October 5, 2024

ಹುಲಿ ಉಗುರು ಸರಕ್ಕೆ ಪೋಣಿಸಿ ಕುತ್ತಿಗೆಗೆ ಧರಿಸಿದ್ದ ಪ್ರಕರಣದಲ್ಲಿ ಅರಣ್ಯ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಬಿ.ಹೊಸಳ್ಳಿ ಅಂಚೆ, ಕುಂಡ್ರ ನಿವಾಸಿ ಸತೀಶ್ ಮತ್ತು ಹುಲ್ಲೇಮನೆ ಕುಂದೂರು ನಿವಾಸಿ ರಂಜಿತ್ ಹುಲಿ ಉಗುರು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವವರು.

ಕುಂಡ್ರ ನಿವಾಸಿ ಸತೀಶ್ ತನ್ನ ಕುತ್ತಿಗೆಯಲ್ಲಿ ಹುಲಿ ಉಗುರು ಧರಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಅಕ್ಟೋಬರ್ 20 ರಂದು ಮೂಡಿಗೆರೆ ಕಡೆಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಸತೀಶ್ ನನ್ನು ಚಿಕ್ಕಮಗಳೂರು ಸಮೀಪದ ಮತ್ತಾವರ ಅರಣ್ಯ ಮಾಹಿತಿ ಕೇಂದ್ರದ  ಬಳಿ ತಡೆದು ಬಂಧಿಸಿದ್ದಾರೆ.

ಬಂಧಿತ ಆರೋಪಿ ಸತೀಶ್ ಕುತ್ತಿಗೆಗೆ ದರಿಸಿದ್ದ ಬೆಳ್ಳಿ ಸರದಲ್ಲಿ ಹುಲಿ ಉಗುರು ಇದ್ದುದು ಪತ್ತೆಯಾಗಿದೆ. ಸತೀಶ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಹುಲಿ ಉಗುರನ್ನು ತನಗೆ ಮೂಡಿಗೆರೆ ತಾಲ್ಲೂಕಿನ ಹುಲ್ಲೇಮನೆ ಕುಂದೂರು ನಿವಾಸಿ ರಂಜಿತ್ ನೀಡಿದ್ದು ಎಂದು ಮಾಹಿತಿ ನೀಡಿದ್ದು, ನಂತರ ರಂಜಿತ್ ನನ್ನು ಹುಲ್ಲೇಮನೆಯ ನಿವಾಸದಲ್ಲಿ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಂಜಿತ್ ನನ್ನು ವಿಚಾರಣೆಗೆ ಒಳಪಡಿಸಲಾಗಿ ಆತ  ಕೊಪ್ಪದ ಆದರ್ಶ ಮತ್ತು ಆಲ್ದೂರು ಸಮೀಪದ ಕೋಣನಬಸರಿ ಮಣಿ ಎಂಬುವವರು ಹೆಸರು ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದು ಆದರ್ಶ ಮತ್ತು ಮಣಿ ತಲೆಮರೆಸಿಕೊಂಡಿದ್ದು ಅವರುಗಳ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ. ಬಂಧಿತ ಇಬ್ಬರು ಆರೊಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಹುಲಿ ಉಗುರು ಪ್ರಕರಣದಲ್ಲಿ ದೊಡ್ಡ ಜಾಲವೇ ಇರುವುದು ಕಂಡುಬರುತ್ತಿದ್ದು, ಇವರುಗಳಿಗೆ ಹುಲಿ ಉಗುರು ಎಲ್ಲಿಂದ ಸಿಕ್ಕಿತು ? ಇದರ ಹಿಂದೆ ಯಾರೆಲ್ಲಾ ಇದ್ದಾರೆ ? ಎಂಬುದರ ಬಗ್ಗೆ ಅರಣ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಮೊನ್ನೆ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಿದ್ದ ವರ್ತೂರ್ ಸಂತೋಷ್ ಎಂಬುವವರನ್ನು ಕುತ್ತಿಗೆಯಲ್ಲಿ ಹುಲಿ ಉಗುರು ಧರಿಸಿದ್ದ ಪ್ರಕರಣದಲ್ಲಿ ಬಂಧಿಸಿದ್ದು ರಾಜ್ಯದಾದ್ಯಂತ ಸುದ್ದಿಯಾಗಿದೆ. ಇತ್ತ ನಮ್ಮ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಅದೇ ಸಂದರ್ಭದಲ್ಲಿ ಹುಲಿ ಉಗುರು ಪ್ರಕರಣವೊಂದು ಬೆಳಕಿಗೆ ಬಂದಿರುವುದು ಕಾಕತಾಳೀಯವೊ ಆಥವಾ ಕೊನೆಗೆ ಎರಡೂ ಪ್ರಕರಣಗಳ ಪರಸ್ಪರ ಥಳುಕು ಹಾಕಿಕೊಂಡಿವೆಯೇ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕು.

ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು ಹಾಗೂ ಮೂಢಿಗೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ  ಡಿ.ರಘು  ನಿರ್ದೇಶನದ  ಮೇರೆಗೆ  ಈ ಕಾರ್ಯಾಚರಣೆ ನಡೆದಿದೆ.

ಮೂಡಿಗೆರೆ ವಲಯ ಅರಣ್ಯ ಅಧಿಕಾರಿಗಳಾದ ಚರಣ್ ಕುಮಾರ್, ಆಲ್ದೂರು ವಲಯ ಅರಣ್ಯ ಅಧಿಕಾರಿ ಹರೀಶ್, ಮೂಡಿಗೆರೆ ಉಪ ವಲಯ ಅರಣ್ಯ ಅಧಿಕಾರಿಗಳಾದ ಶಿವಕುಮಾರ್, ಚೇತನ್ ಕುಮಾರ್, ಆರ್.ಹರೀಶ್, ಚೇತನ್ ಕುಮಾರ್, ಸುಮಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ