October 5, 2024

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ ಪ್ರತಿ ವರ್ಷದಂತೆ ಈ ವರ್ಷವೂ ಪ್ರಗತಿಪರ ಒಬ್ಬ ರೈತ/ ಒಬ್ಬ ರೈತ ಮಹಿಳೆಗೆ (ಅರ್ಜಿದಾರರ ಹೆಸರಿನಲ್ಲಿ ಪಹಣಿ ಇರುವುದು ಕಡ್ಡಾಯ) ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿರುವ ಕೃಷಿ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ.  ಆಸಕ್ತ ರೈತ/ರೈತ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ರೈತ/ರೈತಮಹಿಳೆಯರು ಅರ್ಜಿ ನಮೂನೆಯನ್ನು ಕೃಷಿ ವಿಜ್ಞಾನ ಕೇಂದ್ರ, ಮೂಡಿಗೆರೆ, ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಚಿಕ್ಕಮಗಳೂರು ಹಾಗೂ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಪಡೆದುಕೊಂಡು ಭರ್ತಿಮಾಡಿ ಅರ್ಜಿಯನ್ನು ದಿನಾಂಕ: 30-09-2023ರ  ಒಳಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಚಿಕ್ಕಮಗಳೂರು ಅಥವಾ ಕೃಷಿ ವಿಜ್ಞಾನ ಕೇಂದ್ರ, ಮೂಡಿಗೆರೆ ಇಲ್ಲಿಗೆ ಸಲ್ಲಿಸಲು ತಿಳಿಸಲಾಗಿದೆ.  ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಆಯ್ಕೆಯಾದ ರೈತರಿಗೆ ಪ್ರಶಸ್ತಿ ಪತ್ರ ಹಾಗೂ ರೂ. 7500/- ನಗದು ಪುರಸ್ಕಾರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಯನ್ನು 897061296/9480838203 ಸಂಪರ್ಕಿಸಿ ಎಂದು ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಮೂಡಿಗೆರೆ ರವರು ತಿಳಿಸಿರುತ್ತಾರೆ.

 

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ