October 5, 2024

ಕಾವೇರಿ ನದಿ ನೀರಿನ ವಿಚಾರವಾಗಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಮೂಡಿಗೆರೆಯಲ್ಲಿ ಯಶಸ್ವಿಯಾಯಿತು. ಪಟ್ಟಣದ ಬಹುತೇಕ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡುವ ಮೂಲಕ ಜನರು ಸ್ವಯಂಪ್ರೇರಿತರಾಗಿ ಬೆಂಬಲ ವ್ಯಕ್ತಪಡಿಸಿದರು.

ರೈತಸಂಘಟನೆಗಳು, ರಾಜಕೀಯ ಪಕ್ಷಗಳು, ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಮೂಡಿಗೆರೆ ಜನತೆ ವ್ಯಾಪಕವಾಗಿ ಬೆಂಬಲ ನೀಡಿದರು.

 

ಬೆಳಗ್ಗೆಯಿಂದಲೇ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಇವತ್ತು ಮೂಡಿಗೆರೆಯಲ್ಲಿ ಸಂತೆಯ ವಾರವಾಗಿತ್ತು. ಪ್ರತಿ ಶುಕ್ರವಾರ ಪಟ್ಟಣದಲ್ಲಿ ಜನ ಗಿಜಿಗುಡುತ್ತಿದ್ದರು. ಆದರೆ ಇವತ್ತು ಬಂದ್ ಕಾರಣದಿಂದ ಪಟ್ಟಣದ ಜನಜೀವನ ಬಹುತೇಕ ಸ್ತಬ್ದವಾಗಿತ್ತು. ಸಂತೆಯಲ್ಲಿ ಎಂದಿನಂತೆ ಅಂಗಡಿ ಮುಗ್ಗಟ್ಟುಗಳು ತೆರೆದಿದ್ದವು. ಆದರೆ ಸಂತೆಗೆ ಜನರಿಲ್ಲದೇ ಬಿಕೋ ಎನ್ನುತ್ತಿತ್ತು. ಬಸ್ ಗಳ ಸಂಚಾರ ಪೂರ್ಣ ಬಂದಾಗಿತ್ತು. ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

 

ಉಳಿದಂತೆ ಮೂಡಿಗೆರೆ ತಾಲ್ಲೂಕಿನ ಬಣಕಲ್, ಕೊಟ್ಟಿಗೆಹಾರ, ಜನ್ನಾಪುರದಲ್ಲಿ ಸಂಪೂರ್ಣ ಬಂದ್ ಆಚರಿಸಲಾಯಿತು. ಗೋಣಿಬೀಡಿನಲ್ಲಿ ಜನಜೀವನ ಎಂದಿನಂತಿತ್ತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಒಟ್ಟು ಸೇರಿದ್ದ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಜಯಕರ್ನಾಟಕ ಸಂಘಟನೆ, ಒಕ್ಕಲಿಗರ ಹಿತರಕ್ಷಾಣಾ ವೇದಿಕೆ, ಕೆಂಪೇಗೌಡ ಒಕ್ಕಲಿಗರ ಯುವ ವೇದಿಕೆ, ಜೆ.ಡಿ.ಎಸ್, ಬಿ.ಎಸ್ಪಿ, ಸಿ.ಪಿ.ಐ, ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ