October 5, 2024

ಮೂಡಿಗೆರೆ ಭಾಗದಲ್ಲಿ ಹಿರಿಯ ಗುತ್ತಿಗೆದಾರರಾಗಿದ್ದ ಮತ್ತು ಜೆ.ಡಿ.ಎಸ್. ಮುಖಂಡರಾಗಿದ್ದ ಎಂ.ಎ. ಹಮ್ಮಬ್ಬ (69 ವರ್ಷ) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

ಹಲವು ವರ್ಷಗಳಿಂದ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದ ಇವರು ಮೂಡಿಗೆರೆ ಭಾಗದಲ್ಲಿ ಪ್ರಮುಖ ಗುತ್ತಿಗೆದಾರರಲ್ಲಿ ಒಬ್ಬರಾಗಿ ಅನೇಕ ಸರ್ಕಾರಿ ಕಟ್ಟಡ, ರಸ್ತೆ, ಕುಡಿಯುವ ನೀರಿನ ಕಾಮಗಾರಿಗಳನ್ನು ನಿರ್ವಹಿಸಿದ್ದರು. ಮೂಡಿಗೆರೆ ಬದ್ರಿಯ ಕೇಂದ್ರ ಜಮಾತಿನ ಮಾಜಿ ಅದ್ಯಕ್ಷರು, ತಾಲ್ಲೂಕು ಸಂಯುಕ್ತ ಜಮಾತ್ ಗಳ ಒಕ್ಕೂಟದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.

ಇತ್ತೀಚಿನ ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಮ್ಮಬ್ಬ ಅವರು ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನವರಾದ ಹಮ್ಮಬ್ಬ ಅವರ ಕುಟುಂಬ ದಶಕಗಳ ಹಿಂದೆ ಮೂಡಿಗೆರೆಗೆ ಬಂದು ನೆಲೆಸಿ ವಿವಿಧ ವೃತ್ತಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿತ್ತು.

ಹಮ್ಮಬ್ಬ ಅವರು ರಾಜಕೀಯವಾಗಿ ಜೆ.ಡಿ.ಎಸ್. ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಸ್ನೇಹಪರ ವ್ಯಕ್ತಿತ್ವ ಹೊಂದಿ ಎಲ್ಲಾ ರಾಜಕೀಯ ಪಕ್ಷ ಮತ್ತು ಸಂಘಸಂಸ್ಥೆಗಳ ಜನರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದರು.

ಹಮ್ಮಬ್ಬ ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು, ಸಂಘಸಂಸ್ಥೆಗಳ ಅಧ್ಯಕ್ಷರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ಪಾರ್ಥಿವ ಶರೀರವನ್ನು ಮೂಡಿಗೆರೆ ಜೆ.ಎಂ. ರಸ್ತೆಯ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಿ ನಂತರ ಬಂಟ್ವಾಳ ತಾಲ್ಲೂಕಿನ ಅವರ ಸ್ವಗ್ರಾಮದಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ