October 5, 2024

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಮೂಡಿಗೆರೆ ಪಟ್ಟಣದಲ್ಲಿ ಜನಾಗ್ರಹ ಚಳುವಳಿ ಹಮ್ಮಿಕೊಳ್ಳಲಾಗಿತ್ತು.
ಇಂದು ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಾಲ್ಲೂಕು ಕಛೇರಿಗೆ ತೆರಳಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮೂಡಿಗೆರೆ ಸಿ.ಪಿ.ಐ. ಕಾರ್ಯದರ್ಶಿ ಕೆಳಗೂರು ರಮೇಶ್ ;

* ರಾಜ್ಯದಲ್ಲಿ ಲಕ್ಷಾಂತರ ಬಡ ಕುಟುಂಬದವರು ಮನೆಕಟ್ಟಲು ನಿವೇಶನ ಇಲ್ಲದೇ ಅತಂತ್ರರಾಗಿ ಜೀವನ ಸಾಗಿಸುತ್ತಿದ್ದಾರೆ. ಸರ್ಕಾರ ಕೂಡಲೇ ಎಲ್ಲಾ ನಿವೇಶನ ರಹಿತರಿಗೆ ನಿವೇಶನ ಹಂಚುವ ಕೆಲಸ ಮಾಡಬೇಕು.
* ಮೂಡಿಗೆರೆ ಮತ್ತು ಕಳಸ ತಾಲ್ಲೂಕಿನಲ್ಲಿ ಅಕ್ರಮವಾಗಿ ಸರ್ಕಾರಿ ಭೂಮಿ ಮಂಜೂರಾತಿ ಮಾಡಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅಕ್ರಮವಾಗಿ ಉಳ್ಳವರಿಗೆ ನೀಡಿರುವ ಭೂಮಿಯನ್ನು ವಶಕ್ಕೆ ಪಡೆದು ನಿವೇಶನ ರಹಿತರಿಗೆ ನಿವೇಶನ ಹಂಚಬೇಕು, ಸಾರ್ವಜನಿಕ ಉಪಯೋಗಕ್ಕೆ ಭೂಮಿಯನ್ನು ಕಾಯ್ದಿರಿಸಬೇಕು.

*ಪಿ.ಟಿ.ಸಿ.ಎಲ್. ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು. ಈಗಾಗಲೇ ಕಾನೂನು ಬಾಹೀರವಾಗಿ ಹರಾಜು ಮೂಲಕ ವಶಪಡಿಸಿಕೊಂಡಿರುವ ಭೂಮಿಯನ್ನು ವಾಪಾಸ್ಸು ಮೂಲ ಮಾಲೀಕರಿಗೆ ಹಿಂತಿರುಗಿಸಬೇಕು.

*ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆ ಮತ್ತು ಎ.ಪಿ.ಎಂ.ಸಿ. ಕಾಯ್ದೆಯನ್ನು ರದ್ದುಗೊಳಿಸಬೇಕು. ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸರ್ಕಾರವೇ ನೇರವಾಗಿ ವೇತನ ನೀಡಬೇಕು. ಗುತ್ತಿಗೆ ಪದ್ಧತಿಯನ್ನು ರದ್ದುಮಾಡಬೇಕು.

*ರಾಜ್ಯದ ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಬೇಕು, ಕಟ್ಟಡ ಕಾರ್ಮಿಕರ ಕುಟುಂಬದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯವನ್ನು ಕಳೆದ ಎರಡು ವರ್ಷಗಳಿಂದ ಬಿಡುಗಡೆ ಮಾಡಿರುವುದಿಲ್ಲ, ಸರ್ಕಾರ ಕೂಡಲೇ ಶೈಕ್ಷಣಿಕ ಧನಸಹಾಯವನ್ನು ಬಿಡುಗಡೆ ಮಾಡಬೇಕು.

* ರಾಜ್ಯಾದ್ಯಂತ ಬಹಳಷ್ಟು ಜನ ಕ್ಯಾನ್ಸರ್ ಹಾಗೂ ಡಯಾಲಿಸಿಸ್ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ತುಂಬಾ ದುಬಾರಿಯಾಗಿರುವುದರಿಂದ ರೋಗಿಗಳು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಕನಿಷ್ಟ ಒಬ್ಬರಿಗೆ ಎರಡು ಲಕ್ಷ ಹಣ ಕೊಡುವ ವ್ಯವಸ್ಥೆಯಾಗಬೇಕು.(ಯಾವುದೇ ಆದಾಯ ದೃಢೀಕರಣ, ಬಿ,ಪಿ,ಎಲ್. ಕಾರ್ಡ್ ಕೇಳದೆ).
* ವಸತಿ ಸಮಸ್ಯೆಗೆ ತೊಡಕಾಗಿರುವ ಅವೈಜ್ಞಾನಿಕ ಅರಣ್ಯ ಖಾಯಿದೆಗಳಿಗೆ ತಿದ್ದುಪಡಿ ತರಬೇಕು.
* ರಾಜ್ಯದಲ್ಲಿ ಬಹಳ ಕಡೆ ಕಾಡುಪ್ರಾಣಿಗಳಿಂದ ರೈತರು ಹಾಗೂ ಕಾರ್ಮಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಹಾಗೂ ಪ್ರಾಣ ಹಾನಿಗೊಳ್ಳುತ್ತಿದ್ದಾರೆ. ಇದಕ್ಕೆ ಕಾರಣ ಸರ್ಕಾರದ ಇತ್ತೀಚಿನ ನೀತಿ ಅರಣ್ಯ ಇಲಾಖೆಯವರು ಕಾಡಿನಲ್ಲಿ ಹಣ್ಣಿನ ಗಿಡಗಳನ್ನು, ಬಿದಿರನ್ನು ಬೆಳೆಯದೆ ಅಕೇಶಿಯ ಗಿಡಗಳು ಮತ್ತು ತೇಗದ ಮರಗಳನ್ನು ಬೆಳೆದು ಪ್ರಾಣಿಗಳಿಗೆ ಆಹಾರ ದೊರಕದಂತೆ ಮಾಡಿದ್ದಾರೆ. ಇದು ಬದಲಾಗಬೇಕು.
* ಜಿಲ್ಲಾ ಮಟ್ಟದಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿಯಿರುವ ವೈದ್ಯರ ಮತ್ತು ಇತರ ತಾಂತ್ರಿಕ ಸಿಬ್ಬಂಧಿಗಳ ಹುದ್ದೆಗಳನ್ನು ಭರ್ತಿ ಮಾಡಬೇಕು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಬೇಕು. ಪ್ರತಿ ಜಿಲ್ಲೆಯಲ್ಲೂ ಹೃದ್ರೋಗ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ , ಮನೋರೋಗ ಆಸ್ಪತ್ರೆ ಮತ್ತು ಮೆದುಳಿನ ಚಿಕಿತ್ಸೆ ಆಸ್ಪತ್ರೆಯನ್ನು ಪ್ರಾರಂಭಿಸಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ಎಂ.ಆರ್.ಐ ಯುನಿಟ್ ನ್ನು ಪ್ರಾರಂಭಿಸಬೇಕು.
* ಸರ್ಕಾರವೇ ಘೋಷಿಸಿದಂತೆ 6ನೇ ಗ್ಯಾರಂಟಿಯಲ್ಲಿ ಅಸಂಘಟಿತ ಕಾರ್ಮಿಕರಾದ ಅಂಗನವಾಡಿ (10-15), ಆಶಾ ಕಾರ್ಯಕರ್ತೆಯರಿಗೆ (8), ಬಿಸಿಯೂಟ ಕಾರ್ಯಕರ್ತೆಯರಿಗೆ 6 ಸಾವಿರ ಗೌರವಧನ ಹೆಚ್ಚಿಸಬೇಕು. ಎಂದು ಆಗ್ರಹಿಸಿದ್ದಾರೆ.

ಜನಾಗ್ರಹ ಚಳುವಳಿಯಲ್ಲಿ ಪಕ್ಷದ ಹಿರಿಯ ಮುಖಂಡ ಬಿ.ಕೆ. ಲಕ್ಷ್ಮಣಕುಮಾರ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ನೂರಾರು ಸದಸ್ಯರು ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ