October 5, 2024

ಸಹಕಾರ ಕ್ಷೇತ್ರದ ಕಾರ್ಯವ್ಯಾಪ್ತಿ ಇತ್ತೀಚಿನ ದಿನಗಳಲ್ಲಿ ಹೊಸ ಆಯಾಮ ಪಡೆದುಕೊಂಡು ವಿಸ್ತಾರಗೊಳ್ಳುತ್ತಿದೆ. ಸಹಕಾರ ಕ್ಷೇತ್ರದ ಸವಲತ್ತುಗಳು ಸಮಾಜದ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ, ಮೂಡಿಗೆರೆ ಪಿ.ಸಿ.ಎ.ಆರ್.ಡಿ.ಬ್ಯಾಂಕ್ ಅಧ್ಯಕ್ಷ ಹಳಸೆ ಶಿವಣ್ಣ ಅಭಿಪ್ರಾಯಿಸಿದ್ದಾರೆ.

ಅವರು ಬುಧವಾರ ಮೂಡಿಗೆರೆ ರೈತಭವನದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮೂಡಿಗೆರೆ ಟಿ.ಎ.ಪಿ.ಸಿ.ಎಂ.ಎಸ್, ಮೂಡಿಗೆರೆ ಮತ್ತು ಕಳಸ ತಾಲ್ಲೂಕಿನವ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ  ಹಮ್ಮಿಕೊಂಡಿದ್ದ 70ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯವನ್ನು ಪ್ರಾರಂಭಿಸಿದೆ. ದೇಶದ ಎಲ್ಲಾ ಸಹಕಾರ ಸಂಸ್ಥೆಗಳನ್ನು ಡಿಜಿಟಲಿಕರಣಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ಜನರು ಸಹಕಾರ ರಂಗದೊಂದಿಗೆ ಸಹಭಾಗಿತ್ವ ಹೊಂದಿ ಆರ್ಥಿಕ ಅಭಿವೃದ್ಧಿ ಹೊಂದಲು ಹೆಚ್ಚಿನ ಆಸಕ್ತಿ ತೋರಬೇಕು ಎಂದಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಸಹಕಾರ ಬ್ಯಾಂಕ್ ವತಿಯಿಂದ ಕಳೆದ ಸಾಲಿನಲ್ಲಿ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳಿಗೆ ರೂ. 1 ಲಕ್ಷ ಪ್ರೋತ್ಸಾಹಧನವನ್ನು ವಿತರಿಸಿದೆ. ರಾಜ್ಯ ಸರ್ಕಾರ ರೈತರು ಕೃಷಿ ಉದ್ದೇಶಗಳಿಗೆ ಪಿಕಪ್ ವಾಹನ ಖರೀದಿಸಲು ಕಡಿಮೆ ಬಡ್ಡಿದರದಲ್ಲಿ ಸಹಕಾರ ಬ್ಯಾಂಕ್ ಗಳ ಮೂಲಕ ಸಾಲ ನೀಡಲು ಮುಂದಾಗಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದರು.

ಸಹಕಾರ ಸಪ್ತಾಹದಲ್ಲಿ “ಸಾಲೇತರ ಸಹಕಾರ ಸಂಘಗಳ ಪುನಃಶ್ಚೇತನ ಹಾಗೂ ಆರ್ಥಿಕ ಸೇರ್ಪಡೆ ದಿನ” ಕುರಿತು ವಿಶೇಷ ಉಪನ್ಯಾಸ ನೀಡಿದ ಕಾಸ್ಕಾರ್ಡ್ ಬ್ಯಾಂಕ್ ಬೆಂಗಳೂರು ಇದರ ಸಾಮಾನ್ಯ ಶ್ರೇಣಿ ಸಮಿತಿ ಕಾರ್ಯದರ್ಶಿ ಜಿ.ಎನ್. ಲಕ್ಷ್ಮೀನಾರಾಯಣ ಮಾತನಾಡಿ ; ಸಹಕಾರ ಕ್ಷೇತ್ರದಲ್ಲಿ ಏಳು ತತ್ವಗಳು, ಏಳು ಬಣ್ಣಗಳು, ಏಳು ದಿನಗಳು ಬಹು ಮಹತ್ವದ್ದಾಗಿವೆ. ಎಲ್ಲಾ ಸಹಕಾರಿ ಸಂಸ್ಥೆಗಳು ಈ ತತ್ವಗಳನ್ನು ಅಳವಡಿಸಿಕೊಂಡರೆ ಉನ್ನತಿ ಸಾಧಿಸಬಹುದು. ಸಹಕಾರ ಕ್ಷೇತ್ರ ಕೇವಲ ಲಾಭಗಳಿಕೆಯ ಉದ್ದೇಶ ಹೊಂದಿರುವುದಿಲ್ಲ. ಸೇವಾ ಮನೋಭಾವನೆ ಸಹಕಾರ ಕ್ಷೇತ್ರದ ಮೂಲ ದ್ಯೇಯವಾಗಿದೆ, ಆರೋಗ್ಯ ಶಿಬಿರ, ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಜನರಿಗೆ ಜನಸಾಮಾನ್ಯರನ್ನು ಸಹಕಾರ ಕ್ಷೇತ್ರದ ಕಡೆಗೆ ಸೆಳೆಯಬೇಕು ಎಂದರು.

ಮಾಜಿ ಸಚಿವೆ ಮೋಟಮ್ಮ ಮಾತನಾಡಿ ಸಹಕಾರ ಸಂಘಗಳಲ್ಲಿ ಮಹಿಳೆಯರು ಹೆಚ್ಚು ಹೆಚ್ಚು ಭಾಗವಹಿಸಬೇಕು, ಜನಸಾಮಾನ್ಯರು ಸಹಕಾರ ಸಂಘಗಳಲ್ಲಿ ಸಿಗುವ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕು, ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮೂಲಕ ಹೆಚ್ಚಿನ ಸೇವೆಯನ್ನು ಪಡೆಯಬೇಕು ಎಂದರು.

ಕಾಫಿ ಮಂಡಳಿ ನೂತನ ಅಧ್ಯಕ್ಷ ದಿನೇಶ್ ದೇವರುಂದ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ, ಗೌಡಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಕೆ. ದಿವಾಕರ್ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ; ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಹಕಾರ ಚಳುವಳಿ ಬಹಳ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಸಹಕಾರ ಸಂಘಗಳು ಶಿಸ್ತುಬದ್ಧ ಕಾರ್ಯಚಟುವಟಿಕೆ ಯಿಂದ ಕಾರ್ಯನಿರ್ವಹಿಸಲು ಸಹಕಾರ ಯೂನಿಯನ್ ಮೂಲಕ ಅನೇಕ ತರಭೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಹಕಾರ ಸಪ್ತಾಹದಲ್ಲಿ ಸಹಕಾರ ಕ್ಷೇತ್ರದ ಆತ್ಮಾವಲೋಕನಕ್ಕೆ ಉತ್ತಮ ಅವಕಾಶ ದೊರೆಯುತ್ತದೆ ಎಂದರು.

ಸಪ್ತಾಹದಲ್ಲಿ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವರುಂದ, ರಾಜ್ಯ ಲ್ಯಾಂಪ್ಸ್ ಮಹಾಮಂಡಳದ ಅಧ್ಯಕ್ಷ ಬಿ.ಎನ್. ಮುತ್ತಪ್ಪ, ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಿ.ಸಿ. ಲೋಕಪ್ಪಗೌಡ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಡಾ. ಜಿ.ಎಸ್. ಮಹಾಬಲ ವಹಿಸಿದ್ದರು.  ಮೂಡಿಗೆರೆ ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ವಿ.ಕೆ. ಶಿವೇಗೌಡ, ಹಿರಿಯ ಸಹಕಾರಿ ಓ.ಎಸ್. ಗೋಪಾಲಗೌಡ, ಮುಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ, ಹಾಪ್ ಕಾಮ್ಸ್ ಅಧ್ಯಕ್ಷ ಡಿ.ಬಿ. ಜಯಪ್ರಕಾಶ್, ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಬಿ.ಜೆ.ಪಿ. ಮುಖಂಡ ದೀಪಕ್ ದೊಡ್ಡಯ್ಯ, ಹಳೇಮೂಡಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಂಜಿತಾ, ತಾಲ್ಲೂಕಿನ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಉತ್ತಮ ಸಾಧನೆ ತೋರಿದ ಇಡಕಣಿ ಕೃಷಿ ಪತ್ತಿನ ಸಹಕಾರ ಸಂಘ, ತ್ರಿಪುರ ಕೃಷಿ ಪತ್ತಿನ ಸಹಕಾರ ಸಂಘ, ಲ್ಯಾಂಪ್ಸ್ ಸಹಕಾರ ಸಂಘದ ಅಧ್ಯಕ್ಷರು, ಸಿ.ಇ.ಓ ಮತ್ತು ಆಡಳಿತ ಮಂಡಳಿ ಸದಸ್ಯರನ್ನು ಸನ್ಮಾನಿಸಲಾಯಿತು.

ಸೇವೆಯಿಂದ ನಿವೃತ್ತಿ ಹೊಂದಿದೆ ಗೌಡಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಓ ಎಸ್.ಆರ್. ರವೀಂದ್ರನಾಥ್ ಅವರನ್ನು ಮತ್ತು ನಿವೃತ್ತಿ ಹೊಂದಿದ ವಿವಿಧ ಸಹಕಾರಿ ಸಂಘಗಳ ಸಿಬ್ಬಂದಿಯನ್ನು ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ.. ಮತ್ತು ಪಿ.ಯು.ಸಿ.ಯಲ್ಲಿ ಉನ್ನತ ಸಾಧನೆ ಮಾಡಿದ ಸಹಕಾರ ಸಂಘಗಳ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ರೈತಭವನದಲ್ಲಿ ಸ್ವಚ್ಚತಾ ಕಾರ್ಯದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಸನ್ಮಾನಿಸಲಾಯಿತು.

ಮೂಡಿಗೆರೆ ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ವಿ.ಕೆ. ಶಿವೇಗೌಡ ವಲೇಕರಹಟ್ಟಿ, ನಿರ್ದೇಶಕ ಉತ್ತಮ್ ಕುಮಾರ್ ಹಂತೂರು ಸ್ವಾಗತಿಸಿದರು. ಕೃಷಿಕ ಸಮಾಜದ ಕಾರ್ಯದರ್ಶಿ ಪಿ .ಕೆ. ನಾಗೇಶ್ ವಂದಿಸಿದರು. ಹೆಚ್.ಟಿ. ಭಾನುಮತಿ ಸಂಗಡಿಗರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಟಿ.ಎ.ಪಿ.ಸಿ.ಎಂ.ಎಸ್. ಮಾಜಿ ಅಧ್ಯಕ್ಷ ಎಂ.ವಿ.ಜಗದೀಶ್ ನಿರೂಪಣೆ ಮಾಡಿದರು. ಮೂಡಿಗೆರೆ ಮತ್ತು ಕಳಸ ತಾಲ್ಲೂಕಿನ ವಿವಿಧ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಸಿಬ್ಬಂದಿವರ್ಗದವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿಕೊಟ್ಟರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ