October 5, 2024

ಚಿಕ್ಕಮಗಳೂರು ನಗರದಲ್ಲಿರುವ ಜಿಲ್ಲಾ ಬಿ.ಜೆ.ಪಿ. ಕಛೇರಿ ಕಾರ್ಯದರ್ಶಿ ಮೇಲೆ ಅಪರಿಚಿತ ವ್ಯಕ್ತಿ ತೀವ್ರ ಹಲ್ಲೆ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ರಾತ್ರಿ ವೇಳೆ ಮಂಕಿ ಕ್ಯಾಪ್ ಧರಿಸಿಕೊಂಡು ಬಂದ ವ್ಯಕ್ತಿಯಿಂದ ಬಿಜೆಪಿ ಜಿಲ್ಲಾ ಕಚೇರಿ ಕಾರ್ಯದರ್ಶಿ ದುರ್ಗೇಶ್ ಎಂಬುವವರ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಚಿಕ್ಕಮಗಳೂರಿನ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಿಲ್ಲಾ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ದುರ್ಗೆಶ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಲೆ, ಮೂಗು, ಕೈಗೆ ಗಂಭೀರ ಗಾಯಗಳಾಗಿವೆ.

ರಾತ್ರಿ ವೇಳೆ ಸಿಸಿಟಿವಿಯಲ್ಲಿ ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಬಂದಿದ್ದ ದುಷ್ಕರ್ಮಿ. ಬಂದವನೇ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ನಾಗರಹಳ್ಳಿಯಲ್ಲಿರುವ ದುರ್ಗೇಶ್ ಅವರ ಮನೆಯಲ್ಲಿ ರಾತ್ರಿ ಸುಮಾರು 1 ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದ್ದ ದುರ್ಗೇಶ್ ರನ್ನ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಹಲ್ಲೆ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಸಿಟಿ ರವಿ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಹೆಚ್.ಸಿ. ಕಲ್ಮುರುಡಪ್ಪ ಅವರೊಂದಿಗೆ ದುರ್ಗೆಶ್ ಅವರ ಆರೋಗ್ಯ ವಿಚಾರಿಸಿದ್ದಾರೆ ಮತ್ತು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಯನ್ನು ಶೀರ್ಘ ಪತ್ತೆ ಹಚ್ಚುವಂತೆ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.

ಯಾವ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ, ವೈಯುಕ್ತಿ ವಿಚಾರದಲ್ಲಿ ಆಗಿದೆಯೋ ಅಥವಾ ರಾಜಕೀಯ ವಿಚಾರಕ್ಕಾಗಿ ಹಲ್ಲೆ ನಡೆಸಲಾಗಿದೆಯೋ ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದುಬರಬೇಕು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ