October 5, 2024

ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಲ್ಲಿ ನಮ್ಮ ಚಿಕ್ಕಮಗಳೂರು ಜಿಲ್ಲೆಯ ಜಾನಪದ ಕಲಾವಿದರಾದ ಸೋಬಾನೆ ಚೌಡಮ್ಮನವರು ಒಬ್ಬರಾಗಿದ್ದಾರೆ.

ಶ್ರೀಮತಿ ಚೌಡಮ್ಮನವರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಚಿಕ್ಕಬಾಸೂರು ಗ್ರಾಮದವರು. 70 ವರ್ಷ ವಯಸ್ಸಿನ ಚೌಡಮ್ಮನವರು ರೈತಾಪಿ ಕುಟುಂಬದಲ್ಲಿ ಹುಟ್ಟಿ ಬಾಲ್ಯದಿಂದಲೂ ತಮ್ಮ ತಾಯಿಯಿಂದ ಬಳುವಳಿಯಾಗಿ ಬಂದ ಸೋಬಾನೆ ಪದಗಳನ್ನು ಹಾಡುತ್ತಾ ಬದುಕು ಕಟ್ಟಿಕೊಂಡವರು. ಶೋಬಾನೆ ಚೌಡಮ್ಮ ಎಂದೇ ಈ ಭಾಗದಲ್ಲಿ ಪ್ರಸಿದ್ಧರಾಗಿರುವ ಚೌಡಮ್ಮನವರು ತಮ್ಮ ಕೃಷಿ ಚಟುವಟಿಕೆಯ ನಡುವೆಯೂ ಮದುವೆ ಮುಂತಾದ ಶುಭ ಸಮಾರಂಭಗಳಲ್ಲಿ ತಮ್ಮ ಶೋಬಾನೆ ಪದಗಳ ಮೂಲಕ ಗ್ರಾಮೀಣ ಸಂಪ್ರದಾಯಗಳಿಗೆ ಹೊಳಪನ್ನು ನೀಡುತ್ತಾ ಬರುತ್ತಿದ್ದಾರೆ.

ಇವರ ಪ್ರತಿಭೆಯನ್ನು ಗುರುತಿಸಿ ಭದ್ರಾವತಿ ಆಕಾಶವಾಣಿ ಕಲಾವಿದರಾಗಿ ಮನ್ನಣೆ ನೀಡಿ ಇವರ ಶೋಬಾನೆ ಪದಗಳನ್ನು ನಿರಂತರ ಪ್ರಸಾರ ಮಾಡುತ್ತಿದ್ದಾರೆ. ಚೌಡಮ್ಮನವರು ಅನಕ್ಷರಸ್ಥರಾಗಿದ್ದರೂ ಸಹ ತನ್ನ ಅಗಾದ ನೆನಪಿನ ಶಕ್ತಿಯಿಂದ ನೂರಾರು ಜಾನಪದ ಹಾಡುಗಳನ್ನು ಕಟ್ಟಿ, ನೆನಪಿನಲ್ಲಿಟ್ಟುಕೊಂಡು ಹಾಡುತ್ತಾ ಬಂದಿದ್ದಾರೆ. ಕೇವಲ ತಾವು ಮಾತ್ರ ಶೋಬಾನೆ ಪದಗಳನ್ನು ಹಾಡುವುದಲ್ಲದೇ ತಮ್ಮ ಸುತ್ತಮುತ್ತಲಿನ ಮಹಿಳೆಯರಿಗೆ ಶೋಬಾನೆ ಪದಗಳನ್ನು ಕಲಿಸುವ ನಿಟ್ಟಿನಲ್ಲಿಯೂ ನಿರತರಾಗಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆಯ ಅನೇಕ ಕಾರ್ಯಕ್ರಮಗಳಲ್ಲಿ ಇವರು ತಮ್ಮ ಶೋಬಾನೆ ಹಾಡುಗಳಿಂದ ಜನರನ್ನು ರಂಜಿಸುತ್ತಾ ಬಂದಿದ್ದಾರೆ. ಕನ್ನಡ ಸಂಸ್ಕೃತಿ ಇಲಾಖೆಯ ಗುರು-ಶಿಷ್ಯ ಪರಂಪರೆ ಯೋಜನೆಯಡಿಯಲ್ಲಿ ನೂರಾರು ಮಹಿಳೆಯರಿಗೆ ಶೋಬಾನೆ ಪದಗಳ ತರಬೇತಿ ನೀಡುತ್ತಾ ಜಾನಪದ ಕಲೆಯ ಉಳಿವಿಗೆ ಕೊಡುಗೆ ನೀಡುತ್ತಾ ಬಂದಿದ್ದಾರೆ. ಯುವಜನರಲ್ಲಿ ಜಾನಪದ ಕಲೆಗಳ ಬಗ್ಗೆ ಆರಿವು, ಆಸಕ್ತಿ ಮೂಡಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಶ್ರೀಮತಿ ಚೌಡಮ್ಮನವರ ಕಲಾಪ್ರತಿಭೆಯನ್ನು ಗುರುತಿಸಿ ಅನೇಕ ಸಂಘಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ. ಇದೀಗ ಕರ್ನಾಟಕ ರಾಜ್ಯ ಸರ್ಕಾರವು 2023ನೇ ಸಾಲಿನ ಪ್ರತಿಷ್ಟಿತವಾದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಚೌಡಮ್ಮನವರನ್ನು ಆಯ್ಕೆ ಮಾಡುವ ಮೂಲಕ ಅವರ ಜಾನಪದ ಸೇವೆಗೆ ಉನ್ನತ ಮನ್ನಣೆ ನೀಡಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ