October 5, 2024

ಸಂಸತ್ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕೊನೆಗೂ ಮೌನ ಮುರಿದಿದ್ದು, ನಾನು ದೇಶಪ್ರೇಮಿನಾ, ದೇಶದ್ರೋಹಿನಾ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆಂದು  ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಭಾನುವಾರ ಬೆಳಗ್ಗೆ ಮಾತನಾಡಿರುವ ಅವರು, ದೇಶದ್ರೋಹಿನಾ, ದೇಶಪ್ರೇಮಿನಾ ಎಂಬುದನ್ನು ಬೆಟ್ಟದ ಮೇಲಿರುವ ಚಾಮುಂಡಿ ತಾಯಿ, ಕೊಡಗಿನ ಕಾವೇರಿ ತಾಯಿ. ನನ್ನ ಓದುಗರು, ಮೈಸೂರು ಕೊಡಗಿನ ಜನ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆಂದು ಹೇಳಿದರು.

ಸಂಸತ್ ಒಳಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಪ್ರತಾಪ್ ಸಿಂಹ ಅವರ ಪಾಸ್ ಪಡೆದು ಒಳಗೆ ಹೋಗಿದ್ದ ಬಗ್ಗೆ  ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದ್ದಕ್ಕೆ ಆ ಪ್ರಶ್ನೆ ಬಿಟ್ಟು ಬೇರೆ ಏನಾದರೂ ಇದ್ದರೆ ಕೇಳಿ ಎಂದು ಮೂರು ಮೂರು ಬಾರಿ ಹೇಳಿ, ಆ ವಿಚಾರದಲ್ಲಿ ಯಾವುದೇ ವಿವರಣೆ ಕೊಡುವುದಿಲ್ಲ ಎಂದು ಉತ್ತರಿಸಿದರು.

”2024ರ ಏಪ್ರಿಲ್‌ನಲ್ಲಿ ನಡೆಯುವಂತಹ ಲೋಕಸಭಾ ಚುನಾವಣೆಯಲ್ಲಿ ಜನರು ನನ್ನ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಏನು ಎಂಬುದನ್ನು ಅಂತಿಮವಾಗಿ ತೀರ್ಮಾನ ಕೊಡಬೇಕಾದವರು ನನ್ನ ಕ್ಷೇತ್ರದ ಜನ. ಅದರಾಚೆಗೆ ನಾನು ಏನೂ ಹೇಳುವುದಿಲ್ಲ” ಎಂದು ತಿಳಿಸಿದರು.

ಸಿದ್ದರಾಮಯ್ಯ ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದರ ಕುರಿತ ಪ್ರಶ್ನೆಗೆ ಉತ್ತರಿಸಿ, ತಮ್ಮನ್ನು ಸಮರ್ಥಿಸಿಕೊಳ್ಳಲು ಸಿಎಂ ಈ ವಿಚಾರದಲ್ಲಿ ಪ್ರಧಾನಿಯನ್ನು ಎಳೆದು ತಂದಿದ್ದಾರೆ. ಪ್ರಧಾನಿಯವರು ಸರ್ಕಾರದ ವಿಮಾನದಲ್ಲೇ ಓಡಾಡುತ್ತಾರೆ. ಖಾಸಗಿ ಜೆಟ್‌ನಲ್ಲಿ ತಮ್ಮ ಪಟಾಲಂ, ಛೇಲಾ, ದುಡ್ಡು ಕೊಡುವವರ ಜೊತೆ ಪ್ರಧಾನಿ ಓಡಾಡುವುದಿಲ್ಲ ಎಂದು ತಿರುಗೇಟು ನೀಡಿದರು.

ದೇಶಕ್ಕೆ ಒಬ್ಬರೇ ಪ್ರಧಾನಿ ಇರುವುದು. ದೇಶದಲ್ಲಿ 29 ಜನ ಮುಖ್ಯಮಂತ್ರಿಗಳಿದ್ದಾರೆ. ನೀವು ಸುಖಾ ಸುಮ್ಮನೆ ಪ್ರಧಾನಿಗೆ ನಿಮ್ಮನ್ನು ನೀವು ಹೋಲಿಕೆ ಮಾಡಿಕೊಳ್ಳಬೇಡಿ. ಈ ರೀತಿ ಹೋಲಿಕೆ ಮಾಡಿಕೊಳ್ಳುವುದನ್ನು ಮೊದಲು ಬಿಡಿ ಎಂದು ಕಿಡಿಕಾರಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ