October 5, 2024

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ವಿರುದ್ಧ ಜೆಡಿಎಸ್ ಬೆಂಬಲದೊಂದಿಗೆ ಸ್ವಪಕ್ಷೀಯ ಬಿ.ಜೆ.ಪಿ. ಸದಸ್ಯರೇ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು ಉಂಟಾಗಿದೆ.
ನಗರಸಭೆ ಹಾಲಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ಕರೆದಿದ್ದ ವಿಶೇಷ ಸಾಮಾನ್ಯ ಸಭೆಯಲ್ಲಿ ಗೊಂದಲದ ನಡುವೆಯೇ ವರಸಿದ್ಧಿ ಅಧ್ಯಕ್ಷ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಸಾಮಾನ್ಯ ಸಭೆಯಲ್ಲಿ  ಅಧ್ಯಕ್ಷರು ಯಾವುದೇ ಚರ್ಚೆಗೆ ಅವಕಾಶ ನೀಡದೆ, ಅವಿಶ್ವಾಸ ಪರ ಇರುವವರು ಕೈ ಎತ್ತುವಂತೆ ಸೂಚನೆ ನೀಡಿದರು. ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿದರು. ಇದಕ್ಕೆ ಅಧ್ಯಕ್ಷರು ಮತ್ತು ಆಯುಕ್ತರು ಅವಕಾಶ ನೀಡದೆ ನೇರ ಮತದಾನ ಪ್ರಕ್ರಿಯೆಗೆ ಸೂಚನೆ ನೀಡಿದರು.

ಈ ಹಂತದಲ್ಲಿ ಬಿಜೆಪಿ ಸದಸ್ಯರು ಅಧ್ಯಕ್ಷರ ವಿರುದ್ಧ ವಾಗ್ದಾಳಿ ನಡೆಸಿದಾಗ ಸಭೆಯಲ್ಲಿ ತೀವ್ರ ಗೊಂದಲದ ವಾತಾವರಣ ಉಂಟಾಯಿತು. ಒಂದು ಹಂತದಲ್ಲಿ ಬಿಜೆಪಿ ಸದಸ್ಯರು ಅಧ್ಯಕ್ಷರ ಬಳಿಗೆ ತೆರಳಲು ಯತ್ನಿಸಿದಾಗ  ಸದಸ್ಯರು ಅವರ ಸ್ಥಾನದಲ್ಲಿ ಕುಳಿತುಕೊಳ್ಳದೆ ಹೋದಲ್ಲಿ ಹೊರಗೆ ಕಳಿಸಬೇಕಾಗುತ್ತದೆ ಎಂದು ಅಧ್ಯಕ್ಷರು ಎಚ್ಚರಿಕೆಯನ್ನು ನೀಡಿದರು.

ಅಂತಿಮವಾಗಿ ಅವಿಶ್ವಾಸದ ಪರ ಯಾರೂ ಕೈ ಎತ್ತದ ಹಿನ್ನೆಲೆಯಲ್ಲಿ ಸಭೆಯನ್ನು ಮುಕ್ತಾಯಗೊಳಿಸಲಾಯಿತು. ಬಿಜೆಪಿ ಸದಸ್ಯರು ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಹೊರ ಹೋಗಿ ಅಧ್ಯಕ್ಷರ ಕೊಠಡಿ ಬಳಿ ಧರಣಿ ನಡೆಸಿದರು.

ಇವತ್ತಿನ ಸಭೆಯಲ್ಲಿ ಚಿಕ್ಕಮಗಳೂರು ಶಾಸಕರೂ ಸೇರಿದಂತೆ ಒಟ್ಟು 34 ಮಂದಿ ಹಾಜರಿದ್ದರು. ಅವಿಶ್ವಾಸ ನಿರ್ಣಯ ಪಾಸ್ ಆಗಬೇಕಾಗಿದ್ದರೆ ಮೂರನೇ ಎರಡರಷ್ಟು ಸದಸ್ಯ ಬಲದ ಅವಶ್ಯಕತೆ ಇತ್ತು. ಆದರೆ ಇಷ್ಟು ಬಲವನ್ನು ಒಗ್ಗೂಡಿಸಲು ಬಿ.ಜೆ.ಪಿ. ವಿಫಲವಾಗಿತ್ತು. ಹಾಗಾಗಿ ಅವಿಶ್ವಾಸ ನಿರ್ಣಯದ ಪರವಾಗಿ ಗೆಲುವು ಪಡೆಯಲು ಸಾಧ್ಯವಾಗಲಿಲ್ಲ. ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಸೇರಿ ಒಟ್ಟು 21 ಮತಗಳನ್ನಷ್ಟೇ ಅವಿಶ್ವಾಸ ನಿರ್ಣಯದ ಪರ ಕ್ರೂಢೀಕರಲು ಸಾಧ್ಯವಾಗಿತ್ತು. ಅವಿಶ್ವಾಸ ನಿರ್ಣಯಕ್ಕೆ ಸೋಲಾಗುವುದನ್ನು ಗ್ರಹಿಸಿ ಯಾವ ಸದಸ್ಯರು ಅವಿಶ್ವಾಸ ನಿರ್ಣಯದ ಪರ ಕೈ ಎತ್ತದೇ ಚರ್ಚೆಗೆ ಅವಕಾಶ ಕೋರಿದ್ದರು ಎನ್ನಲಾಗಿದೆ.

ಸಭೆಗೆ ಬಾರದ ಶೋಭಾ ಕರಂದ್ಲಾಜೆ :

ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ್ದರೂ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಗುವ ಮಾಹಿತಿ ಪಡೆದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಭೆಗೆ ಆಗಮಿಸಲಿಲ್ಲ.
ಶಾಸಕ ಎಚ್ ಡಿ ತಮ್ಮಯ್ಯ ಸಭೆಯಲ್ಲಿ ಪಾಲ್ಗೊಂಡಿದ್ದರು. ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ಸೂಚಿಸಿದ್ದ ಎಸ್ ಡಿ ಪಿ ಐ ಸದಸ್ಯೆ ಕೂಡ ಸಭೆಗೆ ಬಂದಿರಲಿಲ್ಲ.

ಇದರಿಂದಾಗಿ ಸ್ವಪಕ್ಷದ ಅಧ್ಯಕ್ಷ ವರಸಿದ್ಧಿ ಯವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಬಿ.ಜೆ.ಪಿ. ಗೆ ತೀವ್ರ ಮುಖಭಂಗ ಉಂಟಾಗಿದೆ. ಮಾಜಿ ಸಚಿವ ಸಿ.ಟಿ.ರವಿಯವರ ಆಪ್ತ ವಲಯದಲ್ಲಿದ್ದ ವರಸಿದ್ಧಿ ವೇಣುಗೋಪಾಲ್ ಈಗ ಬಿ.ಜೆ.ಪಿ. ವಿರುದ್ಧವೇ ಬಂಡೆದ್ದು ಪಕ್ಷಕ್ಕೆ ಮಗ್ಗಲ ಮುಳ್ಳಾಗಿ ಪರಿಣಮಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ