October 5, 2024

ಮೂಡಿಗೆರೆ ತಾಲ್ಲೂಕಿನ ದೇವರುಂದ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಗ್ರಾಮದ ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಶುಕ್ರವಾರ ನೆರವೇರಿತು.

ಶ್ರೀ ಪ್ರಸನ್ನ ರಾಮೇಶ್ವರ ದೇವಸ್ಥಾನದ ಸಮುದಾಯ ಭವನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಸಂಯೋಜಕ ಪ್ರಕಾಶ್ ರಾವ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಕುಟುಂಬಗಳು ಸ್ವಾವಲಂಭನೆ ಜೀವನ ನಡೆಸಲು ಪ್ರೇರಣೆಯಾಗಿದೆ. ಪರಮಪೂಜ್ಯ ಡಾ. ವಿರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಮತ್ತು ಆಶೀರ್ವಾದದಿಂದ ಇಂದು ಯೋಜನೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಾ ವಿವಿಧ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಜನರ ಬದುಕು ಹಸನಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಜನರು ಸಹ ಯೋಜನೆಯೊಂದಿಗೆ ಉತ್ತಮ ಸಹಭಾಗಿತ್ವ ಬೆಳೆಸಿಕೊಂಡು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು.

ದೇವರುಂದ ಪ್ರಸನ್ನ ರಾಮೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಚಿಪ್ರಗುತ್ತಿ ಪ್ರಶಾಂತ್ ಅವರು ಧಾರ್ಮಿಕ ಉಪನ್ಯಾಸ ನೀಡಿ ; ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಪ್ರತಿಯೊಂದು ಆಚರಣೆಗೂ ವೈಜ್ಞಾನಿಕ ಹಿನ್ನಲೆ ಇದೆ. ಅದನ್ನು ನಾವು ಅರ್ಥ ಮಾಡಿಕೊಂಡು ಅಳವಡಿಸಿಕೊಳ್ಳಬೇಕು. ಪುಣ್ಯ ಕ್ಷೇತ್ರಗಳಿಗೆ ಹೋದಾಗ ನಮ್ಮಲ್ಲಿರುವ ಯಾವುದಾದರೂ ಒಂದು ದುರ್ಗುಣವನ್ನು ತ್ಯಜಿಸುವ ಸಂಕಲ್ಪ ಮಾಡಬೇಕು. ಬದುಕಿನಲ್ಲಿ ಸಹನೆ, ಕರುಣೆ, ಪ್ರೀತಿ ಪ್ರೇಮ, ಹಿರಿಯರಲ್ಲಿ ಗೌರವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿರುವ ದೇವರುಂದ ಗ್ರಾಮದ ಎಂ.ಜೆ.ದಿನೇಶ್ ಮತ್ತು ಗ್ರಾಮದವರಾದ ನಿವೃತ್ತ ಯೋಧರಾದ ಪ್ರಸಾದ್ ಮತ್ತು ದೇವರಾಜು ಅವರನ್ನು ಗೌರವಿಸಲಾಯಿತು.

ಗೌರವ ಸ್ವೀಕರಿಸಿ ಮಾತನಾಡಿದ ಎಂ.ಜೆ.ದಿನೇಶ್ ಅವರು ಕಾಫಿ ಮಂಡಳಿಯ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಲು ದೊರೆತಿರುವ ಅವಕಾಶವನ್ನು ಕಾಫಿ ಉದ್ದಿಮೆಯ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಇಂದು ಕಾಫಿ ಉದ್ದಿಮೆ ಲಕ್ಷಾಂತರ ಜನರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬದುಕನ್ನು ನೀಡಿತ್ತಿದೆ. ದೇಶದ ವಿದೇಶಿ ವಿನಿಮಯಕ್ಕೂ ಹೆಚ್ಚಿನ ಪಾಲು ನೀಡುತ್ತಿದೆ. ಹಾಗಾಗಿ ಕಾಫಿ ಉದ್ದಿಮೆ ಮುಂದೆ ಸಾಗಬೇಕು ಎಂದರೆ ಬೆಳೆಗಾರರು, ಕಾರ್ಮಿಕರು ಪರಸ್ಪರರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಗೌಡಹಳ್ಳಿ, ಊರುಬಗೆ ಮತ್ತು ದೇವರುಂದ ಒಕ್ಕೂಟಗಳ ನೂತನ ಪದಾಧಿಕಾರಿಗಳಿಗೆ ಈ ಹಿಂದಿನ ಪದಾಧಿಕಾರಿಗಳು ಜವಾಬ್ದಾರಿ ಹಸ್ತಾಂತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಡಹಳ್ಳಿ ಒಕ್ಕೂಟದ ಅಧ್ಯಕ್ಷರಾದ ಜಿ.ಬಿ. ದುಗ್ಗೇಗೌಡರು ವಹಿಸಿದ್ದರು. ವೇದಿಕೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಸಂಯೋಜಕ ಶಿವರಾಂ, ದರ್ಪಣ ಪತ್ರಿಕೆ ಸಂಪಾದಕ ಪ್ರಸನ್ನ ಗೌಡಹಳ್ಳಿ, ಗ್ರಾ.ಪಂ. ಸದಸ್ಯ ಡಿ.ಜಿ. ರಮೇಶ್, ಯುವ ಮುಖಂಡ ವಿನೋದ್ ಕಣಚೂರು, ಊರುಬಗೆ ಒಕ್ಕೂಟದ ಅಧ್ಯಕ್ಷ ಎಸ್.ಪಿ. ಪ್ರಕಾಶ್ ಸತ್ತಿಗನಹಳ್ಳಿ, ದೇವರುಂದ ಒಕ್ಕೂಟದ ಅಧ್ಯಕ್ಷ ನಾರಾಯಣ, ಊರುಬಗೆ ಒಕ್ಕೂಟದ ಮಾಜಿ ಅಧ್ಯಕ್ಷ ಕೆ.ಬಿ.ರಮೇಶ್ ಕುಂಬರಡಿ, ದೇವರುಂದ ಒಕ್ಕೂಟದ ಮಾಜಿ ಅಧ್ಯಕ್ಷ ಜಯಾನಂದ ಉಪಸ್ಥಿತರಿದ್ದರು. ಉಪಸ್ಥಿತರಿದ್ದರು.

ಗ್ರಾಮಾಭಿವೃದ್ಧಿ ಯೋಜನೆ ಗೋಣಿಬೀಡು ಹೋಬಳಿ ಮೇಲ್ವಿಚಾರಕ ದೀಪಕ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಸೇವಾ ಪ್ರತಿನಿಧಿ ಸತೀಶ್ ಊರುಬಗೆ ಸ್ವಾಗತಿಸಿ, ಗೌಡಹಳ್ಳಿ ಒಕ್ಕೂಟದ ಉಪಾಧ್ಯಕ್ಷೆ ಸರೋಜ ಚಂದ್ರು ಹಳೇಕೆರೆ ವಂದಿಸಿದರು. ಶ್ರೀಮತಿ ತೀರ್ಥ ದೇವರುಂದ ಪ್ರಾರ್ಥನೆ ಮಾಡಿದರು. ಸೇವಾ ಪ್ರತಿನಿಧಿ ಕೀರ್ತಿ ಭಟ್ ಸಹಕರಿಸಿದರು. ದೇವರುಂದ ಗ್ರಾಮಸ್ಥರು, ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ