October 5, 2024

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ರಿ, ವತಿಯಿಂದ ಮೂಡಿಗೆರೆಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಮೂಡಿಗೆರೆ ಜೇಸಿ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀಮತಿ ಗೀತಾ ರಂಜನ್ ಅಜಿತ್ ಇವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಪ್ರಾದೇಶಿಕ ವಿಭಾಗದ ಜ್ಞಾನ ವಿಕಾಸ ಯೋಜನಾಧಿಕಾರಿಗಳಾದ ಶ್ರೀಮತಿ ರತ್ನಾ ಮೈಪಾಳ್ ಅವರು ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಸಿಗುವಂತ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಚಿಕ್ಕಮಗಳೂರು ಜಿಲ್ಲೆಯ ಹಿರಿಯ ಜಿಲ್ಲಾ ನಿರ್ದೇಶಕರಾದ ಪ್ರಕಾಶ್ ರಾವ್ ಮಾತನಾಡಿ ; ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ, ಮಹಿಳೆಯರಿಗೆ ಜ್ಞಾನ ವಿಕಾಸ ಏಕೆ ಬೇಕು ಎಂಬುದರ ಬಗ್ಗೆ ಉತ್ತಮವಾದ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದಂತ ಕಿರುಗುಂದ ಗ್ರಾಮ‌ಪಂಚಾಯಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಭಾಗ್ಯ ಲಕ್ಷ್ಮಣ್ ಗೌಡ ಮಾತನಾಡಿ : ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಮಹಿಳೆ ಸ್ವಾವಲಂಭನೆಯಿಂದ ಬದುಕು ಸಾಗಿಸಲು ಧರ್ಮಸ್ಥಳ ಗ್ರಾಮೀಭಿವೃದ್ಧಿ ಯೋಜನೆ ಪ್ರೇರಣೆ ನೀಡುತ್ತಿದೆ, ಮಹಿಳೆಯರು ಕೀಳರಿಮೆ ಬಿಟ್ಟು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮೂಡಿಗೆರೆ ಲೇಡಿ ಜೇಸಿ ಮಾಜಿ ಅಧ್ಯಕ್ಷೆ  ಶ್ರೀಮತಿ ಸುಚಿತ್ರ ಪ್ರಸನ್ನ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ಬೆಳವಣಿಗೆಗೆ ದಾರಿದೀಪವಾಗುತ್ತಿದ್ದಾರೆ. ಧರ್ಮಾಧಿಕಾರಿ ಡಿ. ವಿರೇಂದ್ರ ಹೆಗ್ಗೆಡೆಯವರ ದೂರದೃಷ್ಟಿಯಿಂದ ಇಂದು ರಾಜ್ಯದ ಲಕ್ಷಾಂತರ ಮಹಿಳೆಯರು ಇಂದು ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗಿದೆ. ಮಹಿಳೆಯರು ಆತ್ಮವಿಶ್ವಾಸದಿಂದ ಮುನ್ನಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ವಿಶೇಷವಾಗಿ ಪುಷ್ಪ ಗುಚ್ಛ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು,

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾದಿಕಾರಿಗಳಾದ ಶಿವನಾಂದ ಹಾಗೂ ವಲಯದ ಮೇಲ್ವಿಚಾರಕರಾದ ದಾಮೋದರ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಭಾರತಿ ಯಾದವ್ ಹಾಗೂ ವಿಚಕ್ಷಣಾದಿಕಾರಿ ಜಯಶ್ರೀ, ತಾಲ್ಲೂಕಿನ ಎಲ್ಲಾ ಸೇವಾ ಪ್ರತಿನಿಧಿಗಳು ಒಕ್ಕೂಟದ ಪದಾಧಿಕಾರಿಗಳು ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ