October 5, 2024

ಬೈಕಿಗೆ ತರಕಾರಿ ಲಾರಿ ಡಿಕ್ಕಿಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಪಟ್ಟಣದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ.

ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ಮೂಲಕ ಮಂಗಳೂರಿಗೆ ಕಡೆಗೆ ಹೋಗ್ತಿದ್ದ ಲಾರಿ, ಬಿದರಹಳ್ಳಿ ಮುಖ್ಯರಸ್ತೆಯಲ್ಲಿ ಸಾಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ  ಮಂಜುನಾಥ್ (35)‌ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ್ ಬಿದರಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಡಾಟಾ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತ ಮಂಜುನಾಥ್ ಮೂಡಿಗೆರೆ ತಾಲೂಕಿನ ಕೆಂಜಿಗೆ ಗ್ರಾಮದ ನಿವಾಸಿ

ತಂದೆ ರಾಮು ಅವರೊಂದಿಗೆ ಮಗ ಮಂಜುನಾಥ್  ಬೈಕಿನಲ್ಲಿ ಸಕಲೇಶಪುರ ತಾಲ್ಲೂಕಿನ ಹಾನುಬಾಳು ಗ್ರಾಮದ ಸಂಬಂಧಿಕರ ಮನೆಗೆ ಹೋಗಿ ರಾತ್ರಿ ಊರಿಗೆ ವಾಪಾಸಾಗುತ್ತಿದ್ದರು ಎನ್ನಲಾಗಿದೆ.

ರಾತ್ರಿ ಸುಮಾರು 10-30 ರ ಸಮಯದಲ್ಲಿ ಬಿದರಹಳ್ಳಿ ಸಮೀಪ ಮುಖ್ಯರಸ್ತೆಯಲ್ಲಿ ಹಿಂದಿನಿಂದ ಬಂದ ತರಕಾರಿ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಲಾರಿ ಚಾಲಕನ ಅವಸರದ ಮತ್ತು ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಲಾರಿ ಬೈಕನ್ನು 1 ಕಿ.ಮೀ. ಎಳೆದೊಯ್ದಿದ್ದ  ನಂತರ ಬಿದರಹಳ್ಳಿ ಮೊರಾರ್ಜಿ ಶಾಲೆ ಸಮೀಪ ಲಾರಿಯೂ ರಸ್ತೆ ಬದಿಗೆ ಪಲ್ಟಿಯಾಗಿದೆ.

ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಮೃತ ಮಂಜುನಾಥ್ ಅತ್ಯಂತ ಪ್ರತಿಭಾನ್ವಿತರಾಗಿದ್ದರು. ಈ ಹಿಂದೆ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ತಮ್ಮ ಸ್ನೇಹಪೂರ್ವಕ ನಡವಳಿಕೆಯಿಂದ ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದರು.

ಕಳೆದ ವರ್ಷ ವಿವಾಹವಾಗಿದ್ದು ಅವರ ಪತ್ನಿ ಈಗ ತುಂಬು ಗರ್ಭಿಣಿ ಎಂದು ಕುಟುಂಬ ಮೂಲದಿಂದ ತಿಳಿದುಬಂದಿದೆ.

ಮೃತ ಮಂಜುನಾಥ್ ಅವರ ತಾಯಿ ಮುತ್ತು ಅವರು ಈ ಹಿಂದೆ ಬಿದರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು

ಒಂದೇ ವಾರದಲ್ಲಿ ಎರಡನೇ ಸಾವು :

ಬಿದರಹಳ್ಳಿ ಸಮೀಪ ಒಂದೇ ವಾರದಲ್ಲಿ ಅಪಘಾತದಲ್ಲಿ ಎರಡನೇ ಸಾವು ಸಂಭವಿಸಿದೆ.

ಕಳೆದ ವಾರ ಬೈಕ್ ಸವಾರನ ಮೇಲೆ ಗ್ಯಾಸ್ ಲಾರಿ ಹತ್ತಿ ಕೊಪ್ಪ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಇಲ್ಲಿ ಸತತವಾಗಿ ಅಪಘಾತಗಳು ಸಂಭವಿಸುತ್ತಲೇ ಇವೆ. ನೇರ ಮತ್ತು ಅಗಲವಾದ ರಸ್ತೆಯಾಗಿದ್ದು ಚಾಲಕರು ಅತಿವೇಗದಲ್ಲಿ ಚಲಿಸುತ್ತಾರೆ. ಇಲ್ಲಿ ಹಂಪ್ಸ್ ಮತ್ತು ಸೂಚನಾ ಫಲಕವನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಲೇ ಬಂದಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ