October 5, 2024

ನಿನ್ನೆ ಮಧ್ಯಾಹ್ನ ಮಂಗಳೂರಿನ ಉಳ್ಳಾಲ ಸಮೀಪ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಿಕ್ಕಮಗಳೂರು ಮೂಲದ ಪ್ರಸನ್ನಗೌಡ ಶವ ಕೊನೆಗೂ ಪತ್ತೆಯಾಗಿದೆ. ಅವರು ನದಿಗೆ ಹಾರಿದ ಸರಿಸುಮಾರು 24 ಗಂಟೆಗಳ ನಂತರ ಶವವನ್ನು ನದಿಯಿಂದ ಹೊರತೆಗೆಯಲಾಗಿದೆ.

ನಿನ್ನೆ ಮಧ್ಯಾಹ್ನದಿಂದ ಶವಕ್ಕಾಗಿ ಹುಡುಕಾಟ ನಡೆಸಲಾಗಿತ್ತು. ನಿನ್ನೆಸಂಜೆ ಅದೇ ಸ್ಥಳದಲ್ಲಿ ಒಂದು ಶವ ಸಿಕ್ಕಿತ್ತು ಅದನ್ನು ಪ್ರಸನ್ನ ಗೌಡ ಶವ ಎಂದೇ ಭಾವಿಸಲಾಗಿತ್ತು. ಆದರೆ ಕುಟುಂಬ ಸದಸ್ಯರು ಪರಿಶೀಲಿಸಿದ ನಂತರ ಅದು ಬೇರೆ ಯಾರದ್ದೋ ಶವ ಎಂದು ತಿಳಿದುಬಂದಿತ್ತು.

ನಿರಂತರ ಹುಡುಕಾಟದ ನಂತರ ಇಂದು ಮಧ್ಯಾಹ್ನದ ಹೊತ್ತಿಗೆ ಪ್ರಸನ್ನಗೌಡ ಅವರ ಶವ ಪತ್ತೆಯಾಗಿದೆ. ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಸ್ಥಳೀಯ ಮೀನುಗಾರರು, ಮುಳುಗು ತಜ್ಞರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಹುಟ್ಟೂರು ಚಿಕ್ಕಮಗಳೂರು ಸಮೀಪದ ಬೈರಾಪುರ ಗ್ರಾಮಕ್ಕೆ ಮೃತದೇಹವನ್ನು ತರಲಾಗುತ್ತದೆ ಎಂದು ತಿಳಿದುಬಂದಿದೆ.

 

ಚಿಕ್ಕಮಗಳೂರು ನಗರದ ಕರ್ತಿಕೆರೆ ಸಮೀಪದ  ಬೈರಾಪುರ ಗ್ರಾಮದ ಶಂಕರೇಗೌಡ ಎಂಬುವವರ ಪುತ್ರ ಪ್ರಸನ್ನ ಗೌಡ (35 ವರ್ಷ) ನಿನ್ನೆ ಮಧ್ಯಾಹ್ನ ಮಂಗಳೂರು ಸಮೀಪ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಸನ್ನ  ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಭಾಗಕ್ಕೆ ತರಕಾರಿ ಸೊಪ್ಪು ಹೋಲ್ ಸೇಲ್ ವ್ಯಾಪಾರ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ವ್ಯಾಪಾರದ ಹಣ  ವಸೂಲಿ ಮಾಡಿಕೊಂಡು ಬರುವುದಾಗಿ ಮನೆಯಲ್ಲಿ ಹೇಳಿ ಮಂಗಳೂರಿಗೆ ತೆರಳಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಯ ಸಮಯದಲ್ಲಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಕಾರಿನ ಪೋಟೋ ಹಾಗೂ ಡಿ.ಎಲ್. ವಿಳಾಸದ ಗುರುತಿನ ಮೇಲೆ ನದಿಗೆ ಹಾರಿದ ವ್ಯಕ್ತಿಯನ್ನು ಗುರುತಿಸಲು ಸಾಧ್ಯವಾಗಿತ್ತು.

ಪ್ರಸನ್ನ ಗೌಡ ವಿವಾಹಿತರಾಗಿದ್ದು ಪತ್ನಿ, ಇಬ್ಬರು ಚಿಕ್ಕ ಹೆಣ್ಣುಮಕ್ಕಳು, ತಂದೆ ತಾಯಿಯನ್ನು ಅಗಲಿದ್ದಾರೆ. ಪ್ರಸನ್ನ ಗೌಡರ ಸಾವಿನಿಂದ ಅವರ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ.

2019 ರಲ್ಲಿ ಕಾಫಿ ಡೇ ಮಾಲೀಕರಾದ ವಿ.ಜಿ.ಸಿದ್ದಾರ್ಥ ಹೆಗ್ಡೆಯವರು ನದಿಗೆ ಹಾರಿದ್ದ ಸ್ಥಳದಲ್ಲಿಯೇ ಇವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಸನ್ನ ಅವರು ನದಿಗೆ ಹಾರಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ