October 5, 2024

5 ರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಂದ ಭಾನುವಾರ ಚಿಕ್ಕಮಗಳೂರು ನಗರದಲ್ಲಿ ಸಂಭ್ರಮಾಚರಣೆ ನಡೆಯಿತು.

ಮಿಜೋರಾಂ ಹೊರತುಪಡಿಸಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಘಡ ಹಾಗೂ ತೆಲಂಗಾಣ ರಾಜ್ಯಗಳ ಮತ ಎಣಿಕೆ ಭಾನುವಾರ ನಡೆದಿದ್ದು, ನಾಲ್ಕರ ಪೈಕಿ ಮಧ್ಯಪ್ರದೇಶ, ರಾಜಸ್ಥಾನ ಹಾಗು ಛತ್ತೀಸ್ಘಡದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಜಿಲ್ಲಾ ಕಚೇರಿ ಪಾಂಚಜನ್ಯದಿಂದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಆಜಾದ್ ಪಾರ್ಕ್ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ವೇಳೆ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಬಿಜೆಪಿ ಸಿದ್ಧಾಂತಗಳನ್ನು ಮೆಚ್ಚಿ ಜನತೆ ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ತೆಲಂಗಾಣದಲ್ಲಿ ಸಹ ಪಕ್ಷ ಉತ್ತಮ ಸಾಧನೆ ಮಾಡಿದೆ. ಅಲ್ಲಿ ಕಾಂಗ್ರೆಸ್ನದ್ದು ಅಚಾನಕ್ ಗೆಲುವಾಗಿದೆ ಎಂದು ಹೇಳಿದರು.

ಚುನವಣೆಯ ಫಲಿತಾಂಶದಿಂದ ಮುಂಬರುವ ಲೋಕಸಭಾ ಚುನವಣೆ ಎದುರಿಸಲು ನಮ್ಮೆಲ್ಲಾ ಕಾರ್ಯಕರ್ತರಿಗೆ ಇನ್ನಷ್ಟು ಹುಮ್ಮಸ್ಸು ತಂದುಕೊಟ್ಟಿದೆ. ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿ ಆಗುವುದು ಖಚಿತ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವರಾಜಶೆಟ್ಟಿ ಮಾತನಾಡಿ, ಬಿಜೆಪಿ ಮೂರು ರಾಜ್ಯಗಳಲ್ಲಿ ನಿಚ್ಛಳ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ನೆಲಕಚ್ಚಿದೆ. ತೆಲಂಗಾಣದಲ್ಲೂ ನಿರೀಕ್ಷೆಗೆ ಮೀರಿ ಪಕ್ಷ ಸ್ಥಾನಗಳನ್ನು ಗಳಿಸಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ಗಡದಲ್ಲಿ ಚುನಾವಣಾ ಉಸ್ತುವಾರಿಗಳಾ ಕರ್ತವ್ಯ ನಿರ್ವಹಿಸಿದ ಮಾಜಿ ಶಾಸಕ ಸಿ.ಟಿ.ರವಿ, ಕೇಂದ್ರ ಸಚಿವರುಗಳಾದ ಶೋಭಾ ಕರಂದ್ಲಾಜೆ ಹಾಗೂ ಪ್ರಹ್ಲಾದ್ ಜೋಷಿ ಅವರನ್ನು ಅಭಿನಂದಿಸುತ್ತೇವೆ ಎಂದರು.

ಚಿತ್ರದುರ್ಗದ ಪ್ರಭಾರಿ, ಪಕ್ಷದ ಮುಖಂಡ ಸಿ.ಆರ್.ಪ್ರೇಂಕುಮಾರ್ ಮಾತನಾಡಿ, ದೇಶದ ಜನತೆ ನರೇಂದ್ರ ಮೋದಿ ಅವರ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿರುವುದು ಇಂದಿನ ಫಲಿತಾಂಶದಿಂದ ವ್ಯಕ್ತವಾಗುತ್ತಿದೆ. ಮುಂದೆ ಕರ್ನಾಟಕದಲ್ಲೂ ಇದೇ ವಾತಾವರಣ ಬರಲಿದೆ. ೨೮ ಕ್ಕೆ ೨೮ ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ತಿಳಿಸಿದರು.

ಪಕ್ಷದ ಮುಖಂಡ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ದೇಶಕ್ಕೆ ಸುಭದ್ರ ಮತ್ತು ನೆಮ್ಮದಿಯ ಸರ್ಕಾರ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎನ್ನುವುದು ಫಲಿತಾಂಶದ ಮುನ್ಸೂಚನೆಯಾಗಿದೆ. ಮೂರೂ ರಾಜ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಮೋದಿ ಕೈ ಬಲಪಡಿಸಿರುವ ಹಿನ್ನೆಲೆಯಲ್ಲಿ ಅಲ್ಲಿನ ಮತದಾರರಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ನಗರ ಬಿಜೆಪಿ ಅಧ್ಯಕ್ಷ ಮಧುಕುಮಾರ ರಾಜ್ ಅರಸ್, ನಗರಸಭೆ ಮಾಜಿ ಅಧ್ಯಕ್ಷ ಮುತ್ತಯ್ಯ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಮುಖಂಡರುಗಳಾದ ನರೇಂದ್ರ, ಪ್ರವೀಣ್,  ರೇವನಾಥ್, ಹಿರೇಮಗಳೂರು ಕೇಶವ, ಮಂಜುನಾಥ್ ಇತರರು ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ