October 5, 2024

ಜೇಸಿಐ ಮೂಡಿಗೆರೆ ವತಿಯಿಂದ ಸೆಪ್ಟಂಬರ್ 9ರಿಂದ 15 ರವರೆಗೆ ಹಮ್ಮಿಕೊಂಡಿದ್ದ ಸಂಸ್ಕೃತಿ ಜೇಸಿ ಸಪ್ತಾಹದ ಸಮಾರೋಪ ಸಮಾರಂಭ ಶುಕ್ರವಾರ ನೆರವೇರಿತು.

ಜೇಸಿ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಜೇಸಿ ವಲಯ ಅಧ್ಯಕ್ಷೆ ಯಶಸ್ವಿನಿ, ಜೇಸಿಐ ಸಂಸ್ಥಾಪಕ ಅಧ್ಯಕ್ಷ ಎನ್.ಎಲ್. ಸುಂದರೇಶ್ವರ, ಜೇಸಿ ಪೂರ್ವಾಧ್ಯಕ್ಷ ಸಾಹಿತಿ ಹಳೇಕೋಟೆ ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಮೂಡಿಗೆರೆ ಜೇಸಿ ಘಟಕದ ಉಪಾಧ್ಯಕ್ಷ ಸುಪ್ರೀತ್ ಕಾರಬೈಲ್ ಇವರಿಗೆ ಜೇಸಿ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಜೇಸಿ ಅಧ್ಯಕ್ಷೆ ಸವಿತಾ ರವಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಕಾರ್ಯದರ್ಶಿ ಪ್ರದೀಪ್ ಕುನ್ನಹಳ್ಳಿ, ಲೇಡಿ ಜೇಸಿ ಅಧ್ಯಕ್ಷೆ ಕವಿತಾ ಸಂತೋಷ್, ಕಾರ್ಯದರ್ಶಿ ರೇಖಾ ನಾಗರಾಜ್, ಜೇಸಿ ಸಪ್ತಾಹದ ಪ್ರಧಾನ ನಿರ್ದೇಶಕಿ ದೀಪಿಕಾ ಪ್ರಸಾದ್, ಜೂನಿಯರ್ ಜೇಸಿ ಅಧ್ಯಕ್ಷೆ ಅದಿತಿ ಪ್ರಸಾದ್ ಉಪಸ್ಥಿತರಿದ್ದರು.

ಏಳು ದಿನಗಳ ಕಾಲ ನಡೆದ ಜೇಸಿ ಸಪ್ತಾಹದಲ್ಲಿ ವೈವಿದ್ಯಮಯ ಕಾರ್ಯಕ್ರಮಗಳು, ತರಬೇತಿಗಳು, ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರ, ಎಲೆಕ್ಟಿçಕ್ ವಾಹನಗಳ ಬಗ್ಗ ಅರಿವು ಕಾರ್ಯಕ್ರಮ, ಸ್ಥಳೀಯ ವರ್ತಕರಿಂದ ಖರೀದಿಸಿ ಸ್ಥಳೀಯ ಆರ್ಥಿಕತೆ ಹೆಚ್ಚಿಸಿ ಎನ್ನುವ ಬಗ್ಗೆ ಜಾಗೃತಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಛದ್ಮವೇಷ ಸ್ಪರ್ಧೆ, ಸಮೂಹ ನೃತ್ಯ ಸ್ಪರ್ಧೆ, ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಪ್ರದರ್ಶನ, ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಸಭಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ