October 5, 2024

ಅವಿವಾಹಿತ ನಿವೃತ್ತ ಯೋಧರೊಬ್ಬರಿಗೆ ಮದುವೆಯ ಆಸೆ ತೋರಿಸಿ, ಬೆದರಿಕೆಯೊಡ್ಡಿ ನಗದು ಮತ್ತು ಚೆಕ್ ಅನ್ನು ಅಪಹರಿಸಿದ್ದ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ವಂಚನೆಗೊಳಗಾದ ನಿವೃತ್ತ ಯೋಧನನ್ನು ಕೇರಳದ ಎರ್ನಾಕುಲಂ ಜಿಲ್ಲೆಯ ನಿವಾಸಿ ಜಾನ್ ಮ್ಯಾಥ್ಯು(64) ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಿವಾಸಿ ಅಬ್ದುಲ್ ಬಶೀರ್ (29) ಕಡಬ ನಿವಾಸಿ ಸಾದಿಕ್ (30) ಎಂಬವರನ್ನು ಕೊಡಗು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಆರೋಪಿ ಫೈಝಲ್ ಈಗಾಗಲೇ ಮೈಸೂರು ನಗರದಲ್ಲಿ ನಡೆದ ಅಪರಾಧ ಪ್ರಕರಣವೊಂದರಲ್ಲಿ ಬಂಧಿಯಾಗಿ ಪೊಲೀಸರ ವಶದಲ್ಲಿದ್ದಾನೆ. ತಲೆ ಮರೆಸಿಕೊಂಡಿರುವ ಆರೋಪಿ ಅಮೀರ್ ಎಂಬಾತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ 3 ಮೊಬೈಲ್‌ಗಳು, ರೂ.1,05,000 ನಗದು ಮತ್ತು ರೂ. 2,10,000 ಮೌಲ್ಯದ ಚೆಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ವಂಚನೆಗಾಗಿ ನಕಲಿ ವಧುವನ್ನು ಹುಡುಕಿ ಮದುವೆಯನ್ನೇ ಮಾಡಿಸಿದ್ದರು.

ಅವಿವಾಹಿತರಾಗಿದ್ದ ನಿವೃತ್ತ ಯೋಧ ಜಾನ್ ಮ್ಯಾಥ್ಯು ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಫೈಝಲ್ ಮ್ಯಾಥ್ಯು ಅವರನ್ನು ಮದುವೆಯಾದರೆ ಸಂತೋಷದಿಂದ ಜೀವನ ಸಾಗಿಸಬಹುದು ಎಂದು ಪುಸಲಾಯಿಸಿ ಮದುವೆಯಾಗುವಂತೆ ಹುರಿದುಂಬಿಸಿದ್ದಾನೆ ಎನ್ನಲಾಗಿದೆ. ಫೈಝಲ್, ತನ್ನ ಪರಿಚಯದ ಹುಡುಗಿಯನ್ನು ಮದುವೆ ಮಾಡಿಕೊಡುವುದಾಗಿ ನಂಬಿಸಿ ನವೆಂಬರ್ 26 ರಂದು ಜಾನ್ ಮ್ಯಾಥ್ಯು ಅವರನ್ನು ಮಡಿಕೇರಿ ನಗರದ ಹೋಂಸ್ಟೇಯೊಂದಕ್ಕೆ ಕರೆಸಿದ್ದಾನೆ. ಅಲ್ಲಿ ಅಬ್ದುಲ್ ಬಶೀರ್, ಸಾದಿಕ್ ಹಾಗೂ ಅಮೀರ್ ಎಂಬವರು ಸೇರಿ ಮಹಿಳೆಯೊಬ್ಬರನ್ನು ತೋರಿಸಿ ಮದುವೆ ಮಾಡಿಸಿ ಅಲ್ಲೇ ತಂಗಲು ಅವಕಾಶ ಮಾಡಿಕೊಟ್ಟಿದ್ದಾರೆ.

ಅದೇ ದಿನ ಸಂಜೆ ನಾಲ್ವರು ಆರೋಪಿಗಳು ಮದುವೆಯ ಫೋಟೋಗಳನ್ನು ಕುಟುಂಬದವರಿಗೆ ಹಸ್ತಾಂತರಿಸುವುದಾಗಿ ಜಾನ್ ಮ್ಯಾಥ್ಯು ಅವರಿಗೆ ಬ್ಲಾಕ್‌ಮೇಲ್ ಮಾಡಿ 10 ಲಕ್ಷ ರೂ. ನಗದು ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಜಾನ್ ಮ್ಯಾಥ್ಯು ಅವರು ಆರೋಪಿಗಳಿಗೆ 8ಲಕ್ಷ ರೂ. ನಗದು ಹಾಗೂ ಉಳಿದ ಮೊತ್ತಕ್ಕೆ ಚೆಕ್ ನೀಡಿದ್ದಾರೆ ಎಂದು ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದೆ.

ತಾನು ವಂಚನೆಗೊಳಗಾಗಿರುವುದನ್ನು ಮನಗಂಡ ಜಾನ್ ಮ್ಯಾಥ್ಯು ಅವರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.  ತಲೆಮರೆಸಿಕೊಂಡಿರುವ ಆರೋಪಿ ಅಮೀರ್ ನ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಕೊಡಗು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ