October 5, 2024

ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ಭಾನುವಾರ ನಡೆದಿದೆ. 

ಮೃತರು ಗರೀಬ್ ಸಾಬ್(36), ಸುಮಯ್ಯ(32), ಹಜೀನಾ(14), ಮೊಹ್ಮದ್ ಶಬೀರ್​(10), ಮೊಹಮದ್ ಮುನೀರ್(8) ಎಂದು ತಿಳಿದುಬಂದಿದೆ. 

 ಎರಡು ಪುಟಗಳ ಡೆತ್‌ನೋಟ್​ ಸಿಕ್ಕಿದ್ದು ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಬರೆದಿದ್ದಾರೆ. ಇನ್ನು ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದಾರೆ.

ಸ್ಥಳಕ್ಕೆ ಎಸ್‌ಪಿ ಅಶೋಕ್ ವೆಂಕಟ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಡೆತ್ ನೋಟ್ ನಲ್ಲಿ ತಮ್ಮ ಸಾವಿಗೆ ಕಾರಣರಾದವರ ಹೆಸರನ್ನುಉಲ್ಲೇಖಿಸಿದ್ದಾರೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಪಟ್ಟಣಕ್ಕೆ ಬಂದು ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ಕಬಾಬ್ ಅಂಗಡಿ ಹಾಕಿ ಅದರಲ್ಲಿ ಬಂದ ಆದಾಯದಿಂದ ಜೀವನ ಸಾಗಿಸಲು ಮತ್ತು ಮಕ್ಕಳ ಶಿಕ್ಷಣಕ್ಕೆ ತುಂಬಾ ಕಷ್ಟವಾಗುತ್ತಿತ್ತು. ಹಾಗಾಗಿ ಕೈ ಸಾಲ ಮಾಡಿದ್ದರು ಎಂದು ತಿಳಿದುಬಂದಿದೆ. ಸಾಲವನ್ನು ತೀರಿಸುವಂತೆ ಸಾಲಗಾರರು ಒತ್ತಾಯ ಹಾಕುತ್ತಿದ್ದಾಗ ಸಾಲಬಾಧೆ ತಾಳಲಾರದೇ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಡೆತ್ ನೋಟ್ ನಲ್ಲಿ ಏನಿದೆ ?

ತಮ್ಮ ದೊಡ್ಡಮ್ಮನಿಗೆ ಬರೆದ ಡೆತ್ ನೋಟ್ ನಲ್ಲಿ ನಮಗೆ ಸಾಲ ಹೆಚ್ಚಾಗಿದೆ ವ್ಯಾಪಾರದಿಂದ ಲಾಭ ಬರುತ್ತಿಲ್ಲ. ಸಂಸಾರ ಮಾಡುವುದು ಕಷ್ಟವಾಗಿದೆ. ಊಟಕ್ಕೂ ತೊಂದರೆಯಾಗುತ್ತಿದೆ. ಊರಲ್ಲಿದ್ದಾಗ ಸಂಬಂಧಿಕರು ವಿಷಕಾರುತ್ತಿದ್ದರು. ಅದಕ್ಕಾಗಿ ಜೀವನ ಸಾಗಿಸಲು ಮಕ್ಕಳನ್ನು ಓದಿಸಲು ನಗರಕ್ಕೆ ಬಂದಿದ್ದೆವು. ನಾವು ವಾಸಿಸುವ ಮನೆಯ ಕೆಳಗಿನ ಮನೆಯವರು ನಮಗೆ ತುಂಬಾ ತೊಂದರೆ ಕೊಡುತ್ತಿದ್ದರು. ನಮ್ಮ ಮನೆಯ ಕೆಳಗಿನ ಖಲಂದರ್ ಅವರ ಮಗಳು ಸಾನಿಯ, ಹಿರಿಯ ಮಗ, ಮಹಡಿ ಮನೆಯ ಶಬಾನ ಮತ್ತು ಅವರ ಮಗಳು ಸಾನಿಯಾ ಇವರುಗಳು ನಮ್ಮ ಸಾವಿಗೆ ಕಾರಣ ಎಂದು ಉಲ್ಲೇಖಿಸಿದ್ದಾರೆ.

ಇವರ ಕಾಟ ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ಗೃಹಮಂತ್ರಿಗಳು ಇವರಿಗೆ ತಕ್ಕ ಶಿಕ್ಷೆ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಒಂದೇ ಕುಟುಂಬದ ಐದೂ ಜನರು ಆತ್ಮಹತ್ಯೆಗೆ ಶರಣಾಗಿರುವ ಸುದ್ದಿ ಕೇಳಿ ಸಾರ್ವಜನಿಕರು, ಸಂಬಂಧಿಕರು ಅವರ ಮನೆ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ