October 5, 2024

ಚಿಕ್ಕಮಗಳೂರು ನಗರದಲ್ಲಿ ಇತ್ತೀಚೆಗೆ ನಡೆದ ವಕೀಲರು ಮತ್ತು ಪೋಲೀಸರ ನಡುವಿನ ಸಂಘರ್ಷದ ಘಟನೆ ಹಿನ್ನೆಲೆಯಲ್ಲಿ ಪೋಲೀಸರಿಗೆ ಕಾನೂನಾತ್ಮಕ ಕರ್ತವ್ಯ ನಿರ್ವಹಿಸಲು ಆತ್ಮಸ್ಥೈರ್ಯ ತುಂಬಿ ನೈತಿಕ ಬೆಂಬಲ ನೀಡುವಂತೆ ಒತ್ತಾಯಿಸಿ ಜಿಲ್ಲಾ ನಿವೃತ್ತ ಪೋಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಿದೆ.

ಸಂಘದ ಅಧ್ಯಕ್ಷ ಪಂಚಾಕ್ಷರಯ್ಯ ಮಾತನಾಡಿ ಕಾನೂನಿನ ಅರಿವಿದ್ದರೂ ಸಹ ವಕೀಲರಾಗಿ ಕಾನೂನು ಉಲ್ಲಂಘನೆ ಮಾಡಿ ವಿನಾಕಾರಣ ಕರ್ತವ್ಯ ನಿರತ ಪೋಲೀಸರ ಮೇಲೆ ಪ್ರಕರಣ ದಾಖಲಿಸಿ ಪೋಲೀಸರನ್ನು ಅಮಾನತು ಮಾಡಿರುವ ಕ್ರಮವನ್ನು ಖಂಡಿಸಿದ್ದಾರೆ.

ಮೋಟಾರು ವಾಹನ ಕಾಯಿದೆಯನ್ವಯ ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡುವುದು ಅಪರಾಧ ಎಂದು ತಿಳಿದಿರುವ ವಕೀಲರು ಅಪರಾಧವೆಸಗಿದ ವ್ಯಕ್ತಿಗೆ ನ್ಯಾಯಾಲಯ ದಂಡ ಕಟ್ಟುವಂತೆ ತೀರ್ಪು ನೀಡಿರುವ ಅರಿವಿದ್ದರೂ ಅದನ್ನೆಲ್ಲಾ ಧಿಕ್ಕರಿಸಿ ಬೈಕ್ ಚಾಲನೆ ಮಾಡುತ್ತಿದ್ದದ್ದನ್ನು ಕಂಡ ಪೋಲೀಸರು ಪ್ರಶ್ನಿಸಿದಕ್ಕೆ ವಾಗ್ವಾದಕ್ಕಿಳಿದಿದ್ದು ಘಟನೆಗೆ ಕಾರಣವಾಗಿದೆ ಆದ್ದರಿಂದ ಯಾವುದೇ ತಪ್ಪು ಮಾಡದ ಪೋಲೀಸರಿಗೆ ನೈತಿಕ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು , ಸದಸ್ಯರು ಹಾಜರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ