October 5, 2024

ಇಂದು ಮುಂಜಾನೆ ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರು ಸಮೀಪದ ಹೆಡದಾಳು ಎಂಬಲ್ಲಿ ಮಹಿಳೆಯೊಬ್ಬರನ್ನು ಕಾಡಾನೆ ತುಳಿದು ಸಾಯಿಸಿತ್ತು. ಇದೀಗ ಮಹಿಳೆಯನ್ನು ಸಾಯಿಸಿದ ಒಂಟಿಸಲಗವನ್ನು ಸೆರೆಹಿಡಿಯಲು ಸರ್ಕಾರ ಆದೇಶ ಮಾಡಿದೆ.

ಹೆಡದಾಳು ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆಯರ ಗುಂಪನ್ನು ಕಾಡಾನೆ ಅಟ್ಟಿಸಿಕೊಂಡು ಬಂದಿತ್ತು. ಆಗ ಮೀನಾ ಎಂಬ ಮಹಿಳೆಯ ಮೇಲೆ ಎರಗಿದ ಆನೆ ಅವರನ್ನು ತುಳಿದು ಹಾಕಿತ್ತು. ಮಹಿಳೆ ಸ್ಥಳದಲ್ಲಿಯೇ ಅಸುನೀಗಿದ್ದರು.

ಇದರಿಂದ ರೊಚ್ಚಿಗೆದ್ದ ಆಲ್ದೂರು ಸುತ್ತಮುತ್ತಲ ಗ್ರಾಮಸ್ಥರು ಆಲ್ದೂರು ವಲಯ ಅರಣ್ಯ ಅಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿದ್ದರು.

ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಗಲಿದ ನಾಯಕ ಡಿ.ಬಿ. ಚಂದ್ರೇಗೌಡರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆಂದು ಮೂಡಿಗೆರೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕಿ ನಯನ ಮೋಟಮ್ಮ ಮತ್ತು ಮುಖಂಡರುಗಳು ಕಾಡಾನೆ ಹಾವಳಿ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು. ಮುಖ್ಯಮಂತ್ರಿಯವರು ಸ್ಥಳದಲ್ಲೇ ಸಿಸಿಎಫ್ ಅವರಿಗೆ ಮಹಿಳೆಯನ್ನು ಕೊಂದ ಒಂಟಿಸಲಗವನ್ನು ಹಿಡಿಯಲು ಆದೇಶ ಮಾಡಿದ್ದರು.

ಅದರಂತೆ ಇದೀಗ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ವನ್ಯಜೀವಿ ಇವರು ಒಂಟಿ ಸಲಗವನ್ನು ಹಿಡಿಯಲು ಆದೇಶ ಮಾಡಿದ್ದಾರೆ. ಒಂಟಿಸಲಗವನ್ನು ನಿರ್ದಿಷ್ಟವಾಗಿ ಗುರುತಿಸಿ ಸುರಕ್ಷಿತವಾಗಿ ಸೆರೆಹಿಡಿದು ಭದ್ರಾ ಹುಲಿ ಸಂರಕ್ಷಣಾ ಪ್ರದೇಶದ ಸೂಕ್ತ ಆವಾಸ ಸ್ಥಾನಕ್ಕೆ ಬಿಡಬೇಕೆಂದು ಆದೇಶ ಮಾಡಿದ್ದಾರೆ. ಹಾಗೆಯೇ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕುಮ್ಕಿ ಆನೆಗಳ ಸಹಾಯದಿಂದ ಬಾಕಿ ಉಳಿದ ಆನೆಗಳನ್ನು ಅರಣ್ಯಕ್ಕೆ ಹಿಮ್ಮೆಟ್ಟಿಸಲು ಕ್ರಮಕ್ಕೆ ಸೂಚಿಸಿದ್ದಾರೆ.

ಈ ನಿಟ್ಟಿನಲ್ಲಿ ನಾಳೆಯಿಂದಲೇ ಒಂಟಿ ಸಲಗ ಸೆರೆಗೆ ಕಾರ್ಯಾಚರಣೆ ನಡೆಸುವ ಸಾಧ್ಯತೆ ಇದೆ.

ಆಲ್ದೂರು ಭಾಗದಲ್ಲಿ ಕಳೆದ ಮೂರು ತಿಂಗಳಿಂದ ಕಾಡಾನೆಗಳ ಗುಂಪೊಂದು ಸತತವಾಗಿ ಸಂಚರಿಸುತ್ತಾ ಜನರಲ್ಲಿ ಭಯವನ್ನು ಮೂಡಿಸಿವೆ. ಎರಡು ತಿಂಗಳ ಅವಧಿಯಲ್ಲಿ ಇಬ್ಬರು ಕಾಡಾನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ