October 5, 2024

ಕನ್ನಡ ಸಾಹಿತ್ಯ ಪರಿಷತ್ತು, ಕಸಬಾ ಹೋಬಳಿ ಘಟಕ ಮೂಡಿಗೆರೆ ವತಿಯಿಂದ ಕರ್ನಾಟಕ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಅಂಗವಾಗಿ “ರಾಜ್ಯಮಟ್ಟದ ಕವಿಗೋಷ್ಠಿ” ಮತ್ತು ಕನ್ನಡ ಹಬ್ಬ ಕಾರ್ಯಕ್ರಮದ ಪ್ರಯುಕ್ತ “ಸಾಹಿತ್ಯ ಸಂಜೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎಸ್. ನಾಗರಾಜು ಮಾಹಿತಿ ಹಂಚಿಕೊಂಡಿದ್ದಾರೆ.

ನವೆಂಬರ್ 26ರಂದು ಭಾನುವಾರ ಮೂಡಿಗೆರೆ ಜೇಸಿ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿAದ ರಾಜ್ಯ ಮಟ್ಟದ ಕವಿಗೋಷ್ಠಿ ನಡೆಯಲಿದೆ. ಸಾಹಿತಿ, ಉಪನ್ಯಾಸಕರಾದ ಹೆಚ್.ಎಂ. ನಾಗರಾಜ್ ರಾವ್ ಕಲ್ಕಟ್ಟೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಾಹಿತಿ ಧನಂಜಯ ಜೀವಾಳ ಆಶಯ ನುಡಿಗಳನ್ನಾಡಲಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿ, ಉಪನ್ಯಾಸಕ ಉಮೇಶ್ ಹೊಸಳ್ಳಿ ವಹಿಸಲಿದ್ದಾರೆ.

ಶಾಸಕಿ ಶ್ರೀಮತಿ ನಯನ ಮೋಟಮ್ಮ, ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಸೂರಿ ಶ್ರೀನಿವಾಸ್, ಹಳೇಕೋಟೆ ರಮೇಶ್ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ರಾಜ್ಯದ ವಿವಿಧ ಭಾಗಗಳ 50ಕ್ಕೂ ಹೆಚ್ಚು ಕವಿಗಳು ಭಾಗವಹಿಸಲಿದ್ದಾರೆ.

ಸಂಜೆ 6 ಗಂಟೆಗೆ ಸಾಹಿತ್ಯ ಸಂಜೆ ಕಾರ್ಯಕ್ರಮ ಏರ್ಪಡಿಸಿದ್ದು. ಮೂಡಿಗೆರೆ ತಾಲ್ಲೂಕು ಕ.ಸಾ.ಪ. ಅಧ್ಯಕ್ಷರಾದ ಹೆಚ್.ಎಂ. ಶಾಂತಕುಮಾರ್ ಉದ್ಘಾಟಿಸಲಿದ್ದಾರೆ. ದರ್ಪಣ ಪತ್ರಿಕೆ ಸಂಪಾದ ಪ್ರಸನ್ನ ಗೌಡಹಳ್ಳಿ ಉಪನ್ಯಾಸ ನೀಡಲಿದ್ದಾರೆ. ಕ.ಸಾ.ಪ. ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಮತ್ತು ಗಾನ ಪ್ರತಿಭೆಗಳಿಂದ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಎಸ್. ನಾಗರಾಜು ಅವರು ವಹಿಸಲಿದ್ದಾರೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾಹಿತ್ಯ ಪ್ರಿಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಕೋರಿದ್ದಾರೆ.
ಮಾಹಿತಿಗಾಗಿ : 94487 75944, 91104 46363

 

ಅರಣ್ಯ ಇಲಾಖೆಯಿಂದ ಕಾರ್ತಿಕ್ ಗೌಡ ಪಾರ್ಥೀವ ಶರೀರಕ್ಕೆ ಅಂತಿಮ ಗೌರವ ; ಗೆಳೆಯನ ನೆನೆದು ಗದ್ಗದಿತರಾದ ಸಹೋದ್ಯೋಗಿಗಳು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ