October 5, 2024

ದತ್ತಜಯಂತಿ ಆಚರಣೆ ಹಿನ್ನಲೆಯಲ್ಲಿ ಡಿಸೆಂಬರ್ 22 ರಿಂದ 27ರವರೆಗೆ 6 ದಿನಗಳ ಕಾಲ ಜಿಲ್ಲಾಡಳಿತ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ಸಂಪೂರ್ಣ ನಿಷೇಧ ಹೇರಿದೆ.

ಡಿಸೆಂಬರ್ 17 ರಿಂದ 26 ರವರೆಗೆ ಚಿಕ್ಕಮಗಳೂರಿನಲ್ಲಿ ನಡೆಯುವ ದತ್ತ ಜಯಂತಿ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ದತ್ತಪೀಠ, ಮುಳ್ಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯದಾರ ಸೀತಾಳ್ಳಯ್ಯನಗಿರಿ ಸೇರಿದಂತೆ ಹಲವು ತಾಣಗಳಿಗೆ ಜಿಲ್ಲಾಡಳಿತ ಪ್ರವಾಸಿಗರನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಡಿ.22ರಿಂದ 26 ರ ವರೆಗೆ ನಗರದಾದ್ಯಂತ ಶೋಭಾ ಯಾತ್ರೆ, ದತ್ತ ಪೀಠದಲ್ಲಿ ಸಾವಿರಾರು ಮಾಲಾಧಾರಿಗಳು ಆಗಮಿಸುವ ಹಿನ್ನೆಲೆ ಜಿಲ್ಲಾಡಳಿತ ಆರು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ಹೇರಿದೆ.

ಇನ್ನು ಚಿಕ್ಕಮಗಳೂರು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಈ ಎಲ್ಲಾ ಪ್ರವಾಸಿ ತಾಣಗಳಿಗೆ ನಿಷೇಧ ಹೇರಿರುವುದರಿಂದ ವರ್ಷಾಂತ್ಯದಲ್ಲಿ ಗಿರಿ ಪ್ರದೇಶಗಳಿಗೆ ಪ್ರವಾಸದ ಪ್ಲಾನ್ ಮಾಡಿರುವ ರಾಜ್ಯ ಮತ್ತು ಹೊರರಾಜ್ಯಗಳ ಪ್ರವಾಸಿಗರಿಗೆ ನಿರಾಸೆ ಉಂಟಾಗಿದೆ.

ಇನ್ನು ಈ ಬಾರಿ ದತ್ತ ಜಯಂತಿಗೆ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಸುಮಾರು 20 ಸಾವಿರಕ್ಕೂ ಹೆಚ್ಚು ದತ್ತಮಾಲಾಧಾರಿಗಳು ಆಗಮಿಸುವ ನಿರೀಕ್ಷೆಯಿದ್ದು, ರಾಜ್ಯದ ಪ್ರಮುಖ ಸಾಧು ಸಂತರು ಭಾಗವಹಿಸಲಿದ್ದಾರೆ. ಈ ಬಾರಿಯ ದತ್ತ ಜಯಂತಿಯನ್ನು ದೊಡ್ಡಮಟ್ಟದಲ್ಲಿ ಉತ್ಸವದಂತೆ ಆಚರಿಸಲು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನಿರ್ಧರಿಸಿದೆ.

ಚಿಕ್ಕಮಗಳೂರು ಜಿಲ್ಲೆ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ದತ್ತ ಜಯಂತಿಯನ್ನು ಆಚರಿಸಲು ಜಿಲ್ಲಾಡಳಿತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಶ್ರೀಮತಿ ಮೀನಾ ನಾಗರಾಜ್ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ