October 5, 2024

ಉಡುಪಿಯ ನೇಜಾರ್ ಬಳಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಸಂಬಂಧ ಸಂತ್ರಸ್ಥ ಕುಟುಂಬದ ಯಜಮಾನ ಮೊಹಮ್ಮದ್ ನೂರ್ ಅವರು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಸೀನಾ(48) ಮತ್ತು ಆಕೆಯ ಮಕ್ಕಳಾದ ಅಫ್ಸಾನ್(23), ಅಸೀಮ್ (12) ಮತ್ತು ಅಯ್ನಾಜ್ (21) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆಯನ್ನು ಪೊಲೀಸರು ಬಂಧಿಸಿದ್ದಾರೆ.

ಟಿವಿ ಚಾನೆಲ್‌ನೊಂದಿಗಿನ ಸಂವಾದದಲ್ಲಿ, ಅಯ್ನಾಜ್ ತಂದೆ ಮೊಹಮ್ಮದ್ ನೂರ್, ಬರ್ಬರ ಹತ್ಯೆಯ ನಂತರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಆಡಳಿತ, ತಮ್ಮ ಕುಟುಂಬವನ್ನು ನಡೆಸಿಕೊಂಡ ರೀತಿಯಿಂದ ತಮಗೆ ತುಂಬಾ ನೋವಾಗಿದೆ ಎಂದು ಹೇಳಿದ್ದಾರೆ.

ಅವರು ನಮಗೆ ಕರೆ ಮಾಡಿಲ್ಲ ಅಥವಾ ಘಟನೆಯ ಬಗ್ಗೆ ತಮ್ಮ ದುಃಖವನ್ನು ಸಹ ವ್ಯಕ್ತಪಡಿಸಿಲ್ಲ. ಅವರು ಯಾವ ರೀತಿಯ ಉದ್ಯೋಗಿಯನ್ನು  ನೇಮಕ ಮಾಡಿಕೊಳ್ಳುತ್ತಾರೆ? ಪ್ರವೀಣ್ ಚೌಗುಲೆ ಯನ್ನು ನೇಮಕ ಮಾಡಿಕೊಳ್ಳುವ ಮುನ್ನ ಆತನ ಹಿನ್ನೆಲೆ ಪರಿಶೀಲಿಸಿದ್ದೀರಾ? ಅವನು ಕಂಪನಿಯ ಹಿರಿಯ ಸಿಬ್ಬಂದಿಯಾಗಿರುವುದರಿಂದ ಪ್ರಯಾಣಿಕರಿಗೆ ವಿಮಾನದಲ್ಲಿ ಯಾವ ಸುರಕ್ಷತೆ ಇರುತ್ತಿತ್ತು” ಎಂದು ಮೊಹಮ್ಮದ್ ನೂರ್ ಪ್ರಶ್ನಿಸಿದ್ದಾರೆ.

ಏನಿದು ನಾಲ್ವರ ಹತ್ಯೆಯ ಅಮಾನುಷ ಘಟನೆ ? :

ನವೆಂಬರ್ 12 ರಂದು ಉಡುಪಿಯ ನೇಜಾರ್ ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬೀಕರವಾಗಿ ಕೊಲೆ ಮಾಡಲಾಗಿತ್ತು. ಹಾಡಹಗಲೇ ಮನೆಗೆ ನುಗ್ಗಿದ್ದ ದುಷ್ಕರ್ಮಿ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಹಸೀನಾ(48) ಮತ್ತು ಆಕೆಯ ಮಕ್ಕಳಾದ ಅಫ್ಸಾನ್(23), ಅಸೀಮ್ (12) ಮತ್ತು ಅಯ್ನಾಜ್ (21) ಅವರನ್ನು ಕೊಲೆ ಮಾಡಲಾಗಿತ್ತು. ಮನೆಯಲ್ಲಿದ್ದ ಹಸೀನಾರ ಅತ್ತೆಯೂ ಗಾಯಗೊಂಡಿದ್ದು ಸ್ನಾನಗೃಹದಲ್ಲಿ ಅಡಗಿ ಕುಳಿತು ತನ್ನ ಜೀವ ಉಳಿಸಿಕೊಂಡಿದ್ದರು.

ಮೃತ ಅಯ್ನಾಜ್ ಏರ್ ಇಂಡಿಯಾ ಗಗನಸಖಿಯಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅಫ್ಸಾನ್ ಕೂಡ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅಸೀಮ್ 8ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ. ತಾಯಿ ಹಸೀನಾ ಗೃಹಿಣಿಯಾಗಿದ್ದರು. ಅವತ ಪತಿ ಮೊಹಮ್ಮದ್ ನೂರ್ ಅರಬ್ ನ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಅವರ ಹಿರಿಯ ಪುತ್ರ ಏರ್ ಇಂಡಿಯಾ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.

ಇದೀಗ ಸುಂದರ ಕುಟುಂಬದಲ್ಲಿ ನಾಲ್ವರು ಕೊಲೆಯಾಗಿದ್ದು, ತಂದೆ ಮಗ ಮಾತ್ರ ಉಳಿದುಕೊಂಡಿದ್ದಾರೆ.

ಪ್ರಕರಣ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಇಡೀ ಉಡುಪಿ ಜಿಲ್ಲೆ ಈ ಕೊಲೆಯಿಂದ ಬೆಚ್ಚಿ ಬಿದ್ದಿತ್ತು. ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಎರಡೇ ದಿನದಲ್ಲಿ ಆರೋಪಿ ಪ್ರವೀಣ್ ಅರುಣ್   ಚೌಗಲೆಯನ್ನು ಬಂಧಿಸಿದ್ದರು.

ಆರೋಪಿ ಮಹಾರಾಷ್ಟ್ರ ಮೂಲದವನಾಗಿದ್ದು, ಕೆಲ ಸಮಯ ಮಹಾರಾಷ್ಟ್ರದಲ್ಲಿ ಪೊಲೀಸ್ ಸಿಬ್ಬಂದಿಯಾಗಿದ್ದ ನಂತರ ಏರ್ ಇಂಡಿಯಾ ಕ್ಯಾಬಿನ್ ಕ್ರೂ ಸಿಬ್ಬಂದಿಯಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ.

ಕೊಲೆ ಮಾಡಿ ತಲೆಮರೆಸಿಕೊಂಡು ತಿರುಗುತ್ತಿದ್ದ ಆತನನ್ನು ಮೊಬೈಲ್ ಲೊಕೇಷನ್ ಬೆನ್ನು ಹತ್ತಿ ಬೆಳಗಾವಿ ಜಿಲ್ಲೆಯ ಕುಡುಚಿಯಲ್ಲಿ ಬಂಧಿಸಲಾಗಿತ್ತು. ನಾಲ್ಕೂ ಕೊಲೆಗಳನ್ನು ತಾನೇ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ತನ್ನ ಜೊತೆ ಕೆಲಸ ಮಾಡುತ್ತಿದ್ದ ಆಯ್ನಾಜ್ ಳನ್ನು ಪ್ರೀತಿಸುವಂತೆ ಒತ್ತಾಯಪಡಿಸುತ್ತಿದ್ದ ಆಕೆ ಒಪ್ಪದಿದ್ದಾಗ ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ಚಾಕು ಸಹಿತ ಉಡುಪಿಯ ಆಕೆಯ ಮನೆಗೆ ಬಂದಿದ್ದ. ಆಯ್ನಾಜ್ ಳನ್ನು ಕೊಲೆ ಮಾಡುವ ಸಂದರ್ಭದಲ್ಲಿ ಅಡ್ಡಬಂದ ಕುಟುಂಬದ ಇತರ ಮೂವರನ್ನು ಪಾಪಿ ಕೊಲೆ ಮಾಡಿದ್ದ.

ಆರೋಪಿ ಈಗಾಗಲೇ ವಿವಾಹವಾಗಿ ತನ್ನ ಕುಟುಂಬದೊಂದಿಗೆ ಮಂಗಳೂರಿನಲ್ಲಿ ವಾಸವಾಗಿದ್ದ. ಪ್ರಕರಣದ ತನಿಖೆಗೆ ವಿಶೇಷ ನ್ಯಾಯಾಪೀಠ ರಚಿಸಿವಚನ ತ್ವರಿತವಾಗಿ ವಿಚಾರಣೆ ನಡೆಸಿ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂಬ ಕೂಗು ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ