October 5, 2024

ಜಿಲ್ಲಾಧಿಕಾರಿ ಮೀನಾ ನಾಗರಾಜ್

ಮಹಿಷ ದಸರಾ ಸಂಬಂಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರ ವಿರೋಧ ಚರ್ಚೆಗಳು ವ್ಯಾಪಕವಾದ ಹಿನ್ನೆಲೆಯಲ್ಲಿ ಹಾಗೂ ಮಹಿಷ ದಸರಾ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮುಂಜಾಗ್ರತ ಕ್ರಮವಾಗಿ ನಾಳೆಯಿಂದ ಅಂದರೆ ಅಕ್ಟೋಬರ್ 19ರಿಂದ ಅಕ್ಟೋಬರ್ 24 ರವರೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಮಹಿಷ ದಸರಾ ಆಚರಣೆ ಸಂಬಂಧ ಜಿಲ್ಲಾದ್ಯಂತ ಯಾವುದೇ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಆಳವಡಿಸುವುದು, ಪ್ರತಿಭಟನೆ, ಮೆರವಣಿಗೆ ನಡೆಸುವುದು, ಅವಹೇಳನಕಾರಿ ಘೋಷಣೆಗಳು, ಭಾಷಣಗಳು, ಪ್ರಕಟಣೆಗಳು, ಅವಾಚ್ಯ ಶಬ್ದಗಳ ಬಳಕೆ, ಪ್ರಚೋದನಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ 6 ದಿನಗಳ ಕಾಲ ನಿಷೇಧಾಜ್ಞೆ ಜಾರಿ :

ಮೈಸೂರು ಜಿಲ್ಲೆಯ ಬಳಿಕ ಉಡುಪಿ ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಹಿಷ ದಸರಾ ಆಚರಣೆಗೆ ದಲಿತ ಸಂಘಟನೆಗಳು ಸಿದ್ದತೆ ನಡೆಸಿದ್ದವು. ಇದೇ ತಿಂಗಳು 20 ರಂದು ಹಮ್ಮಿಗೊಂಡಿದ್ದ ಮಹಿಷ ದಸರಾಕ್ಕೆ ಕಾಫಿನಾಡಿನಲ್ಲೂ ಭಾರೀ ವಿರೋಧ ವ್ಯಕ್ತವಾಗಿತ್ತು. ಅದರಲ್ಲೂ ಮಹಿಷ ದಸರಾ ಉದ್ಘಾಟನೆಗೆ ಪ್ರೋ ಭಗವಾನ್ ಆಗಮನದ ಬಗ್ಗೆ ಕೆಲ ಸಂಘಟನೆಗಳು ಆಕ್ಷೇಪ ಹೊರಹಾಕಿದ್ದವು.ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ 6 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದೆ.

ಅಕ್ಟೋಬರ್ 19 ರಿಂದ 24 ರವರೆಗೆ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೆರವಣಿಗೆ, ಪ್ರಚೋದನಾತ್ಮಕ ಭಾಷಣ, ಪೋಸ್ಟರ್, ಫ್ಲೆಕ್ಸ್ ಹಾಕಬಾರದು. ಈ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ.ನಿಷೇದಾಜ್ಞೆ ಅವಧಿಯಲ್ಲಿ ಘೋಷಣೆಗಳನ್ನು ಕೂಗುವುದು, ಆವೇಶಭರಿತರಾಗಿ ಭಾಷಣ ಮಾಡುವುದು, ಸಂಗೀತ ಕಾರ್ಯಕ್ರಮ ನಡೆಸುವುದನ್ನು ನಿಷೇಧಿಸಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗಧೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು, ಲಾಟಿಗಲೂ ಸೇರಿದಂತೆ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದ್ದು, ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಯು ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದೆಂದು ಅವರು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಯಾರಾದರೂ ನಿಷೇದಾಜ್ಞೆ ಉಲ್ಲಂಘನೆ ಮಾಡಿದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಮೆರವಣಿಗೆ ಅವಕಾಶ ಇಲ್ಲ.

ಅಕ್ಟೋಬರ್ 20ರಂದು ಮಹಿಷ ದಸರಾ ಅಂಗವಾಗಿ ಚಿಕ್ಕಮಗಳೂರು ನಗರದ ಹನುಮಂತಪ್ಪ ಸರ್ಕಲ್ ನಿಂದ ಆಜಾದ್ ಪಾರ್ಕ್ ಸರ್ಕಲ್ ವರೆಗೆ ಮೆರವಣಿಗೆ ನಡೆಸಲು ಮಹಿಷ ದಸರಾ ಆಚರಣಾ ಸಮಿತಿ ಮುಂದಾಗಿತ್ತು. ಜೊತೆಗೆ ಮಹಿಷ ದಸರಾದ ಸಭಾ ಕಾರ್ಯಕ್ರಮವನ್ನು ಚಿಂತಕ ಪ್ರೊ.ಭಗವಾನ್ ನೆರವೇರಿಸಲಿದ್ದರು. ಆದರೆ ನಿಷೇದಾಜ್ಞೆ ಜಾರಿಯಿಂದಾಗಿ ಮಹಿಷ ದಸರಾ ಅಂಗವಾಗಿ ನಡೆಯಬೇಕಿದ್ದ ಮೆರವಣಿಗೆಗೆ ಅವಕಾಶ ಸಿಗುವುದು ಅನುಮಾನ.

ಮಹಿಷ ದಸರ ಕಾರ್ಯಕ್ರಮಕ್ಕೆ ಚಿಂತಕ ಪ್ರೊಫೆಸರ್ ಭಗವಾನ್ ಆಗಮಿಸುವುದಕ್ಕೆ ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಪ್ರಮುಖವಾಗಿ ಒಕ್ಕಲಿಗರ ಸಂಘ, ಶ್ರೀರಾಮ ಸೇನೆ ಕಾರ್ಯಕರ್ತರು ಭಗವಾನ್ ಚಿಕ್ಕಮಗಳೂರಿಗೆ ಬಂದಲ್ಲಿ ಅವರಿಗೆ ಮಸಿ ಬಳಿಯುವುದಾಗಿ ಜೊತೆಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಹೀಗಾಗಿ ಭಗವಾನ್ ಚಿಕ್ಕಮಗಳೂರಿಗೆ ಬಾರದಂತೆ ಗಡಿಪಾರು ಮಾಡಬೇಕು ಎಂದು ಡಿಸಿಗೆ ಮನವಿಯನ್ನು ಸಲ್ಲಿಸಲಾಗಿತ್ತು.

ಮಹಿಷ ದಸರಾಗೆ ಭಗವಾನ್ ಬಂದಲ್ಲಿ ಮಸಿಬಳಿಯುವುದಾಗಿ ಕೆಲ ಸಂಘಟನೆಗಳು ಹೇಳಿಕೆ ನೀಡಿದ್ದ ಬೆನ್ನಲ್ಲೇ ದಲಿತ ಸಂಘಟನೆಗಳು ಭಗವಾನ್ ಅವರನ್ನು ಕರೆಯಿಸುತ್ತೇವೆ. ಅವರಿಗೆ ಮಸಿ ಬಳಿಯಲು ಬಂದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಜೊತೆಗೆ ಭಗವಾನ್ ಅವರಿಗೆ ಮಹಿಳಾ ಕಾರ್ಯಕರ್ತರಿಂದ ಮಸಿ ಬಳಿಸುವ ಸಾಧ್ಯತೆಯಿರುವುದರಿಂದ ಭಗವಾನ್ ಅವರಿಗೆ ನಾವು ಮಹಿಳೆಯರಿಂದಲೇ ರಕ್ಷಣೆ ಕೊಡಿಸುತ್ತೇವೆ ಎಂದು ಹೇಳಿದ್ದರು.

ಈ ಎಲ್ಲ ಘಟನಾವಳಿಗಳನ್ನು ಅವಲೋಕಿಸಿದ ಎಸ್ ಪಿ ವಿಕ್ರಮ್ ಅಮಟೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮುಂಜಾಗ್ರಾತಾ ಕ್ರಮವಾಗಿ ಅ.19 ರಿಂದ 24ರವರೆಗೆ ನಿಷೇದಾಜ್ಞೆ ಜಾರಿಗೊಳಿಸುವಂತೆ ಡಿಸಿ ಮೀನಾ ನಾಗರಾಜ್ ಅವರಿಗೆ ಶಿಫಾರಸ್ಸು ಮಾಡಿದ್ದರು. ಎಸ್ ಪಿ ಶಿಫಾರಸ್ಸಿನ ಮೇಲೆ ನಿಷೇದಾಜ್ಞೆ ಜಾರಿಗೊಳಿಸಿ ಡಿಸಿ ಆದೇಶಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ