October 5, 2024

ಇಂದಿನಿಂದ ವಿಶ್ವಕಪ್ ಏಕದಿನ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಲಿದೆ. ಮುಂದಿನ ಒಂದೂವರೆ ತಿಂಗಳ ಕಾಲ ಕ್ರಿಕೆಟ್ ಪ್ರಿಯರಿಗೆ ಸುಗ್ಗಿ ಕಾಲ.

ಭಾರತದಲ್ಲಿ ನಡೆಯಲಿರುವ 13ನೇ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಇಂದು ಹಾಲಿ ಚಾಂಪಿಯನ್ ಇಂಗ್ಲೇಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದೊಂದಿಗೆ ಚಾಲನೆ ದೊರೆಯಲಿದೆ.

ಏಕದಿನ ಕ್ರಿಕೆಟ್ ನ ವಿಶ್ವವಿಜೇತ ಪಟ್ಟಕ್ಕಾಗಿ ಜಗತ್ತಿನ ಪ್ರಮುಖ ಹತ್ತು ತಂಡಗಳು ಸೆಣೆಸಾಟ ನಡೆಸುತ್ತಿವೆ.

ಹತ್ತು ತಂಡಗಳನ್ನು ಪರಸ್ಪರ ಮುಖಾಮುಖಿಯಾಗಲಿದ್ದು, ಲೀಗ್ ಹಂತದಲ್ಲಿ ಪ್ರತಿ ತಂಡ 9 ಪಂದ್ಯಗಳನ್ನು ಆಡಲಿದೆ. ಮೊದಲ ನಾಲ್ಕು ಸ್ಥಾನ ಗಳಿಸಿದ ತಂಡಗಳು ಸೆಮಿಪೈನಲ್ ನಲ್ಲಿ ಮುಖಾಮುಖಿಯಾಗಲಿವೆ. ನಂತರ ನವೆಂಬರ್ 19 ರಂದು ಫೈನಲ್ ಪಂದ್ಯ ಅಹಮದಾಬಾದ್ ನಲ್ಲಿ ನಡೆಯಲಿದೆ.

ಮೊದಲ ಎರಡು ಆವೃತ್ತಿಯಲ್ಲಿ ಕಪ್ ಗೆದ್ದಿದ್ದ ವೆಸ್ಟ್ ಇಂಡೀಸ್ ಇದೇ ಮೊದಲ ಬಾರಿಗೆ ವಿಶ್ವಕಪ್ ಪಂದ್ಯಾವಳಿಯಲ್ಲಿ ಆಡಲು ಅರ್ಹತೆ ಪಡೆಯದೇ ನಿರಾಸೆ ಅನುಭವಿಸಿದೆ.

ಭಾರತ ತಂಡವು ಗೆಲ್ಲುವ ಫೆವರೇಟ್ ತಂಡಗಳಲ್ಲಿ ಅಗ್ರಗಣ್ಯವಾಗಿದೆ. ಅಕ್ಟೋಬರ್ 8 ರಂದು ತನ್ನ ಮೊದಲ ಪಂದ್ಯದಲ್ಲಿ ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ ಅಭಿಯಾನ ಆರಂಭಿಸಲಿದೆ.

ಸರಣಿಯ ಪಂದ್ಯಗಳ ವಿವರ ಈ ಕೆಳಗಿನಂತಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ