October 5, 2024

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ಖುಲಾಸೆಗೊಳಿಸಿದ ಕೇಂದ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜ್ಯ ಹೈಕೋರ್ಟಿಗೆ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದೆ.

ಈ ಪ್ರಕರಣ ಸಂಬಂಧ 2023ರ ಜುಲೈ 16ರಂದು ಸಿ.ಬಿ.ಐ. ವಿಶೇಷ ನ್ಯಾಯಾಲದಿಂದ ತೀರ್ಪು  ಹೊರಬಿದ್ದಿದ್ದು, ಇದರಲ್ಲಿ ನ್ಯಾಯಾಲಯವು ಸಂತೋಷ್ ರಾವ್ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಸಿಬಿಐ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ತೀರ್ಮಾನಕ್ಕೆ ಬಂದು ಆತನನ್ನು ನಿರಪರಾಧಿ ಎಂದು ಬಿಡುಗಡೆ ಮಾಡಿರುವುದಾಗಿ ಉಲ್ಲೇಖಿಸಿತ್ತು. ಈಗ ಸಿಬಿಐ ಮೇಲ್ಮನವಿ ಸಲ್ಲಿಸಿ ಮತ್ತೊಂದು ಸುತ್ತಿನ ಪ್ರಯತ್ನಕ್ಕೆ ಇಳಿದಿದೆ.

ಅದು ಅಲ್ಲದೆ, ಜುಲೈ 16ರಂದು ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ್ದ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯವು ಮೇಲ್ಮನವಿ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿತ್ತು. ಆದರೆ, ಈಗ ನಾಲ್ಕು ತಿಂಗಳ ಬಳಿಕ ಮನವಿ ಮಾಡಿರುವುದರಿಂದ ಇದನ್ನು ಹೈಕೋರ್ಟ್ ಮಾನ್ಯ ಮಾಡುವುದೇ ಎಂದು ಕಾದು ನೋಡಬೇಕಾಗಿದೆ. ಸಂತೋಷ್ ರಾವ್ ನೇ ನಿಜವಾದ ಆರೋಪಿ ಎಂದು ಸಿಬಿಐ ಮೇಲ್ಮನವಿಯಲ್ಲಿಯೂ ವಾದ ಮಾಡಿದೆ ಮತ್ತು ಮರು ವಿಚಾರಣೆಯ ವೇಳೆ ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಒದಗಿಸುವ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

2012ರ ಅಕ್ಟೋಬರ್ 10ರಂದು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಪಾಂಗಾಳ ಎಂಬಲ್ಲಿ ಸೌಜನ್ಯಾ ಎಂಬ 17 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು. ಉಜಿರೆಯ ಎಸ್‍ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಆಕೆ ಕಾಲೇಜು ಮುಗಿಸಿ ಧರ್ಮಸ್ಥಳಕ್ಕೆ ಬಂದು ಬಸ್‍ನಿಂದ ಇಳಿದು ಮನೆಗೆ ಹೋಗುತ್ತಿದ್ದಾಗ ದಾರಿಯಲ್ಲಿ ಆಕೆಯ ಕೊಲೆ ಮತ್ತು ಅತ್ಯಾಚಾರ ನಡೆದಿತ್ತು.

ಪ್ರಕರಣವನ್ನು ಮೊದಲಿಗೆ ಬೆಳ್ತಂಗಡಿ ಠಾಣಾ ಪೊಲೀಸರು ತನಿಖೆ ನಡೆಸಿದ್ದರು. ತನಿಖಾಧಿಕಾರಿಗಳು ಕಾರ್ಕಳ ಮೂಲದ ಸಂತೋಷ್ ರಾವ್ ಎಂಬಾತನನ್ನು ಆರೋಪಿಯಾಗಿ ಗುರುತಿಸಿದ್ದರು. ಮುಂದೆ ಈ ಪ್ರಕರಣ ತೀವ್ರ ಸ್ವರೂಪವನ್ನು ಪಡೆದು ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿತು. ಸಿಬಿಐ ವಿಶೇಷ ನ್ಯಾಯಾಲಯವು 2023ರ ಜುಲೈ 16ರಂದು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಇದರಿಂದ ವಿವಿಧ ಸಂಘಟನೆಗಳು ರಾಜಕೀಯ ಪಕ್ಷಗಳು ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಈಗಲೂ ಪ್ರತಿಭಟನೆ ಮುಂದುವರಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ