October 5, 2024

ಮೂಡಿಗೆರೆ ಆಟೋ ಸಂಘಟನೆಗಳಿಂದ ನವೆಂಬರ್ 30ರಂದು ಗುರುವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ.

ಈ ಸಂಬಂಧ ಮಂಗಳವಾರ ಆಟೋ ಸಂಘದ ಪದಾಧಿಕಾರಿಗಳು ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಂಘದ ಗೌರವ ಅಧ್ಯಕ್ಷ ಎಂ.ಹೆಚ್. ಅಮರನಾಥ ಮಾತನಾಡಿ ; ಕನ್ನಡ ನಾಡು ನುಡಿ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸ ಪ್ರತಿಯೊಬ್ಬ ಕನ್ನಡಿಗರಿಂದ ಆಗಬೇಕಿದೆ, ಆ ಕಾರಣದಿಂದ ಕನ್ನಡ ಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸ್ವತಃಶ್ಚಲಿ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ತಾಲ್ಲೂಕು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ  ನವೆಂಬರ್ 30 ರಂದು ಗುರುವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ನಡೆಯಲಿದೆ. ಇದೇ ಮೊದಲ ಬಾರಿಗೆ ಆಟೋ ಸಂಘದಿಂದ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಮಧ್ಯಾಹ್ನ 3-30ಕ್ಕೆ ಭುವನೇಶ್ವರಿ ದೇವಿಯ ಸ್ತಬ್ಧಚಿತ್ರದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯನ್ನು ವಿಧಾನಪರಿಷತ್ತಿನ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಉದ್ಘಾಟಿಸಲಿದ್ದಾರೆ. ನಂತರ ಅಡ್ಯಂತಾಯ ರಂಗಮಂದಿರದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಉದ್ಘಾಟಿಸಲಿದ್ದಾರೆ ಎಂದರು.

ತಾಲ್ಲೂಕು ಆಟೋ ಚಾಲಕರ ಸಂಘದ ಅಧ್ಯಕ್ಷ ಯು.ಬಿ. ನಾಗೇಶ್ ಮಾತನಾಡಿ ; ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕಿ ನಯನ ಮೋಟಮ್ಮ, ಯುರೇಕಾ ಅಕಾಡೆಮಿ ಸಂಸ್ಥಾಪಕರಾದ ದೀಪಕ್ ದೊಡ್ಡಯ್ಯ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಗಣ್ಯರು, ಆಟೋ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ, ಉಪನ್ಯಾಸಕ ಡಾ. ಸಂಪತ್ ಬೆಟ್ಟಗೆರೆ ಇವರು ಕನ್ನಡ ನಾಡು ನುಡಿಯ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ಸಮಾಜ ಸೇವಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಸ್ವತಃಶ್ಚಲಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ನಗರ ಅಧ್ಯಕ್ಷ ಚಂದ್ರೇಶ್ ಮಾತನಾಡಿ ; ಕನ್ನಡ ನಾಡು ನುಡಿಯ ಬಗ್ಗೆ ಆಟೋ ಸಂಘ ಮೊದಲಿನಿಂದಲೂ ಅತಿಹೆಚ್ಚು ಕಾಳಜಿಯೊಂದಿಗೆ ಕರ‍್ಯನರ‍್ವಹಿಸುತ್ತಿದೆ. ಕನ್ನಡದ ನಾಮಫಲಕವನ್ನು ಅತಿಹೆಚ್ಚು ಬಳಕೆ ಮಾಡುವುದು ಆಟೋ ಚಾಲಕರು ಮತ್ತು ಮಾಲೀಕರು ಆಗಿದ್ದಾರೆ. ಆಟೋ ಚಾಲಕರೆಲ್ಲಾ ಸೇರಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದು, ಮೂಡಿಗೆರೆ ಮಾತ್ರವಲ್ಲದೇ ಆಲ್ದೂರು, ಬಣಕಲ್, ಗೋಣಿಬೀಡು, ಜನ್ನಾಪುರ ಗಳಿಂದಲೂ ಆಟೋ ಚಾಲಕರು, ಮಾಲೀಕರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಆದ್ದರಿಂದ ಎಲ್ಲಾ ಕನ್ನಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕೆಂದು ಕೋರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಆಟೋ ಸಂಘದ ಕಾರ್ಯದರ್ಶಿ ನಾಗರಾಜ್, ಉಪಾಧ್ಯಕ್ಷ ಜಯಾನಂದ, ಗಣೇಶ್, ಶ್ರೀನಿವಾಸ್, ರಾಜಣ್ಣ, ಹರೀಶ್, ಉಮೇಶ್, ಪ್ರಕಾಶ್ ಮುಂತಾದವರು ಇದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ