October 5, 2024

????????????????????????????????????

ಪ್ರತಿಯೊಬ್ಬರು ಡಾ. ಬಿ.ಆರ್. ಅಂಬೇಡ್ಕರ್ ರವರ ಆದರ್ಶಗಳನ್ನು ಪಾಲಿಸಿದರೆ ಅವರಿಗೆ ಗೌರವ ನೀಡಿದಂತಾಗುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಇಂದು ಹಮ್ಮಿಕೊಂಡಿದ್ದ, ಡಾ. ಬಿ.ಆರ್. ಅಂಬೇಡ್ಕರ್‌ರವರ ೬೭ನೇ ಪರಿನಿರ್ವಾಣ ದಿನ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ದೀಪ ಬೆಳಗುವುದರ ಮೂಲಕ ಗೌರವ ಸಲ್ಲಿಸಿ ಮಾತನಾಡುತ್ತಿದ್ದರು.

ಡಾ. ಬಿ.ಆರ್. ಅಂಬೇಡ್ಕರ್‌ರವರ ಆದರ್ಶಗಳು ನೆನೆಯಲು ಬರಿ ಡಿಸೆಂಬರ್ ೦೬ ಕ್ಕೆ ಸೀಮಿತಗೊಳ್ಳದೆ. ಪ್ರತಿನಿತ್ಯ ಅವರ ಬದುಕು ಹಾಗೂ ಅವರ ಕೊಡುಗೆ ಸದಾ ಸ್ಮರಿಸುವುದರ ಜೊತೆಗೆ ತಮ್ಮ ತಮ್ಮ ಜೀವನದಲ್ಲಿ ಆಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಚಿಂತಿಸುವುದು ಬಹಳ ಮುಖ್ಯ ಎಂದ ಅವರು ವಿದ್ಯಾರ್ಥಿಗಳಿಗೆ ಈ ಬಗ್ಗೆ ಹೆಚ್ಚು ಹೆಚ್ಚು ತಿಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು. ಸಮಾಜದ ಮುಖಂಡರಾದ ಕೆ.ಟಿ. ರಾಧಕೃಷ್ಣ ಅವರು ಡಾ. ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ. ಗೋಪಾಲಕೃಷ್ಣ, ನಗರ ಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಕೃಷ್ಣ ಮೂರ್ತಿ, ಉಪ ವಿಭಾಗಾಧಿಕಾರಿ ರಾಜೇಶ್ ಹಾಗೂ ಇಲಾಖೆಗಳ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ವಿವಿಧ ರಾಜಕೀಯ ಪಕ್ಷಗಳು ಮುಖಂಡರುಗಳು ವಿವಿಧ ಸಂಘಟನೆಗಳು, ಸಮುದಾಯದ ಮುಖಂಡರುಗಳು ಸಾರ್ವಜನಿಕರು ಭಾಗವಹಿಸಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಯೋಗೇಶ್ ಎಲ್ಲರನ್ನು ಸ್ವಾಗತಿಸಿ ವಂದಿಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ