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿತ್ತು. ಈ ಕುರಿತು ಮಾಹಿತಿ ಕಲೆ ಹಾಕುವಂತೆ ರಾಜ್ಯ ಚುನಾವಣಾ ಆಯೋಗವು ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.

2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್‌ ರೇವಣ್ಣ ಸ್ಪರ್ಧೆ ಮಾಡಿದ್ದು, ಈ ವೇಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ಬಗ್ಗೆ ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಿದ್ದು, ಹಲವು ವಿಚಾರಣೆಗಳನ್ನು ನಡೆಸಲಾಗಿತ್ತು.

ಅಲ್ಲದೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಬೇಕು ಎಂದು ಅಂದಿನ ಸೋತ ಅಭ್ಯರ್ಥಿ ಎ. ಮಂಜು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಆದರೆ, ಇನ್ನೇನು ಲೋಕಸಭಾ ಚುನಾವಣೆಗೆ 6 ತಿಂಗಳು ಬಾಕಿ ಇರುವ ವೇಳೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸಂಸದ ಸ್ಥಾನ ಹೈಕೋರ್ಟ್‌ ಅನರ್ಹಗೊಳಿಸಿ ಆದೇಶ ಹೊರಡಿಸಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ