October 5, 2024

ಮೂಡಿಗೆರೆ ತಾಲೂಕಿನ ಮುರಾರ್ಜಿ ವಸತಿ ಶಾಲೆಯಲ್ಲಿ ರೋಟರಿ ಸಂಸ್ಥೆ ವತಿಯಿಂದ ಇತ್ತೀಚೆಗೆ ಮಾನಸಿಕ ಆರೋಗ್ಯ ಮತ್ತು ಶಿಕ್ಷಣ ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಮಾನಸಿಕ ತಜ್ಞ ಡಾ. ವಿನಯ್‍ಕುಮಾರ್ ಅವರು, ಮಕ್ಕಳಿಗೆ ನೆನಪಿನ ಶಕ್ತಿ ಹೆಚ್ಚಿಸುವ ಬಗ್ಗೆ, ಪರೀಕ್ಷೆ ಸಮಯದ ಆತಂಕ ನಿವಾರಿಸುವ ಬಗ್ಗೆ ಹಾಗೂ ಮನಸ್ಸಿನ ಸ್ಥಿತಿಯನ್ನು ಕಾಪಾಡಿಕೊಳ್ಳುವ ಬಗ್ಗೆ ಅರಿವು ಮೂಡಿಸಿದರು. ನಂತರ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಕೆ.ಎಲ್.ಎಸ್.ತೇಜಸ್ವಿ ವಹಿಸಿದ್ದರು. ಅಸಿಸ್ಟಂಟ್ ಗವರ್ನರ್ ವಿನೋದ್ ಕುಮಾರ್ ಶೆಟ್ಟಿ, ರೋಟರಿ ಪೂರ್ವಾಧ್ಯಕ್ಷರಾದ ಬಿ.ಆರ್.ಯತೀಶ್, ಮಂಜುನಾಥ್, ಪ್ರದೀಪ್ ಕುಮಾರ್, ಪ್ರಸಾದ್, ದಿನೇಶ್, ಹಾಸ್ಟೆಲ್ ವಾರ್ಡನ್ ಪ್ರಸನ್ನ ಕುಮಾರ್, ಪ್ರದೀಪ್ ಹಾಗೂ ಮುರಾರ್ಜಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ