October 5, 2024

ಮೂಡಿಗೆರೆ ರೋಟರಿ ಸಂಸ್ಥೆಯು ಜಿಲ್ಲಾ ಮಟ್ಟದಲ್ಲಿ ಒಟ್ಟು 8 ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ. 2022-23ನೇ ಸಾಲಿನಲ್ಲಿ ಮೂಡಿಗೆರೆ ಘಟಕವು ಆಯೋಜಿಸಿದ್ದ ಕಾರ್ಯಕ್ರಮಗಳಿಗಾಗಿ ಪ್ರಶಸ್ತಿಗಳನ್ನು ಗಳಿಸಿದೆ.

ಇತ್ತೀಚೆಗೆ ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ ರೋಟರಿ ಜಿಲ್ಲೆ-3180 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂಡಿಗೆರೆ ಘಟಕವು ಪ್ರಶಸ್ತಿಗಳನ್ನು ಸ್ವೀಕರಿಸಿದೆ.

2022-23ನೇ ಸಾಲಿನ ರೋಟರಿ ಜಿಲ್ಲಾ ರಾಜ್ಯಪಾಲರಾದ ಡಾ. ಜಯಗೌರಿ ಅವರು ಜಿಲ್ಲೆಯ ವಿವಿಧ ರೋಟರಿ ಕ್ಲಬ್ ಗಳಿಗೆ ಪ್ರಶಸ್ತಿಗಳನ್ನು ವಿತರಿಸಿದರು.

ಮೂಡಿಗೆರೆ ರೋಟರಿ ಸಂಸ್ಥೆಯ ಪರವಾಗಿ 2022-23ನೇ ಸಾಲಿನ ಅಧ್ಯಕ್ಷ ಹೆಚ್.ಆರ್.ಪ್ರದೀಪ್ ಕುಮಾರ್ ಮತ್ತು ವರುಣ್ ಬಿ. ಇವರು ಜಿಲ್ಲಾ ರಾಜ್ಯಪಾಲರಿಂದ ಪ್ರಶಸ್ತಿಗಳನ್ನು ಸ್ವೀಕರಿಸಿದರು.

 

ವೃತ್ತಿ ಮಾರ್ಗದರ್ಶನ, ಪರಿಸರ, ಆರೋಗ್ಯ, ಶಿಕ್ಷಣ, ಜಲಸಂರಕ್ಷಣೆ ಹೀಗೆ ಒಟ್ಟು 8 ವಿಭಾಗಗಳಲ್ಲಿ ಮೂಡಿಗೆರೆ ಘಟಕವು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದ್ದಕ್ಕಾಗಿ ರೋಟರಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಗಳನ್ನು ಗಳಿಸಿದೆ.

ಈ ಸಂದರ್ಭದಲ್ಲಿ ಕಳೆದ ಸಾಲಿನ ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಬಿ.ಎನ್. ಓಂಕಾರ್, ಪ್ರಸ್ತುತ ಸಾಲಿನ ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ವಿನೋದ್ ಕುಮಾರ್ ಶೆಟ್ಟಿ, ಮೂಡಿಗೆರೆ ರೋಟರಿ ಹಾಲಿ ಅಧ್ಯಕ್ಷ ಕೆ.ಎಲ್.ಎಸ್. ತೇಜಸ್ವಿ, ನಿಯೋಜಿತ ಅಧ್ಯಕ್ಷ ನರೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ